ವರದಿ: ಸುಕುಮಾರ್ ಎಂ
ಸಿಗಂದೂರಿಗೆ ಅಗತ್ಯ ಭೂ ಮಂಜೂರಾತಿ ಸೇರಿದಂತೆ, ಮುಳುಗಡೆ ಸಂತ್ರಸ್ತರ ರಕ್ಷಣೆಗೆ ಬದ್ದ. ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ: ಅಕ್ಟೋಬರ್ ೦೩
ರಾಜಕೀಯದಲ್ಲಿ ಅಧಿಕಾರ ಶಾಶ್ವತವಲ್ಲ ಆದರೆ, ಶರಾವತಿ ಮುಳುಗಡೆ ಸಂತ್ರಸ್ತರ ಬದುಕನ್ನು ಶಾಶ್ವತವಾಗಿ ಕಟ್ಟಿಕೊಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು.
ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಬುಧವಾರ ಚಂಡೆ ಬಾರಿಸುವ ಮೂಲಕ ಸಿಗಂದೂರು ದಸರಾ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯುತ್ ಯೋಜನೆಗಾಗಿ ಭೂಮಿ, ಬದುಕು ತ್ಯಾಗ ಮಾಡಿದ ಸಂತ್ರಸ್ತರಿಗೆ ದಶಕ ಕಳೆದರೂ ಬಗರ್‌ಹುಕುಂ,ಪರಿಭಾವಿತ ಅರಣ್ಯ, ಕಸ್ತೂರಿ ರಂಗನ್ ವರದಿಗಳಿಂದ ಬದುಕು ಕಟ್ಟಿಕೊಳ್ಳಲು ಹಲವು ಕಾಯ್ದೆಗಳು ಸಂಕಷ್ಟ ತಂದೊಡ್ಡಿವೆ.
ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗೆ ಸುಪ್ರೀಂ ಕೋರ್ಟ್‌ನಲ್ಲಿ ಈಗಾಗಲೇ ಮಧ್ಯಂತರ ಅರ್ಜಿ ಸಲ್ಲಿಸಲಾಗಿದ್ದು ರಾಜ್ಯ ಸರಕಾರದಿಂದ ಅನುಭವಿ ಮತ್ತು ಹಿರಿಯ ವಕೀಲರನ್ನು ನೇಮಕ ಮಾಡಲಾಗಿದೆ. ಸಮಸ್ಯೆ ಬಗೆಹರಿಸುವ ಕುರಿತು ಸಕಾರಾತ್ಮಕ ಸ್ಪಂದನೆ ಸಹ ದೊರೆತಿದೆ ಎಂದರು.
ಇಂದಿನ ರಾಜಕೀಯ ವ್ಯವಸ್ಥೆ ಹದಗೆಟ್ಟಿರುವುದರಿಂದ
ಸಮಾಜದ ಪ್ರತಿಯೊಂದು ಹಂತದಲ್ಲೂ ಜಾತಿ, ಧರ್ಮದ ಲೇಪನ ಮಾಡುವ ಶಕ್ತಿಗಳ ಬಗ್ಗೆ ಎಚ್ಚರ ವಹಿಸಬೇಕು. ವಿದ್ಯಾರ್ಥಿಗಳು ಜಾತಿ, ಧರ್ಮದ ಸಂಕೋಲೆ ತೊರೆದು ಆಂಬೇಡ್ಕರ್, ನಾರಾಯಣ ಗುರುಗಳ ಆದರ್ಶಗಳನ್ನು ಪಾಲಿಸಬೇಕು. ರಾಜ್ಯ ಸರ್ಕಾರ ಸಂವಿಧಾನ ಓದು ಕಾರ್ಯಕ್ರಮವನ್ನು ಜಾರಿಗೆ ತಂದಿರುವುದರಿಂದ ಮಕ್ಕಳಲ್ಲಿ ಸಂವಿಧಾನದ ಅರಿವು, ಜಾತ್ಯತೀತ ಮನೋಭಾವ ಹೆಚ್ಚಾಗಿದೆ. ಮಕ್ಕಳನ್ನು ಜಾತಿ-ಧರ್ಮದ ತಾರತಮ್ಯದಿಂದ ದೂರ ಮಾಡುತ್ತದೆ ಎಂದರು.
ನಾಡಿನ ಅಸಂಖ್ಯಾತ ಭಕ್ತರ ಶ್ರದ್ಧಾ ಕೇಂದ್ರ ಎಲ್ಲರ ಒಳಗೊಳ್ಳುವಿಕೆಯ ಮೂಲಕ ಸಿಗಂದೂರು ದೇವಸ್ಥಾನ ಬಹುತ್ವದ ದೃಷ್ಟಿಕೋನವನ್ನು ಹೊಂದಿದೆ. ಧರ್ಮಾಧಿಕಾರಿ ರಾಮಪ್ಪ ಅವರು ಅನೇಕ ಸಾಮಾಜಿಕ ಕಾರ್ಯಗಳಿಗೆ ಜೀವ ತುಂಬಿದ್ದಾರೆ. ಅದೇ ರೀತಿ, ಶಿಕ್ಷಣ ಕ್ಷೇತ್ರಕ್ಕೂ ಅಪಾರ ಕೊಡುಗೆ ನೀಡಿದ್ದಾರೆ. ಆದ್ದರಿಂದ, ಮುಂದಿನ ದಿನದಲ್ಲೂ ಈ ಸಹಕಾರ ಶಿಕ್ಷಣ ಕ್ಷೇತ್ರಕ್ಕೆ ಇರಲಿ ಎಂದು ಕೋರಿದರು.
ಶಿಕ್ಷಣ ಇಲಾಖೆಯಲ್ಲಿ ಅನೇಕ ಬದಲಾವಣೆ ತರಲಾಗುತ್ತಿದೆ. ಶರಾವತಿ ಸಂತ್ರಸ್ತರ ಕಣ್ಣೀರು ಒರೆಸುವ ಹೊಣೆ ಸರ್ಕಾರ ಮೇಲಿದೆ. ಇದಕ್ಕೆ ಕ್ರಮವಹಿಸಲಾಗುತ್ತಿದೆ. ಗ್ಯಾರಂಟಿ ಯೋಜನೆಗಳಿಂದ ಬಡವರ ಹಸಿವು ನೀಗಿಸಲಾಗುತ್ತಿದೆ. ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಣೆಗೆ ಇಲಾಖೆ ಕಟಿಬದ್ಧವಾಗಿದೆ ಎಂದರು.
ಚೌಡೇಶ್ವರಿ ದೇವಿಯ ಅನುಗ್ರಹದಿಂದ ನಾಡಿನಲ್ಲಿ ಉತ್ತಮ ಮಳೆ- ಬೆಳೆ ಆಗಿದೆ. ಕ್ಷೇತ್ರದಲ್ಲಿ ನಿರಂತರವಾಗಿ 34 ವರ್ಷದಿಂದ ದಸರಾ ಹಬ್ಬವನ್ನು ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಶ್ರೀ ಕ್ಷೇತ್ರದಿಂದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಕ್ಕೆ ಸಾಕಷ್ಟು ನೆರವು ನೀಡಲಾಗಿದೆ. ಈ ಭಾಗದಲ್ಲಿ ದಶಕಗಳಿಂದ ಬಗೆಹರಿಯದ ಜಲ್ವಂತ ಸಮಸ್ಯೆಗಳು ಇನ್ನೂ ಜೀವಂತವಾಗಿವೆ.
ಈ ಎಲ್ಲಾ ಸಮಸ್ಯೆಗಳಿಗೆ ಸರ್ಕಾರ ನ್ಯಾಯ ಒದಗಿಸಬೇಕು. ಮುಳುಗಡೆ ರೈತರು ಹಾಗೂ ಬಗರ್ ಹುಕುಂ ಸಾಗುವಳಿ ಸಮಸ್ಯೆಗೆ ಪರಿಹಾರ ಒದಗಿಸಬೇಕು. 75 ವರ್ಷಗಳ ದಾಖಲೆ ಕೇಳಿದರೆ ಮುಳುಗಡೆ ಸಂತ್ರಸ್ತರಿಗೆ ಕೊಡಲಾಗುವುದಿಲ್ಲ ಹೀಗಾಗಿ ಕನಿಷ್ಠ 25 ವರ್ಷಗಳ ಸಾಗುವಳಿ ದಾಖಲೆ ಪಡೆದೂ ಭೂಮಿ ಹಕ್ಕು ನೀಡುವ ಬಗ್ಗೆ ಸರ್ಕಾರ ಚಿಂತನೆ ಮಾಡಬೇಕು ಎಂದು ಧರ್ಮಾಧಿಕಾರಿ ಎಸ್ ರಾಮಪ್ಪ ಸರ್ಕಾರಕ್ಕೆ ಒತ್ತಾಯಿಸಿದರು.
ದೇವಸ್ಥಾನದ ಕಾರ್ಯದರ್ಶಿ ರವಿಕುಮಾರ ಮಾತನಾಡಿ, ತಾಲ್ಲೂಕಿನ ಸರ್ಕಾರಿ ಶಾಲೆಗಳ ಸೌಂದರ್ಯೀಕರಣಕ್ಕೆ ಸಿಗಂದೂರು ಚಿತ್ತ ಸರ್ಕಾರಿ ಶಾಲೆಗಳತ್ತ ಯೋಜನೆ ಮೂಲಕ ತಾಲ್ಲೂಕಿನ 49ಕ್ಕೂ ಹೆಚ್ಚು ಶಾಲೆಗಳನ್ನು ಅಭಿವೃದ್ಧಿಪಡಿಸಲಾಗಿದೆ.
ತುಮರಿ ಗ್ರಾಂಥಾಲಯಕ್ಕೆ 1 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಸ್ಪರ್ಧಾತ್ಮಕ ಪರೀಕ್ಷಾ ಸಲಕರಣೆ ವಿತರಣೆ ಸೇರಿ ಅನೇಕ ಸಾಮಾಜಿಕ ಕಾರ್ಯಗಳಿಗೆ ಒತ್ತು ನೀಡಲಾಗುತ್ತಿದೆ ಎಂದರು.
ಕೆಡಿಪಿ ಸದಸ್ಯ ಸತ್ಯನಾರಾಯಣ ಜಿ ಟಿ ಮಾತನಾಡಿದರು.
ನವರಾತ್ರಿ ಉತ್ಸವದ ಪ್ರಯುಕ್ತ ದೇವಿಗೆ ವಿಶೇಷ ಪುಷ್ಪಗಳಿಂದ ಅಲಂಕಾರ ಮಾಡಲಾಗಿತ್ತು,ದೇವಿಗೆ ವಿಶೇಷವಾಗಿ ತೈಲಾಭಿಷೇಕ, ಅಲಂಕಾರ ಪೂಜೆ, ಮಹಾ ಪೂಜೆ, ಗಣಹೋಮ ಪೂಜೆಯನ್ನು ಅರ್ಚಕ ರಘುಪತಿ ಭಟ್ ನೇರವೇರಿಸಿದರು.
ರಾತ್ರಿ 7ರಿಂದ ದೀಪೋತ್ಸವ, ರಾತ್ರಿ 8ಕ್ಕೆ ಮಹಾ ಮಂಗಳಾರತಿ, ಸಾಂಸ್ಕೃತಿಕ ಕಾರ್ಯಕ್ರಮಗಳು ನೆಡೆದವು.
ವೇದಿಕೆಯಲ್ಲಿ ಆರ್ ಪ್ರಸನ್ನ ಕುಮಾರ, ಕಲಗೋಡು ರತ್ನಾಕರ, ಶ್ರೀನಿವಾಸ ಕರಿಯಣ್ಣ, ಶಾಂತವೀರ ನಾಯ್ಕ, ಹೊಳಿಯಪ್ಪ, ಸರಸ್ವತಿ ಗಣಪತಿ, ಮಂಜಪ್ಪ ಮರಸ,ಕಲಸೆ ಚಂದ್ರಪ್ಪ, ಹುಚ್ಚಪ್ಪ ಮಂಡಗಳಲೆ, ಶ್ರೀದೇವಿ ರಾಮಚಂದ್ರ, ಸತ್ಯನಾರಾಯಣ ಜಿ ಟಿ, ಅರುಣ್ ಪ್ರಸಾದ್ ಇದ್ದರು. ರವಿಕುಮಾರ್ ಹೆಚ್ ಆರ್ ಸ್ವಾಗತಿಸಿ, ಚಂದ್ರಪ್ಪ ಅಳೂರು ನಿರೂಪಿಸಿದರು.
ಕಸ್ತೂರಿ ರಂಗನ್ ವರದಿ ತಿರಸ್ಕಾರ:
ಪಶ್ಚಿಮಘಟ್ಟದಲ್ಲಿ ಪರಿಸರ ಸೂಕ್ಷ್ಮ ಪ್ರದೇಶವನ್ನು ಘೋಷಿಸುವ ಡಾ.ಕಸ್ತೂರಿ ರಂಗನ್ ವರದಿ ಆಧರಿಸಿದ ಕರಡು ಅಧಿಸೂಚನೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ವರದಿ ಜಾರಿಯಾದರೆ ಬಹುಕಾಲದಿಂದ ಬದುಕು ಕಟ್ಟಿಕೊಂಡ ಜನರ ಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂಬುದನ್ನು ಮನಗಂಡು ವರದಿ ತಿರಸ್ಕರಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ.
ರೈತರಿಗೆ ಸಂಕಷ್ಟದ ಯಾವುದೇ ಸಂಧರ್ಬ ಬಂದರೂ ಜಿಲ್ಲೆಯ ರೈತರ ಜೊತೆಗೆ ಇರುವೆ ಎಂದು ಭರವಸೆ ನೀಡಿದರು.
ಅರಣ್ಯ ಸಾಗುವಳಿದಾರರಿಗೆ ನ್ಯಾಯ ನೀಡಿ :
ನನ್ನ ಅವಧಿಯಲ್ಲಿ ಕಂದಾಯ ಭೂಮಿಯಲ್ಲಿ ಸಾಗುವಳಿ ಮಾಡಿದ ರೈತರಿಗೆ ಹಕ್ಕು ಪತ್ರ ನೀಡಲಾಗಿದೆ.
ಈ ಹಿಂದೆ
ಅರಣ್ಯ ಮತ್ತು ಕಂದಾಯ ಇಲಾಖೆಗಳು ಮಾಡಿರುವ ತಪ್ಪಾನಿಂದಾಗಿ ಇಂದು ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರು ತೊಂದರೆ ಅನುಭವಿಸುವಂತಾಗಿದೆ.
ಶರಾವತಿ ಮುಳುಗಡೆ ಸಂತ್ರಸ್ತರಿಗೆ ನ್ಯಾಯ ಒದಗಿಸಿದರೆ ಮಾತ್ರ ಸಮಾಜಿಕ ನ್ಯಾಯ ಪರಿಕಲ್ಪನೆ ಉದ್ದೇಶ ಈಡೇರಿದಂತೆ. ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು. ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು.
ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ
ವರದಿ : ಲೋಕೇಶ್ ನಾಯ್ಕ .ಭಟ್ಕಳ. ಭಟ್ಕಳ .ನವೆಂಬರ್ 24.ಸರಕಾರಿ ತಾಲೂಕಾ ಆಸ್ಪತ್ರೆಯಲ್ಲಿ ಭಾನುವಾರ ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ…