ಮೆಟ್ರೋ ವರದಿ ಸೆ 11
ಇಂದು ಬೆಳಗಾವಿಯ ಸುವರ್ಣಸೌಧದಲ್ಲಿ “ಬೆಳಗಾವಿ ವಿಭಾಗ ಮಟ್ಟದ ಇಲಾಖಾ ಪ್ರಗತಿ ಪರಿಶೀಲನಾ ಸಭೆ” ನಡೆಸಲಾಯಿತು.
ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ “ಸರ್ಕಾರಿ ಶಾಲೆಗಳ ಸುಧಾರಣೆಗೆ” ಕೈಗೊಳ್ಳಬೇಕಾದ ಹಲವಾರು ವಿಷಯಗಳ ಕುರಿತು ಸಮಗ್ರವಾಗಿ ಚರ್ಚಿಸಿ, ಅಗತ್ಯ ಸಲಹೆ-ಸೂಚನೆಗಳನ್ನು ನೀಡಲಾಯಿತು.
“ಸಭೆಯಲ್ಲಿ ಚರ್ಚಿಸಲಾದ ವಿಷಯಗಳು”
ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮವನ್ನು ಇನ್ನಷ್ಟು ಅಭಿವೃದ್ಧಿಪಡಿಸುವ ಮೂಲಕ ಸರಕಾರಿ ಶಾಲೆಗಳನ್ನು ಬೆಳೆಸುವ ಕುರಿತು.
ಸರ್ಕಾರಿ ಶಾಲೆಯಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸುವ ಕುರಿತು.
ಪೂರ್ವ ಪ್ರಾಥಮಿಕ ವಿಭಾಗಗಳನ್ನು ಪ್ರಾರಂಭಿಸುವ ಕುರಿತು.
ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತು.
ಶಿಕ್ಷಕರಿಗೆ ತರಬೇತಿ ನೀಡುವ ಕುರಿತು.
ಮಕ್ಕಳ ಗೈರು ಹಾಜರಿ ಬಗ್ಗೆ ಗಮನಹರಿಸಿ, ಶಾಲೆಗೆ ಕರೆತರುವ ಕುರಿತು.
ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮವನ್ನು ಆರಂಭಿಸುವ ಕುರಿತು.
ಸರ್ಕಾರಿ ಶಾಲೆಗಳಲ್ಲಿರುವ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವ ಕುರಿತು.
ಪಠ್ಯಪುಸ್ತಕ/ಸಮವಸ್ತ್ರ/ಶೂ-ಸಾಕ್ಸ್ ಗಳನ್ನು ಶಾಲಾ ಪ್ರಾರಂಭದ ಅವಧಿಯಲ್ಲಿ ಏಕಕಾಲಕ್ಕೆ ಪೂರೈಸುವ ಕುರಿತು.
ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ರಜಾ ದಿನಗಳಲ್ಲಿ ಕೈಗೊಳ್ಳುವ ಕುರಿತು.
ಸರ್ಕಾರಿ ಶಾಲೆಗಳ ಕೊಠಡಿಗಳ ದುರಸ್ತಿ ಕಾಮಗಾರಿ ಮತ್ತು ಶೌಚಾಲಯ ನಿರ್ಮಾಣ ಕಾರ್ಯ ಕುರಿತು.
ಈ ವೇಳೆ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಿತೇಶ್ ಕುಮಾರ್ ಸಿಂಗ್, ಆಯುಕ್ತರಾದ ಶ್ರೀಮತಿ ಬಿ.ಬಿ ಕಾವೇರಿ, ಪದವಿಪೂರ್ವ ನಿರ್ದೇಶಕರಾದ ಶ್ರೀಮತಿ ಸಿಂಧು ಬಿ ರೂಪೇಶ್ ಸೇರಿದಂತೆ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದರು
ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ
ವರದಿ : ಲೋಕೇಶ್ ನಾಯ್ಕ .ಭಟ್ಕಳ. ಭಟ್ಕಳ .ನವೆಂಬರ್ 24.ಸರಕಾರಿ ತಾಲೂಕಾ ಆಸ್ಪತ್ರೆಯಲ್ಲಿ ಭಾನುವಾರ ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ…