ಶಿವಮೊಗ್ಗ ಮಲೆನಾಡು ವಿಭಾಗೀಯ ತೆರಿಗೆ ಜಾಗೃತಿದಳದ 40 ಅಧಿಕಾರಿಗಳ ತಂಡದಿಂದ ಅಡಿಕೆ ವ್ಯಾಪಾರ ಮಳಿಗೆಗಳ ಮೇಲೆ ದಾಳಿ ಹಾಗೂ ದಾಸ್ತಾನು ತಪಾಸಣೆ
ಶಿವಮೊಗ್ಗ ವಿಭಾಗೀಯ ವ್ಯಾಪ್ತಿಯ ಜಾರಿ ಮತ್ತು ಜಾಗೃತಿ ದಳ ಹಾಗೂ ವಿಭಾಗೀಯ ಸರಕು ಮತ್ತು ಸೇವಾ ತೆರಿಗೆ ಇಲಾಖೆಯ ಸುಮಾರು 40 ಅಧಿಕಾರಿಗಳ ತಂಡ ಮಲೆನಾಡು ವಿಭಾಗ ವ್ಯಾಪ್ತಿಯ ಎಲ್ಲಾ ಅಡಿಕೆ ವರ್ತಕರ ವ್ಯಾಪಾರ ಗೋದಾಮು ಸ್ಥಳಗಳ ಮೇಲೆ ದಿಢೀರ್ ದಾಳಿ ನಡೆಸಿ ಲಕ್ಷಾಂತರ ಮೊತ್ತದ ಅಕ್ರಮ ಅಡಿಕೆವಹಿವಾಟು ದಾಸ್ತಾನು ಪತ್ತೆ ಹಚ್ಚಿ ಸಮಾನ ಮೊತ್ತದಷ್ಟು ದಂಡ ವಿಧಿಸಿರುತ್ತಾರೆ..
ಈ ವಿಶೇಷ ಕಾರ್ಯಾಚರಣೆಯ ನೇತೃತ್ವವನ್ನು ಶಿವಮೊಗ್ಗದ ಮಲೆನಾಡು ವಿಭಾಗೀಯ ತೆರಿಗೆ ಜಾಗೃತಿ ದಳ ಹಾಗೂ ಸರಕು ಮತ್ತು ಸೇವಾ ತೆರಿಗೆಗಳ ಜಂಟಿ ಆಯುಕ್ತರುಗಳು ಹಾಗೂ ಉಪ ಆಯುಕ್ತರುಗಳ ನೇತೃತ್ವದಲ್ಲಿ ನಡೆಸಿದ್ದು ಅಕ್ರಮವಾಗಿ ಅಡಿಕೆ ಸಂಗ್ರಹಿಸಿದ ವ್ಯಾಪಾರಿಗಳ ಮೇಲೆ ಜಿ.ಎಸ್ ಟಿ ಕಾಯ್ದೆ ನಿಯಮಾನುಸಾರ ಕ್ರಮ ಜರುಗಿಸಲಾಗಿದೆ.
ವರದಿ : ಮೆಟ್ರೋ ನ್ಯೂಸ್
2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ
ವರದಿ ಲೋಕೇಶ್ ನಾಯ್ಕ್ ಭಟ್ಕಳ್. 2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮವನ್ನು ಗುರುವಾರದಂದು ಅಲಂಕಾರಿಕ ಮೀನುಗಳನ್ನು ಅಕ್ವೆರಿಯಂನಲ್ಲಿ ತುಂಬುವ ಮೂಲಕ ಉದ್ಘಾಟಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು . ಮೀನುಗಾರಿಕೆ ದಿನಾಚರಣೆಯಮತ್ಸ್ಯ ಮೇಳದ ಅಂಗವಾಗಿ ಮತ್ತು…