ಭ್ರಷ್ಟಾಚಾರ ಮತ್ತುಅವ್ಯವಹಾರ ತಡೆಗಟ್ಟುವ ನಿಟ್ಟಿನಲ್ಲಿ ಸ್ವತಂತ್ರವಾಗಿ ಕೆಲಸ ಮಾಡಬೇಕಿರುವ ರಾಷ್ಟ್ರೀಯ ತನಿಖಾ ಸಂಸ್ಥೆಗಳು ಸರಿಯಾದ ಕೆಲಸ ನಿರ್ವಹಿಸಬೇಕು – ನಿವೃತ್ತ ಪ್ರಾಂಶುಪಾಲ ಎಂ.ನಾರಾಯಣಸ್ವಾಮಿ

ವರದಿ ನಾರಾಯಣಸ್ವಾಮಿ ಸಿ.ಎಸ್

ಹೊಸಕೋಟೆ ಅ 6: ದೇಶದಲ್ಲಿ ನಡೆಯುವ ಭ್ರಷ್ಟಾಚಾರ ಮತ್ತು
ಅವ್ಯವಹಾರ ತಡೆಗಟ್ಟುವ ನಿಟ್ಟಿನಲ್ಲಿ ಸ್ವತಂತ್ರವಾಗಿ ಕೆಲಸ ಮಾಡಬೇಕಿರುವ ರಾಷ್ಟ್ರೀಯ ತನಿಖಾ ಸಂಸ್ಥೆಗಳು ಯಾರದೋ ಮೂಗಿನ ನೇರಕ್ಕೆ ಕೆಲಸ ನಿರ್ವಹಿಸುತ್ತಿರುವುದು ದುರದೃಷ್ಟಕರ ಎಂದು ನಿವೃತ್ತ ಪ್ರಾಂಶುಪಾಲ ಎಂ.ನಾರಾಯಣಸ್ವಾಮಿ ಬೇಸರ ವ್ಯಕ್ತಪಡಿಸಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ರಾಜ್ಯ ಶಾಸ್ತ್ರ ವಿಭಾಗ ಮತ್ತು ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯದ ರಾಜ್ಯಶಾಸ್ತ್ರ ಉಪನ್ಯಾಸಕರ ವೇದಿಕೆ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ‘ಭಾರತದಲ್ಲಿ ತನಿಖಾ ಸಂಸ್ಥೆಗಳ ಪಾತ್ರ’ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದರು.

ಪ್ರಜಾಪ್ರಭುತ್ವ ವ್ಯವಸ್ಥೆ ಬಲಿಷ್ಠಗೊಳಿಸಲು ಹಾಗೂ ದೇಶದಲ್ಲಿ ಭ್ರಷ್ಟಾಚಾರ, ಅಕ್ರಮ ಆಸ್ತಿ ಸಂಪತ್ತು ಗಳಿಸುವವರನ್ನು ತೊಡೆದು ಹಾಕಲು ಎನ್‌ಸಿಟಿಸಿ, ಐಬಿ, ಸಿಬಿಐ, ಎನ್‌ಐಎ, ಇ.ಡಿ, ಐ.ಟಿ, ಲೋಕಾಯುಕ್ತ ಸಂಸ್ಥೆಗಳು ಮತ್ತಷ್ಟು ಸ್ವತಂತ್ರವಾಗಿ ಕೆಲಸ ಮಾಡಬೇಕು.
ಹಾಗಾದರೆ ಮಾತ್ರ ಜನಸಾಮಾನ್ಯರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಹೆಚ್ಚಾಗಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಈ ನಿಟ್ಟಿನಲ್ಲಿ ರಾಜ್ಯಶಾಸ್ತ್ರ ವಿಭಾಗದ ಅಧ್ಯಾಪಕರು, ವಿದ್ಯಾರ್ಥಿಗಳು ಮತ್ತಷ್ಟು ಸಂಶೋಧನೆ ಕೈಗೊಳ್ಳುವ ಮೂಲಕ ತನಿಖಾ ಸಂಸ್ಥೆಗಳನ್ನು ಬಲಿಷ್ಠ ಗೊಳಿಸಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲ ಪ್ರೊ.ರಾಮಲಿಂಗಪ್ಪ ಟಿ.ಬೇಗೂರು ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಂಡವಾಳ ಶಾಹಿ, ಮೂಲಭೂತವಾದ, ಸಾಮ್ರಾಜ್ಯಶಾಹಿ ನೀತಿಗಳು ಮಾರಕವಾಗಿವೆ. ಇವುಗಳ ದರ್ಪ ದಬ್ಬಾಳಿಕೆಯಿಂದ ಕಟ್ಟಕಡೆಯ ಜನತೆಗೆ ನೆಮ್ಮದಿಯ ಬದುಕು ಮರೀಚಿಕೆಯಾಗಿದೆ. ಅನ್ಯಾಯ ತೊಡೆದುಹಾಕುವ ಕೆಲಸವನ್ನು ತನಿಖಾ ಸಂಸ್ಥೆಗಳು ಮಾಡಬೇಕಿದೆ ಎಂದರು.

ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಪ್ರಾಧ್ಯಾಪಕರಾಗಿ ಸೇವೆ ಮಾಡಿ ನಿವೃತ್ತರಾದ ಪ್ರೊ.ಎಸ್.ಎಂ.ವೆಂಕಟೇಶಪ್ಪ, ಪ್ರೊ.ಚೆನ್ನನರಸಿಂಹಯ್ಯ, ಪ್ರೊ.ಪ್ರಕಾಶ್‌ ಅವರನ್ನು ಸನ್ಮಾನಿಸಲಾಯಿತು

  • santhosha ram

    “ಮೆಟ್ರೋ ನ್ಯೂಸ್ 7” ಚಾನೆಲ್ ಸ್ಥಳೀಯ ವಿಚಾರಗಳಿಗೆ ಸಂಬಂಧಪಟ್ಟ ಸುದ್ದಿಯಿಂದ ಹಿಡಿದು ರಾಜ್ಯಮಟ್ಟದ ಸುದ್ದಿಗಳನ್ನು ಜನರಿಗೆ ಮುಟ್ಟಿಸುವ ಸಣ್ಣ ಪ್ರಯತ್ನವಾಗಿದೆ. 🙏

    Related Posts

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ವರದಿ : ಲೋಕೇಶ್ ನಾಯ್ಕ .ಭಟ್ಕಳ. ಭಟ್ಕಳ .ನವೆಂಬರ್‌ 24.ಸರಕಾರಿ ತಾಲೂಕಾ ಆಸ್ಪತ್ರೆಯಲ್ಲಿ ಭಾನುವಾರ ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ…

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ವರದಿ: ಲೋಕೇಶ್ ನಾಯ್ಕ.ಭಟ್ಕಳ. ನಟ ಡಾಲಿ ಧನಂಜಯ  ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್. ಭಟ್ಕಳ: ನ.23ಮುರುಡೇಶ್ವರದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ವಿಶ್ವ ಮೀನುಗಾರಿಕಾ ದಿನಾಚರಣೆ(ಮತ್ರ್ಯಮೇಳ) ಕಾರ್ಯಕ್ರಮಕ್ಕೆ ಶನಿವಾರ ಆಗಮಿಸಿದ ಡಾಲಿ ಧನ ಧನಂಜಯ ನೇತ್ರಾಣಿ ದ್ವೀಪದಲ್ಲಿ ಸ್ಕೂಬ್ ಡೈವಿಂಗ್ ಮಾಡುವ…

    You Missed

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ