ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಿಂದ ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’  “ಲೋಗೋ” ಅನಾವರಣ

ಮೆಟ್ರೋ ವರದಿ ಸೆ. 11

ಇಂದು ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಸನ್ಮಾನ್ಯ ಮಧು ಬಂಗಾರಪ್ಪನವರು ಬೆಳಗಾವಿಯ ಸುವರ್ಣಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದ “ಲೋಗೋ ಅನಾವರಣ” ಹಾಗೂ “ದಾನಿಗಳಿಗೆ ಗೌರವ ಸಮರ್ಪಣೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ನಂತರ ಸರ್ಕಾರಿ ಶಾಲೆಗಳ ಜೀರ್ಣೋದ್ದಾರ ಹಾಗೂ ಕಲಿಕಾ ಸಾಮಾಗ್ರಿಗಳನ್ನು ಕೊಡುಗೆಯಾಗಿ ನೀಡಿದ ದಾನಿಗಳಿಗೆ, ಬೆಳಗಾವಿ ವಿಭಾಗದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತರಾದ ಶ್ರೀ ಅಶೋಕ್ ಸೇನ್ ಗುಪ್ತಾ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕರಿಸಿದ ದಾನಿಗಳಿಗೆ ರಾಜ್ಯ ಸರ್ಕಾರದ ಪರವಾಗಿ ಹಾಗೂ ವೈಯಕ್ತಿಕವಾಗಿ  ಹೃದಯಪೂರ್ವಕ ವಂದನೆಗಳನ್ನು ವೇದಿಕೆಯ ಮೂಲಕ ತಿಳಿಸಲಾಯಿತು..

ಕಾರ್ಯಕ್ರಮದಲ್ಲಿ ಸಚಿವರಾದ ಶ್ರೀ ಸತೀಶ್ ಜಾರಕಿಹೊಳಿ, ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರುಗಳಾದ ಶ್ರೀ ವಿಠ್ಠಲ ಹಲಗೇಕರ್, ಶ್ರೀ ವಿಶ್ವಾಸ್ ವೈದ್ಯ, ಶ್ರೀ ಮಹಾಂತೇಶ್ ಕೌಜಲಗಿ, ಶ್ರೀ ಬಾಬಾಸಾಹೇಬ್ ಪಾಟೀಲ್, ಶ್ರೀ ಆಸೀಫ್ ಸೇಠ್, ಶ್ರೀ ನರೇಂದ್ರ ಸ್ವಾಮಿ, ಶ್ರೀ ಬಸವರಾಜ ಶಿವಣ್ಣ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಪ್ರಕಾಶ್ ಹುಕ್ಕೇರಿ, ಜಿಲ್ಲಾಧಿಕಾರಿ ಶ್ರೀ ಮೊಹಮ್ಮದ್ ರೋಷನ್, ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದ ಶ್ರೀಮತಿ ಬಿ.ಬಿ ಕಾವೇರಿ, ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಿತೇಶ್ ಕುಮಾರ್, ಜಿಲ್ಲಾ ಪಂಚಾಯತ್ CEO ಶ್ರೀ ರಾಹುಲ್ ಶಿಂಧೆ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

  • santhosha ram

    “ಮೆಟ್ರೋ ನ್ಯೂಸ್ 7” ಚಾನೆಲ್ ಸ್ಥಳೀಯ ವಿಚಾರಗಳಿಗೆ ಸಂಬಂಧಪಟ್ಟ ಸುದ್ದಿಯಿಂದ ಹಿಡಿದು ರಾಜ್ಯಮಟ್ಟದ ಸುದ್ದಿಗಳನ್ನು ಜನರಿಗೆ ಮುಟ್ಟಿಸುವ ಸಣ್ಣ ಪ್ರಯತ್ನವಾಗಿದೆ. 🙏

    Related Posts

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ವರದಿ : ಲೋಕೇಶ್ ನಾಯ್ಕ .ಭಟ್ಕಳ. ಭಟ್ಕಳ .ನವೆಂಬರ್‌ 24.ಸರಕಾರಿ ತಾಲೂಕಾ ಆಸ್ಪತ್ರೆಯಲ್ಲಿ ಭಾನುವಾರ ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ…

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ವರದಿ: ಲೋಕೇಶ್ ನಾಯ್ಕ.ಭಟ್ಕಳ. ನಟ ಡಾಲಿ ಧನಂಜಯ  ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್. ಭಟ್ಕಳ: ನ.23ಮುರುಡೇಶ್ವರದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ವಿಶ್ವ ಮೀನುಗಾರಿಕಾ ದಿನಾಚರಣೆ(ಮತ್ರ್ಯಮೇಳ) ಕಾರ್ಯಕ್ರಮಕ್ಕೆ ಶನಿವಾರ ಆಗಮಿಸಿದ ಡಾಲಿ ಧನ ಧನಂಜಯ ನೇತ್ರಾಣಿ ದ್ವೀಪದಲ್ಲಿ ಸ್ಕೂಬ್ ಡೈವಿಂಗ್ ಮಾಡುವ…

    You Missed

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ