ಭಟ್ಕಳ  ಅರ್ಬನ್ ಬ್ಯಾಂಕ್ ಸಭಾಭವನದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ.

ವರದಿ: ಲೋಕೇಶ್ ನಾಯ್ಕ್ ಭಟ್ಕಳ.

ಭಟ್ಕಳ  ಅರ್ಬನ್ ಬ್ಯಾಂಕ್ ಸಭಾಭವನದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ.

ಭಟ್ಕಳ : ಅ.17
ತಾಲೂಕಾ ಆಡಳಿತ, ತಾಲೂಕಾ ಪಂಚಾಯತ್, ಪುರಸಭೆ, ಪಟ್ಟಣ ಪಂಚಾಯತ್ ಜಾಲಿ, ಸಮಾಜ ಕಲ್ಯಾಣ ಇಲಾಖೆ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ತಾಲೂಕಿನ ಅರ್ಬನ್ ಬ್ಯಾಂಕ್ ಸಭಾಭವನದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮೀನುಗಾರಿಕೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ ಎಸ್ ವೈದ್ಯ  ಮಾತನಾಡಿ ಮಹರ್ಷಿ ವಾಲ್ಮೀಕಿ ಮನುಕುಲಕ್ಕೆ ರಾಮಾಯಣದಂತಹ ಮಹಾನ್ ಗ್ರಂಥವನ್ನು ನೀಡಿದ್ದಾರೆ. ಒಬ್ಬ ವ್ಯಕ್ತಿ ಜೀವನದಲ್ಲಿ ಅನೇಕ ತಪ್ಪುಗಳನ್ನು ಮಾಡುತ್ತಾನೆ ಅದೇ ರೀತಿ ಬೇಡ ವಾಲ್ಮೀಕಿಯೂ ಕೂಡ ಅಂತಹ ತಪ್ಪುಗಳನ್ನು ಮಾಡಿದ್ದರು.ಆದರೆ ತಾನೂ ಬದಲಾಗಬೇಕೆಂಬ ಉದ್ದೇಶದಿಂದ ದಟ್ಟ ಕಾಡಿನಲ್ಲಿ ತಪಸ್ಸನ್ನು ಮಾಡಿ ಬೇಡನೊಬ್ಬ ವಾಲ್ಮೀಕಿ ಮಹರ್ಷಿಯಾಗಿ ಬದಲಾದರು . ಇಂತಹ ಋಷಿವರ್ಯ ನಮ್ಮೆಲ್ಲರಿಗೂ ಆದರ್ಶಪ್ರಾಯವಾಗಬೇಕು. ಆ ನಿಟ್ಟಿನಲ್ಲಿ ಸರ್ಕಾರ ವಾಲ್ಮೀಕಿ ಜಯಂತಿಯನ್ನು ಆಚರಿಸುತ್ತಿದೆ ಎಂದು ಹೇಳಿದರು.

ಉಪನ್ಯಾಸಕ ಭಾಷಣ ಮಾಡಿದ ಸಾಮಾಜಿಕ ಕಾರ್ಯಕರ್ತ ಭಾಸ್ಕರ ನಾಯ್ಕ ಮಹರ್ಷಿ ವಾಲ್ಮೀಕಿಯ ಕಥೆಯನ್ನು ಮನಮುಟ್ಟುವಂತೆ ವಿವರಿಸಿದರು.

ಕಾರ್ಯಕ್ರಮದಲ್ಲಿ ಕಳೆದ ಸಾಲಿನಲ್ಲಿ ಶೈಕ್ಷಣಿಕ ಸಾಧನೆಗೈದ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪುರಸ್ಕರಿಸಲಾಯಿತು.

ಭಟ್ಕಳದ ಬಿ.ಸಿ.ಎಮ್ ವಸತಿ ನಿಲಯದ ವಿದ್ಯಾರ್ಥಿಗಳು ಪ್ರಾರ್ಥಿಸಿದರು, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ ಜಿ.ಎಮ್ ಸ್ವಾಗತಿಸಿದರು, ಪುರಸಭೆ ಮುಖ್ಯಾಧಿಕಾರಿ ನೀಲಕಂಠ ಮೇಸ್ತಾ ವಂದಿಸಿದರು, ಸುರೇಶ ಎನ್ ಮುರುಡೇಶ್ವರ ಕಾರ್ಯಕ್ರಮವನ್ನು ನಿರೂಪಿಸಿದರು.

ಕಾರ್ಯಕ್ರಮದದಲ್ಲಿ ಸಚಿವ ಮಂಕಾಳ ಎಸ್ ವೈದ್ಯ, ಸಹಾಯಕ ಆಯುಕ್ತರಾದ ಡಾ. ನಯನಾ ಎನ್, ತಹಶಿಲ್ದಾರರಾದ ಅಶೋಕ್ ಭಟ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ವೆಂಕಟೇಶ ನಾಯ್ಕ, ಜಾಲಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಎ. ಮಂಜಪ್ಪ, ಬೆಳ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಗದೀಶ ನಾಯ್ಕ, ಗೊಂಡ ಸಮಾಜದ ಅಧ್ಯಕ್ಷರಾದ ನಾರಾಯಣ ಗೊಂಡ ಮತ್ತಿತರು ಹಾಜರಿದ್ದರು.

  • santhosha ram

    “ಮೆಟ್ರೋ ನ್ಯೂಸ್ 7” ಚಾನೆಲ್ ಸ್ಥಳೀಯ ವಿಚಾರಗಳಿಗೆ ಸಂಬಂಧಪಟ್ಟ ಸುದ್ದಿಯಿಂದ ಹಿಡಿದು ರಾಜ್ಯಮಟ್ಟದ ಸುದ್ದಿಗಳನ್ನು ಜನರಿಗೆ ಮುಟ್ಟಿಸುವ ಸಣ್ಣ ಪ್ರಯತ್ನವಾಗಿದೆ. 🙏

    Related Posts

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ವರದಿ: ಲೋಕೇಶ್ ನಾಯ್ಕ .ಭಟ್ಕಳ ಭಟ್ಕಳ : ನವೆಂಬರ್‌ 23ರಾಜ್ಯದಲ್ಲಿ ನಡೆದ ಉಪಚುನಾವಣೆ ಮೂರು ಕ್ಷೇತ್ರಗಳಲ್ಲಿ ಕಾಂಗ್ರೇಸ್ ಪಕ್ಷ ಭರ್ಜರಿ ಜಯ. ಭಟ್ಕಳದಲ್ಲಿ  ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಂದ ಸಂಮ್ಸುದ್ದೀನ ಸರ್ಕಲ್ ನಲ್ಲಿ  ಪಟಾಕಿ ಸಿಡಿಸಿ ಸಂಭ್ರಮಾಚರಣೆ . ಈ ಸಂದರ್ಭದಲ್ಲಿ…

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    ವರದಿ :ಆರತಿ ಗಿಳಿಯಾರು ಉಡುಪಿ : ನ.23ಬ್ರಹ್ಮಾವರ ತಾಲ್ಲೂಕಿನ ಮೂಡು ಗಿಳಿಯಾರು ಶಾಲಾ ಮೈದಾನದಲ್ಲಿ  ದಿನಾಂಕ  ಡಿಸೆಂಬರ್ 14 ಮತ್ತು 15 ರಂದು ನಿಸರ್ಗ ಕ್ರಿಕೆಟರ್ಸ್   ಗಿಳಿಯಾರು ಇವರ ವತಿಯಿಂದ ಪ್ರಥಮ ಬಾರಿಗೆ ರಾಜ್ಯಮಟ್ಟದ ಹೊನಲು ಬೆಳಕಿನ 40 ಗಜಗಳ ಕ್ರಿಕೆಟ್…

    You Missed

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ

    ಗುಲ್ವಾಡಿ ಗ್ರಾಮ ಪಂಚಾಯಿತಿನಲ್ಲಿ ಗ್ರಾಮಸಭೆ,ಅಧಿಕಾರಿಗಳು ಹಾಗೂ ಪಿ. ಡಿ. ಓ ರನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು

    ಗುಲ್ವಾಡಿ ಗ್ರಾಮ ಪಂಚಾಯಿತಿನಲ್ಲಿ ಗ್ರಾಮಸಭೆ,ಅಧಿಕಾರಿಗಳು ಹಾಗೂ ಪಿ. ಡಿ. ಓ ರನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು

    ಸುಬ್ರಹ್ಮಣ್ಯ ಸೀನಿಯರ್ ಚೇಂಬರಿಗೆ ರಾಷ್ಟ್ರಾಧ್ಯಕ್ಷರ ಅಧಿಕೃತ ಭೇಟಿ.

    ಸುಬ್ರಹ್ಮಣ್ಯ ಸೀನಿಯರ್ ಚೇಂಬರಿಗೆ ರಾಷ್ಟ್ರಾಧ್ಯಕ್ಷರ ಅಧಿಕೃತ ಭೇಟಿ.