ಸರಕಾರಿ ಜಮೀನು ಕಬಳಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹ

ವರದಿ ನಾರಾಯಣಸ್ವಾಮಿ ಸಿ.ಎಸ್

ಸರಕಾರಿ ಜಮೀನು ಕಬಳಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹ

ಹೊಸಕೋಟೆ 7:
ಸೂರು ಕಲ್ಪಿಸಬೇಕು ಸೇರಿದಂತೆ ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನೂರಾರು ಮಂದಿ ಕಣ್ಣೂರಹಳ್ಳಿ ಗ್ರಾಮದಿಂದ ಹೊಸಕೋಟೆ ತಾಲೂಕು ಕಚೇರಿವರೆಗೂ ಸೋಮವಾರ ಕಾಲ್ನಡಿಗೆ ಜಾಥಾ ನಡೆಸಿದರು.

ಕರ್ನಾಟಕ ಬಿಡುಗಡೆ ಚಿರತೆಗಳ ಮಹಾ ಸಂಘದ ವತಿಯಿಂದ ಕಾಲ್ನಡಿಗೆ ಜಾಥಾ ಕೈಗೊಂಡು, ತಾಲೂಕು ಕಚೇರಿ ಮುಂದೆ ಧರಣಿ  ಕೈಗೊಳ್ಳಲಾಯಿತು.

ಗ್ರಾಮದಲ್ಲಿ ದಲಿತರ ಹೆಸರಿನಲ್ಲಿ ಅಕ್ರಮ ದಾಖಲೆ ಸೃಷ್ಟಿಸಿರು ವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಅರ್ಹರಿಗೆ ಸೂರು ಒದಗಿಸಬೇಕೆಂದು ಆಗ್ರಹಿಸಲಾಯಿತು.

ಸಂಘಟನೆಯ ರಾಜ್ಯಾಧ್ಯಕ್ಷ  ಶಿವರಾಜ್ ಮಾತನಾಡಿ, ಕಣ್ಣೂರಹಳ್ಳಿ ಗ್ರಾಮದ ಸ.ನಂ. 12 ಮತ್ತು 37ರಲ್ಲಿ ಸುಮಾರು 50 ಎಕರೆಗೂ ಹೆಚ್ಚು ಸರಕಾರಿ ಗೋಮಾಳ ಜಮೀನನ್ನು ದಲಿತರ ಹೆಸರಿನಲ್ಲಿ ಕಬಳಿಸಲು ಕೆಲವರು ಮುಂದಾಗಿದ್ದಾರೆ. 3ರಿಂದ 12 ವರ್ಷದ ಮಕ್ಕಳ ಹೆಸರಿನಲ್ಲಿ ಅಕ್ರಮ ದಾಖಲೆ ಸೃಷ್ಟಿಸಿದ್ದು, ತಮ್ಮ ಹೆಸರಿಗೆ ಪರಭಾರೆ ಮಾಡಿಕೊಂಡು ಸರಕಾರದ ನೂರಾರು ಕೋಟಿ ಬೆಲೆಬಾಳುವ ಜಮೀನನ್ನು ಕಬಳಿಸಲಾಗಿದೆ ಎಂದು ಆರೋಪಿಸಿದರು.

ಸರಕಾರಿ ಗೋಮಾಳ ಜಮೀನನ್ನ ಸ್ಥಳೀಯ ದಲಿತರ ಹೆಸರಿನಲ್ಲಿ ಅಕ್ರಮವಾಗಿ ಕಬಳಿಸಲು ಸಹಾಯ ಮಾಡಿರುವ ಅಕಾರಿಗಳು ಮತ್ತು ಭೂಮಾಫಿಯಾ ದವರ ವಿರುದ್ಧ ಎಸ್ಸಿ, ಎಸ್ಟಿ ಕಾಯಿದೆ ಅನ್ವಯ ದೂರು ದಾಖಲಿಸಿ ಬಂಧಿಸಬೇಕು.

ಕಬಳಿಸಿರುವ ಜಮೀನನ್ನು ವಶಪಡಿಸಿಕೊಂಡು, ಬಡವರಿಗೆ ನಿವೇಶನ ನೀಡ ಬೇಕು. ಕಣ್ಣೂರಹಳ್ಳಿ ಗ್ರಾಮದ ಸ.ನಂ.177 ಮತ್ತು 178ರ ಸರಕಾರಿ ಜಮೀನನ್ನು ಬುದ್ಧ ವಿಹಾರಕ್ಕೆ ಹಾಗೂ ಅಂಬೇಡ್ಕರ್ ಅವರ ಪುತ್ಥಳಿ ಸ್ಥಾಪನೆಗಾಗಿ ಮಂಜೂರು ಮಾಡಬೇಕು.

ಸ.ನಂ.12ರಲ್ಲಿ ನಿರ್ಮಿ ಸಿರುವ ಮನೆಗಳಿಗೆ ಹಕ್ಕುಪತ್ರ, ವಿದ್ಯುತ್, ರಸ್ತೆ, ಚರಂಡಿ, ಶೌಚಾಲಯ ನಿರ್ಮಿಸಿ ಕೊಡಬೇಕೆಂಬ ನಾನಾ ಬೇಡಿಕೆ ಈಡೇರಿಸಲು ಒತ್ತಾಯಿಸಿದರು. ತಹಸೀಲ್ದಾರ್ ಸೋಮಶೇಖರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು..

ಕರ್ನಾಟಕ ಬಿಡುಗಡೆಯ ಚಿರತೆಗಳು ಜನಪರ ಮಹಾಸಂಘದ ತಾಲೂಕು ಅಧ್ಯಕ್ಷ ನಾಗರಾಜ್ ಸೇರಿದಂತೆ ಪದಾಕಾರಿಗಳು ಹಾಜರಿದ್ದರು.

  • santhosha ram

    “ಮೆಟ್ರೋ ನ್ಯೂಸ್ 7” ಚಾನೆಲ್ ಸ್ಥಳೀಯ ವಿಚಾರಗಳಿಗೆ ಸಂಬಂಧಪಟ್ಟ ಸುದ್ದಿಯಿಂದ ಹಿಡಿದು ರಾಜ್ಯಮಟ್ಟದ ಸುದ್ದಿಗಳನ್ನು ಜನರಿಗೆ ಮುಟ್ಟಿಸುವ ಸಣ್ಣ ಪ್ರಯತ್ನವಾಗಿದೆ. 🙏

    Related Posts

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ವರದಿ : ಲೋಕೇಶ್ ನಾಯ್ಕ .ಭಟ್ಕಳ. ಭಟ್ಕಳ .ನವೆಂಬರ್‌ 24.ಸರಕಾರಿ ತಾಲೂಕಾ ಆಸ್ಪತ್ರೆಯಲ್ಲಿ ಭಾನುವಾರ ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ…

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ವರದಿ: ಲೋಕೇಶ್ ನಾಯ್ಕ.ಭಟ್ಕಳ. ನಟ ಡಾಲಿ ಧನಂಜಯ  ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್. ಭಟ್ಕಳ: ನ.23ಮುರುಡೇಶ್ವರದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ವಿಶ್ವ ಮೀನುಗಾರಿಕಾ ದಿನಾಚರಣೆ(ಮತ್ರ್ಯಮೇಳ) ಕಾರ್ಯಕ್ರಮಕ್ಕೆ ಶನಿವಾರ ಆಗಮಿಸಿದ ಡಾಲಿ ಧನ ಧನಂಜಯ ನೇತ್ರಾಣಿ ದ್ವೀಪದಲ್ಲಿ ಸ್ಕೂಬ್ ಡೈವಿಂಗ್ ಮಾಡುವ…

    You Missed

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ