ವರದಿ ನಾರಾಯಣಸ್ವಾಮಿ ಸಿ.ಎಸ್
ಹೊಸಕೋಟೆ ಅ. 18
ವಾಲ್ಮೀಕಿಯವರ ಆದರ್ಶ ಗುಣಗಳನ್ನು ಮೈಗೂಡಿಸಿಕೊಂಡು ಸಮಾಜದಲ್ಲಿ ಅವರ ಆದರ್ಶಗಳನ್ನು ಪ್ರಚಾರ ಮಾಡುವ ಮೂಲಕ ಶಾಂತಿ ಸಹಬಾಳ್ವೆ ನಡೆಸಿದಾಗ ಮಾತ್ರ ವಾಲ್ಮೀಕಿ ಅವರ ಜನ್ಮದಿನ ಆಚರಣೆ ಮಾಡಿದ್ದಕ್ಕೆ ಸಾರ್ಥಕವಾಗುತ್ತದೆ ಎಂದು ಶಾಸಕ ಶರತ್ ಬಚ್ಚೇಗೌಡರು ತಿಳಿಸಿದರು .
ನಗರದ ತಾಲೂಕು ಕಚೇರಿಯಲ್ಲಿ ತಾಲೂಕು ಆಡಳಿತ ಹಾಗೂ ವಾಲ್ಮೀಕಿ ಸಮುದಾಯದ ವತಿಯಿಂದ ಹಮ್ಮಿಕೊಂ ಡಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮ ದಲ್ಲಿ ಮಾತನಾಡಿಮಹರ್ಷಿ ವಾಲ್ಮೀಕಿ ಅವರು ಅಂದಿನ ದಿನಗಳಲ್ಲಿ ಇಂದಿನ ಸಮಾಜದಲ್ಲಿನ ಅಂಕು ಕೊಂಡುಗಳನ್ನು ತಿನ್ನುವ ಬಗ್ಗೆ ಹಾಗೂ ಜಾತ್ಯತೀತ ಮನೋಭಾವಗಳನ್ನು ಬೆಳೆಸುವ ಕೆಲಸವನ್ನು ರಾಮಾಯಣ ಬರೆಯುವ ಮೂಲಕ ಮಾಡಿದ್ದರು. ಅಂದು ವಾಲ್ಮೀಕಿ ಅವರು ಬರೆದ ರಾಮಾಯಣ ಇಂದಿಗೂ ಪ್ರಸ್ತುತವಾಗಿದೆ ಎಂದರು.
ಭಾರತದ ಮೊಟ್ಟಮೊದಲ ಮಹಾಕಾವ್ಯ ರಾಮಾಯಣವನ್ನು ರಚಿಸಿದ ಆದಿಕವಿಮಹರ್ಷಿ ವಾಲ್ಮೀಕಿಯ ರಾಮಾಯ ಇವು ಭಾರತೀಯರ ಜೀವನ ಚರಿತ್ರೆಯನ್ನು ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಮಹಾಕಾವ್ಯವಾಗಿದೆ ಎಂದರು.
ತಹಸೀಲ್ದಾರ್ ಸೋಮಶೇಖರ್ ಮಾತನಾಡಿ, ಮಹರ್ಷಿ ವಾಲ್ಮೀಕಿ ಆದ ರ್ಶಗಳನ್ನು ನಾವೆಲ್ಲರೂ ಪಾಲಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಮುದಾಯದ ಮುಖಂಡರಾದ ಹನುಮರಾಜ್, ದೇವ ರಾಜ್, ಕೃಷ್ಣಪ್ಪ, ನಾಗರಾಜ್, ನಗರಸಭೆ ಅಧ್ಯಕ್ಷೆ ಆಶಾ ರಾಜಶೇಖರ್, ಉಪಾಧ್ಯಕ್ಷ ನವೀನ್, ಸದಸ್ಯರಾದ ರಮಾ, ಗಣೇಶ್, ಅಂಜು, ಬಿಡಿಸಿಸಿ ನಿರ್ದೇಶಕ ಕೃಷ್ಣ ಮೂರ್ತಿ, ತಾಪಂ ಇಒ ಡಾ. ಸಿ.ಎನ್. ನಾರಾಯಣಸ್ವಾಮಿ, ಟೌನ್ ಬ್ಯಾಂಕ್ ನಿರ್ದೇಶಕ ಎಚ್.ಜಿ.ಮೋಹನ್ ಕುಮಾರ್, ಅಬ್ದುಲ್ಲಾ ಸಾಬ್, ವಿಜಯಕು ಮಾರ್ ಮತ್ತಿತರರು ಹಾಜರಿದ್ದರು
ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ
ವರದಿ: ಲೋಕೇಶ್ ನಾಯ್ಕ .ಭಟ್ಕಳ ಭಟ್ಕಳ : ನವೆಂಬರ್ 23ರಾಜ್ಯದಲ್ಲಿ ನಡೆದ ಉಪಚುನಾವಣೆ ಮೂರು ಕ್ಷೇತ್ರಗಳಲ್ಲಿ ಕಾಂಗ್ರೇಸ್ ಪಕ್ಷ ಭರ್ಜರಿ ಜಯ. ಭಟ್ಕಳದಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಂದ ಸಂಮ್ಸುದ್ದೀನ ಸರ್ಕಲ್ ನಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ . ಈ ಸಂದರ್ಭದಲ್ಲಿ…