ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ನಾನಾ ಕ್ರಮ

ವರದಿ ನಾರಾಯಣಸ್ವಾಮಿ ಸಿ.ಎಸ್

ಹೊಸಕೋಟೆ ಸೆ. 11  :
ಪ್ರಸ್ತುತ ದಿನಗಳಲ್ಲಿ ಮಕ್ಕಳಿಗೆ ಪ್ರೀತಿ ವಿಶ್ವಾಸದಿಂದ ಶಿಕ್ಷಣ ನೀಡಬೇಕಿದೆ. ಕಾಲಕ್ಕೆ ತಕ್ಕಂತೆ ಶಿಕ್ಷಣ ವ್ಯವಸ್ಥೆಯಲ್ಲೂ ಬದಲಾ ವಣೆ ಆಗಬೇಕು. ಕರ್ನಾಟಕದಲ್ಲಿ ಕನ್ನಡ ಭಾಷೆಯಲ್ಲಿ ಮಕ್ಕಳು ನಪಾಸಾಗುತ್ತಿರುವುದು ತೀವ್ರ ಕಳವಳಕಾರಿಯಾಗಿದೆ

ಶಿಕ್ಷಕರು ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಿದ್ದು, ತಾಲೂಕಿನಲ್ಲಿ ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಹಲವು ಪರಿಣಾಮಕಾರಿ ಯೋಜನೆಗಳನ್ನು ಅನುಷ್ಠಾನ ಮಾಡಲಾಗುವುದು ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು ಹೊಸಕೋಟೆ ಖಾಸಗಿ ಕಲ್ಯಾಣ ಮಂಟಪದಲ್ಲಿ ಸೋಮವಾರ ಹಮ್ಮಿ ಕೊಂಡಿದ್ದ ತಾಲೂಕು ಮಟ್ಟದ ಶಿಕ್ಷಕರ  ದಿನಾಚರಣೆಯಲ್ಲಿ ಮಾತನಾಡಿದರು. ಸರ್ವಪಲ್ಲಿ ಅವರು ರಾಧಾಕೃಷ್ಣನ್ ತತ್ವಜ್ಞಾನಿ ಯಾಗಿದ್ದು, ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡುವಲ್ಲಿ ಸಾವಿತ್ರಿ ಬಾಯಿಪುಲೆ ಅವರ ಕ್ರಾಂತಿಕಾರ ಹೆಜ್ಜೆ ನಮಗೆಲ್ಲ ಮಾರ್ಗದರ್ಶನವಾಗಬೇಕು ಎಂದರು

ಉಪನ್ಯಾಸಕ ಅಬ್ದುಲ್ ರಜಾಕ್ ಮಾತನಾಡಿ, ದೇಶದ ಮೊಟ್ಟ ಮೊದಲ ಶಿಕ್ಷಕಿ ಸಾವಿತ್ರಿಭಾಯಿಪುಲೆ ಅವರಾಗಿದ್ದಾರೆ. ಅನೇಕ ಮಹನೀಯರು ಈ ದೇಶದಲ್ಲಿ ಶಿಕ್ಷಣ ನೀಡಲು ತಮ್ಮ ಜೀವನ ತ್ಯಾಗ ಮಾಡಿದ್ದಾರೆ. ಪ್ರಾಮಾಣಿಕ ಮಕ್ಕಳನ್ನು ಈ ಸಮಾಜಕ್ಕೆ ಕೊಡುಗೆಯಾಗಿ ಶಿಕ್ಷಕರು ನೀಡಬೇಕು. ಮಕ್ಕಳಲ್ಲಿ ಮೌಲ್ಯವನ್ನು ಕಲಿಸಬೇಕು ಎಂದರು .

ಶಿಕ್ಷಣಾಧಿಕಾರಿ ಪದ್ಮನಾಭ್, ಹಿರಿಯ ಮುಖಂಡ ಬಿ.ಎನ್ ಗೋಪಾಲಗೌಡ ಮಾತನಾಡಿದರು. ಸರಕಾರಿ ಶಾಲೆ ದತ್ತ ಪಡೆದು ಸೇವೆ ಸಲ್ಲಿಸುತ್ತಿರುವ ಜೇನುಗೂಡು ಟ್ರಸ್ಟ್ ಕಾವ್ಯವನ್ನು ಪ್ರಶಂಸೆ ಪತ್ರ ನೀಡಿ ಅಭಿನಂದಿಸಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಡೆದ ಮೂವರು ಶಿಕ್ಷಕರನ್ನು ಗೌರವಿಸಲಾಯಿತು ಮತ್ತು
ಹೊಸಕೋಟೆ ತಾಲೂಕಿನಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಗೊಂಡ 31 ಶಿಕ್ಷಕರನ್ನು ಸನ್ಮಾನಿಸಲಾಯಿತು.

ಸಾಯಿ ತೇಜಸ್ವಿನಿ ಅವರಿಂದ ಭರತನ್ಯಾಟ ಪ್ರದರ್ಶನ ಗಮನಸೆಳೆಯಿತು. ಟಿಎಪಿಎಂಎಸ್ ಅಧ್ಯಕ್ಷ ಬಾಬು ರೆಡ್ಡಿ, ಬಿಎಂಆರ್‌ಡಿ ಅಧ್ಯಕ್ಷ ಕೇಶವಮೂರ್ತಿ, ಜಿಪಂ ಮಾಜಿ ಅಧ್ಯಕ್ಷ ಸಿ.ಮುನಿಯಪ್ಪ, ಬಿಎಂಆರ್‌ಡಿ ಸದಸ್ಯ ಡಾ.ಎಚ್.ಎಂ. ಸುಬ್ಬರಾಜ್, ಕೊರಳೂರು ಸುರೇಶ್, ಹರೀಶ್, ಸೇರಿದಂತೆ ಶಿಕ್ಷಕರ ಸಂಘದ ಪದಾಧಿ ಕಾರಿಗಳು, ಸದಸ್ಯರು, ಹಾಜರಿದ್ದರು

  • santhosha ram

    “ಮೆಟ್ರೋ ನ್ಯೂಸ್ 7” ಚಾನೆಲ್ ಸ್ಥಳೀಯ ವಿಚಾರಗಳಿಗೆ ಸಂಬಂಧಪಟ್ಟ ಸುದ್ದಿಯಿಂದ ಹಿಡಿದು ರಾಜ್ಯಮಟ್ಟದ ಸುದ್ದಿಗಳನ್ನು ಜನರಿಗೆ ಮುಟ್ಟಿಸುವ ಸಣ್ಣ ಪ್ರಯತ್ನವಾಗಿದೆ. 🙏

    Related Posts

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ವರದಿ : ಲೋಕೇಶ್ ನಾಯ್ಕ .ಭಟ್ಕಳ. ಭಟ್ಕಳ .ನವೆಂಬರ್‌ 24.ಸರಕಾರಿ ತಾಲೂಕಾ ಆಸ್ಪತ್ರೆಯಲ್ಲಿ ಭಾನುವಾರ ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ…

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ವರದಿ: ಲೋಕೇಶ್ ನಾಯ್ಕ.ಭಟ್ಕಳ. ನಟ ಡಾಲಿ ಧನಂಜಯ  ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್. ಭಟ್ಕಳ: ನ.23ಮುರುಡೇಶ್ವರದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ವಿಶ್ವ ಮೀನುಗಾರಿಕಾ ದಿನಾಚರಣೆ(ಮತ್ರ್ಯಮೇಳ) ಕಾರ್ಯಕ್ರಮಕ್ಕೆ ಶನಿವಾರ ಆಗಮಿಸಿದ ಡಾಲಿ ಧನ ಧನಂಜಯ ನೇತ್ರಾಣಿ ದ್ವೀಪದಲ್ಲಿ ಸ್ಕೂಬ್ ಡೈವಿಂಗ್ ಮಾಡುವ…

    You Missed

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ