ಮುಸ್ಲಿಂ ಸಮುದಾಯದ ಸಂಸ್ಥೆ ತಂಝೀಮ್ ನೇತೃತ್ವದಲ್ಲಿ ಸರ್ವ ಜಮಾ -ಅತ್ ಸಂಘಟನೆಗಳು ಭಟ್ಕಳ ಬಂದ್ ಗೆ ಕರೆಗೆ ವ್ಯಾಪಾರ-ವಹಿವಾಟು ಸ್ಥಬ್ದ

ವರದಿ :ಲೋಕೇಶ್ ನಾಯ್ಕ್ ಭಟ್ಕಳ.

ಮುಸ್ಲಿಂ ಸಮುದಾಯದ ಸಂಸ್ಥೆ ತಂಝೀಮ್ ನೇತೃತ್ವದಲ್ಲಿ ಸರ್ವ ಜಮಾ -ಅತ್ ಸಂಘಟನೆಗಳು ಭಟ್ಕಳ ಬಂದ್ ಗೆ ಕರೆಗೆ ವ್ಯಾಪಾರ-ವಹಿವಾಟು ಸ್ಥಬ್ದ್.

ಅಕ್ಟೋಬರ್ 15.
ಸೋಮವಾರ ಅಕ್ಟೋಬರ್14. ರಂದು ತಾಲೂಕು ಆಡಳಿತ ಸೌಧದ ಮುಂದೆ ನಡೆದ ಬೃಹತ್ ಪ್ರತಿಭಟನಾ ಸಭೆಯಲ್ಲಿ ತಂಝೀಮ್ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ ಮುಸ್ಲಿಮರು ಹಾಗೂ ಹಿಂದೂ ಸಮುದಾಯದವರು ಭಟ್ಕಳ ಬಂದ್  ಗೆ ಬೆಂಬಲ ಸೂಚಿಸಬೇಕೆಂದು ವಿನಂತಿಸಿದ್ದರು.

ಈ ಹಿನ್ನೆಲೆಯಲ್ಲಿ ಪ್ರವಾದಿ ಮುಹಮ್ಮದ್ ಪೈಗಂಬರ್ ವಿರುದ್ದ ನಿಂದನಾತ್ಮಕ ಹೇಳಿಕೆ ನೀಡುರುವ ಉತ್ತರ ಪ್ರದೇಶದ ಯತಿ ನರಸಿಂಹಾನಂದ ಸ್ವಾಮಿಜಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಭಟ್ಕಳದ ಸಾಮಾಜಿಕ ಹಾಗೂ ರಾಜಕೀಯ ಸಂಸ್ಥೆ ತಂಝೀಮ್ ನೇತೃತ್ವದಲ್ಲಿ ಸರ್ವ ಜಮಾ -ಅತ್ ಸಂಘಟನೆಗಳು ಮಂಗಳವಾರ ಭಟ್ಕಳ ಬಂದ್ ಗೆ ಕರೆ ನೀಡಿದ್ದು, ಇಂದು ಮುಸ್ಲಿಂ ಸಮುದಾಯದಿಂದ ಅದಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಶಾಲಾ-ಕಾಲೇಜುಗಳು ಸೇರಿದಂತೆ ಎಲ್ಲ ರೀತಿಯ ವ್ಯಾಪಾರ ವ್ಯಹಿವಾಟುಗಳು ಸ್ಥಬ್ಧಗೊಂಡಿದ್ದು, ಮುಸ್ಲಿಂ ವ್ಯಾಪಾರಿಗಳ ಸಂಪೂರ್ಣ ಅಂಗಡಿ ಮುಂಗಟ್ಟುಗಳು,ಆಟೋ ರಿಕ್ಷಾ  ಮುಚ್ಚಲ್ಪಟ್ಟಿದ್ದವು.

ಹಿಂದೂ ಸಮುದಾಯದ ವ್ಯಾಪಾರಿಗಳು ತಮ್ಮ ವ್ಯಾಪಾರ ವ್ಯವಹಾರದಲ್ಲಿ ಎಂದಿನಂತೆ ತೊಡಗಿಸಿಕೊಂಡಿದ್ದರು.

ಪ್ರಮುಖ ಮಾರ್ಗಗಳಾದ ಕೇರಿ ರಸ್ತೆ, ಮುಖ್ಯ ರಸ್ತೆ, ಹಳೆ ಬಸ್ ನಿಲ್ದಾಣ, ಮಾರಿಕಟ್ಟೆ, ರಥಬೀದಿ, ಮೊಹಮ್ಮದ್ ಅಲಿ ರಸ್ತೆ, ಶಂಸುದ್ದೀನ್ ವೃತ್ತ, ನವಾಯತ್ ಕಾಲೋನಿ, ಹಾಗೂ ಮದೀನಾ ಕಾಲೋನಿಯ ರಸ್ತೆಗಳಲ್ಲಿ ವಾಹನಗಳ ಸಂಚಾರ ಕಡಿಮೆಯಾಗಿದ್ದವು.

ಆಹಿತಕರ ಘಟನೆಗಳನ್ನು ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮಕ್ಕೆ ಭಟ್ಕಳ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದ್ದು, ಹೆಚ್ಚಿನ ಸುರಕ್ಷತೆಗಾಗಿ ಪ್ರಮುಖ ಸ್ಥಳಗಳಲ್ಲಿ, ಬೀದಿ ಗಳಲ್ಲಿ  ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾದಿರುವುದು ಕಂಡು ಬಂತು.

  • santhosha ram

    “ಮೆಟ್ರೋ ನ್ಯೂಸ್ 7” ಚಾನೆಲ್ ಸ್ಥಳೀಯ ವಿಚಾರಗಳಿಗೆ ಸಂಬಂಧಪಟ್ಟ ಸುದ್ದಿಯಿಂದ ಹಿಡಿದು ರಾಜ್ಯಮಟ್ಟದ ಸುದ್ದಿಗಳನ್ನು ಜನರಿಗೆ ಮುಟ್ಟಿಸುವ ಸಣ್ಣ ಪ್ರಯತ್ನವಾಗಿದೆ. 🙏

    Related Posts

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ವರದಿ : ಲೋಕೇಶ್ ನಾಯ್ಕ .ಭಟ್ಕಳ. ಭಟ್ಕಳ .ನವೆಂಬರ್‌ 24.ಸರಕಾರಿ ತಾಲೂಕಾ ಆಸ್ಪತ್ರೆಯಲ್ಲಿ ಭಾನುವಾರ ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ…

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ವರದಿ: ಲೋಕೇಶ್ ನಾಯ್ಕ.ಭಟ್ಕಳ. ನಟ ಡಾಲಿ ಧನಂಜಯ  ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್. ಭಟ್ಕಳ: ನ.23ಮುರುಡೇಶ್ವರದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ವಿಶ್ವ ಮೀನುಗಾರಿಕಾ ದಿನಾಚರಣೆ(ಮತ್ರ್ಯಮೇಳ) ಕಾರ್ಯಕ್ರಮಕ್ಕೆ ಶನಿವಾರ ಆಗಮಿಸಿದ ಡಾಲಿ ಧನ ಧನಂಜಯ ನೇತ್ರಾಣಿ ದ್ವೀಪದಲ್ಲಿ ಸ್ಕೂಬ್ ಡೈವಿಂಗ್ ಮಾಡುವ…

    You Missed

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ