ಮೆಟ್ರೋ ವರದಿ ಅ.10
ದೇಶದ ಹೆಮ್ಮೆಯ ಉದ್ಯಮಿ, ಅಪ್ರತಿಮ ದೇಶ ಭಕ್ತ ರತನ್ ಟಾಟಾ ವಯೋಸಹಜ ಕಾಯಿಲೆಯಿಂದ ಬುಧವಾರ ರಾತ್ರಿ ನಿಧನರಾದರು. ಅವರ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿದಿದೆ.
ಭಾರತದ ಅತಿ ದೊಡ್ಡ ಸಮೂಹ ಸಂಸ್ಥೆ ಟಾಟಾ ಸನ್ಸ್ ನ ಗೌರವಾಧ್ಯಕ್ಷ ರತನ್ ಟಾಟಾ ರವರು ಬುಧವಾರ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಅಕ್ಟೋಬರ್ 9 ರಂದು ನಿಧನರಾಗಿದ್ದಾರೆ
ದೇಶದ ಹೆಮ್ಮೆಯ ಉದ್ಯಮಿ, ಟಾಟಾ ಸಮೂಹದ ಮುಖ್ಯಸ್ಥರಾದ ರತನ್ ಟಾಟಾ ಅವರ ನಿಧನದ ಸುದ್ದಿ ದುಃಖವುಂಟು ಮಾಡಿದೆ. ಟಾಟಾ ಸಂಸ್ಥೆಯ ಮೂಲಕ ಲಕ್ಷಾಂತರ ಜನರಿಗೆ ಉದ್ಯೋಗ ನೀಡಿದ್ದು ಮಾತ್ರವಲ್ಲ, ಭಾರತದ ಉದ್ಯಮ ವಲಯವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೊಸ ಎತ್ತರಕ್ಕೆ ಕೊಂಡೊಯ್ದ ದೂರದೃಷ್ಟಿಯ ವ್ಯಕ್ತಿ.
86 ವರ್ಷದ ರತನ್ ಟಾಟಾ ಅವರು ತಮ್ಮ ವೃದ್ಧಾಪ್ಯ ಸಂಬಂಧಿ ಕಾಯಿಲೆಗಳಿಗೆ ಸೋಮವಾರ ಚಿಕಿತ್ಸೆಗೊಳಗಾಗಿದ್ದರು ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಐಸಿಯು ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು
1991ರಲ್ಲಿ ಟಾಟಾ ಸನ್ಸ್ ಸಮೂಹ ಸಂಸ್ಥೆಯ ಅಧ್ಯಕ್ಷರಾಗಿದ್ದ ರತನ್ ಟಾಟಾ, ತಮ್ಮ ಸಂಸ್ಥೆಯನ್ನು 100 ಬಿಲಿಯನ್ ಡಾಲರ್ ಮೌಲ್ಯದ ಜಾಗತಿಕ ದರ್ಜೆಯ ಸಾಮ್ರಾಜ್ಯವನ್ನಾಗಿ ವಿಸ್ತರಿಸಿದ್ದರು. ಡಿಸೆಂಬರ್ 12ರಲ್ಲಿ ಟಾಟಾ ಸನ್ಸ್ ಸಮೂಹ ಸಂಸ್ಥೆಯ ಅಧ್ಯಕ್ಷರ ಹುದ್ದೆಯಿಂದ ನಿವೃತ್ತಿ ಹೊಂದಿದ್ದು ನಂತರ ರತನ್ ಟಾಟಾ ಗೌರವಾಧ್ಯಕ್ಷರಾಗಿ ನೇಮಕಗೊಂಡಿದ್ದರು
ರತನ್ ಟಾಟಾ ಅವರು ತಮ್ಮ ಬದುಕು ಮತ್ತು ಸಾಧನೆಗಳ ಮೂಲಕ ಅಜರಾಮರ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ” ಮೆಟ್ರೋ ನ್ಯೂಸ್ 7 ” ಕನ್ನಡ ಬಳಗದಿಂದ ಪ್ರಾರ್ಥಿಸುತ್ತೇವೆ
ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ
ವರದಿ : ಲೋಕೇಶ್ ನಾಯ್ಕ .ಭಟ್ಕಳ. ಭಟ್ಕಳ .ನವೆಂಬರ್ 24.ಸರಕಾರಿ ತಾಲೂಕಾ ಆಸ್ಪತ್ರೆಯಲ್ಲಿ ಭಾನುವಾರ ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ…