ವರದಿ :ಲೋಕೇಶ್ ನಾಯ್ಕ್. ಭಟ್ಕಳ.
ಅಕ್ಟೋಬರ್ 12
ಭಟ್ಕಳ: ಯಾರೋ ಕಳ್ಳರು ದೇವಸ್ಥಾನ ವೊಂದರ ಬಾಗಿಲು ಮುರಿದು ಕಾಣಿಕೆ ಹುಂಡಿ ಯಲ್ಲಿದ್ದ ಹಣವನ್ನು ಕದ್ದು ಪರಾರಿಯಾಗಿರುವ ಘಟನೆ ಮುಟ್ಟಳ್ಳಿ ಪಂಚಾಯತ್ ವ್ಯಾಪ್ತಿಯ ಬೇಹಳ್ಳಿ ಯಲ್ಲಿ ನಡೆದಿದೆ.
ಶನಿವಾರ ಮದ್ಯಾಹ್ನ 12-30 ರಿಂದ ರವಿವಾರ 08-30 ರ ನಡುವಿನ ಅವಧಿಯಲ್ಲಿ ಬೇಹಳ್ಳಿ ಗ್ರಾಮದ ಕಾನಕೆರೆ ಜಟಕೇಶ್ವರ ದೇವಸ್ಥಾನದ ಒಳ ಹೊಕ್ಕಿ ದೇವಸ್ಥಾಣದ ಕಾಣಿಕೆ ಡಬ್ಬಿಯನ್ನು ಒಡೆದು ಅದರಲ್ಲಿದ್ದ ಸುಮಾರು 4 ಸಾವಿರ ನಗದು ಹಣ ಹಾಗೂ ದೇವಸ್ಥಾನಕ್ಕೆ ಅಳವಡಿಸಿದ್ದು 10 ಸಾವಿರ -ಮೌಲ್ಯದ 6 ಹಿತ್ತಾಳೆ ಗಂಟೆ. ಹೀಗೆ ಒಟ್ಟು 14000 ಮೌಲ್ಯದ ವಸ್ತುಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.
ಈ ಕುರಿತು ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪಿಎಸ್ಐ ಭರಮಪ್ಪ ಬೆಳಗಲಿ ತನಿಖೆ ಕೈಗೊಂಡಿದ್ದಾರೆ.
ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ
ವರದಿ : ಲೋಕೇಶ್ ನಾಯ್ಕ .ಭಟ್ಕಳ. ಭಟ್ಕಳ .ನವೆಂಬರ್ 24.ಸರಕಾರಿ ತಾಲೂಕಾ ಆಸ್ಪತ್ರೆಯಲ್ಲಿ ಭಾನುವಾರ ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ…