ಜೇನುಗೂಡು ಟ್ರಸ್ಟ್‌ ಶೈಕ್ಷಣಿಕ ಸೇವೆ ಶ್ಲಾಘನೀಯ: ಸತೀಶಗೌಡ

ಜೇನುಗೂಡು ಟ್ರಸ್ಟ್‌ ಶೈಕ್ಷಣಿಕ ಸೇವೆ ಶ್ಲಾಘನೀಯ: ಸತೀಶಗೌಡ

ವರದಿ : ನಾರಾಯಣ ಸ್ವಾಮಿ ಸಿ ಎಸ್
ಹೊಸಕೋಟೆ ಸೆ 2 ತಾಲೂಕಿನಲ್ಲಿ ಜೇನುಗೂಡು ರೂರಲ್ ಡೆವಲಪ್ ಮೆಂಟ್ ಆ್ಯಂಡ್ ಕಲ್ಬರಲ್ ಟ್ರಸ್ಟ್ ಶಿಕ್ಷಣ ಇಲಾಖೆಯ ಕಾರ್ಯಗಳೊಂದಿಗೆ ಕೈಜೋಡಿಸಿ ಶೈಕ್ಷಣಿಕ ಸೇವೆಗಳನ್ನು ನೀಡುತ್ತಾ ಬರುತ್ತಿರುವುದು ಶ್ಲಾಘನೀಯ ವಿಚಾರ ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ.ವಿ.ಸತೀಶಗೌಡ ಹೇಳಿದರು.

ಸೂಲಿಬೆಲೆ ಹೋಬಳಿ ಜನತಾ ಕಾಲೋನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ದತ್ತು ಸ್ವೀಕಾರ ಕಾರ್ಯಕ್ರಮ ಹಾಗೂ ಶಾಲಾ ಮಕ್ಕಳಿಗೆ ಶೈಕ್ಷಣಿಕ ಪೂರಕ ಪರಿಕರಗಳ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಶಾಲೆಗೆ ಅಗತ್ಯವಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಶೀಘ್ರದಲ್ಲಿಯೇ ಕೊಡಿಸಲಾಗುವುದು ಹಾಗೂ ಶಾಲೆಗೆ ಶಾಲೆಗೆ ಅಗತ್ಯವಿರುವ ಸುಣ್ಣ, ಬಣ್ಣವನ್ನು ಸಹ ವೈಯಕ್ತಿಕವಾಗಿ
ಮಾಡಿಸಿ ಕೊಡಲಾಗುವುದು ಎಂದು ಹೇಳಿದರು.

ಕ್ಷೇತ್ರ ಸಂಪನ್ಮೂಲ ವ್ಯಕ್ತಿ ನಾಗರಾಜ್ ಮಾತನಾಡಿ, ಟ್ರಸ್ಟಿನ ಮಹಾಪೋಷಕರಾದ ಬಿ.ವಿ.ಸತೀಶಗೌಡರ ಮಾರ್ಗದರ್ಶನದಲ್ಲಿ ಶಿಕ್ಷಣಕ್ಕೆ ಸಂಬಂಧಪಟ್ಟಂತೆ ಕಂಪನಿಗಳ ಸಿ.ಎಸ್. ಅರ್‌ಅನುದಾನದಲ್ಲಿ ಕಟ್ಟಡ ನಿರ್ಮಾಣ ಮಾಡಿಸಿಕೊಟ್ಟಿದ್ದು, ನಿರಂತರ 5 ವರ್ಷಗಳ ಕಾಲ
ಟ್ರಸ್ಟ್ ಶಿಕ್ಷಣ ಕ್ಷೇತ್ರಕ್ಕೆ ಸಹಕಾರಿಯಾಗಿದೆ ಎಂದರು.

ಜೇನುಗೂಡು ರೂರಲ್ ಡೆವಲಪ್‌ಮೆಂಟ್ ಹಾಗೂ ಸೂಲಿಬೆಲೆ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಬ್ಯಾಂಕ್ ಸಹಯೋಗದಲ್ಲಿ 75 ಮಕ್ಕಳಿಗೆ ತಟ್ಟೆ, ಲೋಟ ವಿತರಣೆ, ಟ್ರಸ್ಟಿನ ಉಪಾಧ್ಯಕ್ಷ ಕೆ.ಎಂ.ಚೌಡೇಗೌಡ ವತಿಯಿಂದ ಗುರುತಿನ ಚೀಟಿ ವಿತರಣೆ ಹಾಗೂ ಟ್ರಸ್ಟಿನ ವತಿಯಿಂದ ಲೇಖನ ಸಾಮಗ್ರಿ ಗಳನ್ನು ವಿತರಿಸಲಾಯಿತು.

ಉಪಾಧ್ಯಕ್ಷ ಕೆ.ಎಂ.ಚೌಡೇಗೌಡ, ಟ್ರಸ್ಟ್ ನ ಸಂಘಟನಾ ಕಾರ್ಯದರ್ಶಿ ಎಸ್.ಕೆ. ವಸಂತಕುಮಾರ್‌ ಮಾತನಾಡಿ ಟ್ರಸ್ಟಿನ ಉಪಾಧ್ಯಕ್ಷ ಕೆ.ಎಂ.ಚೌಡೇಗೌಡ, ಪ್ರಧಾನ ಕಾರ್ಯದರ್ಶಿ ಬೆಟ್ಟಹಳ್ಳಿ ಗೋಪಿನಾಥ್, ಬಡ್ತಿ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಶ್ರೀನಿವಾಸ್, ಸಮೂಹ ಸಂಪನ್ಮೂಲ ವ್ಯಕ್ತಿ ಕೆ.ಎನ್.ಮಂಜುನಾಥ್, ಸಹಕಾರ ಬ್ಯಾಂಕ್ ಸಿಇಒ ಶ್ರೀನಿವಾಸಮೂರ್ತಿ, ನಿರ್ದೇಶಕರಾದ ನಾರಾಯಣಸ್ವಾಮಿ, ಮುತ್ತುರಾಜ್, ಸೈಯದ್‌ ಮಹಬೂಬ್, ಶಾಲಾ ಅಧ್ಯಕ್ಷರು ರವಿಕುಮಾರ್, ಪತ್ರಕರ್ತ ಅತ್ತಿಬೆಲೆ ಮಂಜುನಾಥ್, ಸಮಾಜ ಸೇವಕರಾದ ಹಸಿಗಾಳ ಜಗದೀಶ್, ಚಿಕ್ಕಹರಳಗೆರೆ ಜಗದೀಶ್, ಮುಖ್ಯ ಶಿಕ್ಷಕಿ ಪದ್ದಿನಿ, ಗೌರಮ್ಮ, ತಬಸಮ್, ಪವಿತ್ರ, ಸಾಹಿದಾಬಿ ಮತ್ತು ಇತರರು ಪಾಲ್ಗೊಂಡಿದ್ದರು.

  • santhosha ram

    “ಮೆಟ್ರೋ ನ್ಯೂಸ್ 7” ಚಾನೆಲ್ ಸ್ಥಳೀಯ ವಿಚಾರಗಳಿಗೆ ಸಂಬಂಧಪಟ್ಟ ಸುದ್ದಿಯಿಂದ ಹಿಡಿದು ರಾಜ್ಯಮಟ್ಟದ ಸುದ್ದಿಗಳನ್ನು ಜನರಿಗೆ ಮುಟ್ಟಿಸುವ ಸಣ್ಣ ಪ್ರಯತ್ನವಾಗಿದೆ. 🙏

    Related Posts

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ವರದಿ : ಲೋಕೇಶ್ ನಾಯ್ಕ .ಭಟ್ಕಳ. ಭಟ್ಕಳ .ನವೆಂಬರ್‌ 24.ಸರಕಾರಿ ತಾಲೂಕಾ ಆಸ್ಪತ್ರೆಯಲ್ಲಿ ಭಾನುವಾರ ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ…

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ವರದಿ: ಲೋಕೇಶ್ ನಾಯ್ಕ.ಭಟ್ಕಳ. ನಟ ಡಾಲಿ ಧನಂಜಯ  ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್. ಭಟ್ಕಳ: ನ.23ಮುರುಡೇಶ್ವರದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ವಿಶ್ವ ಮೀನುಗಾರಿಕಾ ದಿನಾಚರಣೆ(ಮತ್ರ್ಯಮೇಳ) ಕಾರ್ಯಕ್ರಮಕ್ಕೆ ಶನಿವಾರ ಆಗಮಿಸಿದ ಡಾಲಿ ಧನ ಧನಂಜಯ ನೇತ್ರಾಣಿ ದ್ವೀಪದಲ್ಲಿ ಸ್ಕೂಬ್ ಡೈವಿಂಗ್ ಮಾಡುವ…

    You Missed

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ