ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಯೋಗೋತ್ಸವ ಕಾರ್ಯಕ್ರಮ
ಶಿವಮೊಗ್ಗ
ಜೂನ್ 21 ರಂದು ಆಯೋಜಿಸಲಾಗುವ ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ರಾಜ್ಯ ಸರ್ಕಾರದ ನಿರ್ದೇಶನದಂತೆ ಜೂನ್ 10 ರಿಂದ 20 ರವರೆಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಆಯುಷ್ ಕಚೇರಿ, ಶಿವಮೊಗ್ಗ ವತಿಯಿಂದ ಜಿಲ್ಲೆಯ ವಿವಿಧೆಡೆ ಯೋಗೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ.
ಜೂನ್ 10 ರಂದು ನಗರದ ಬಾಪೂಜಿ ಆಯುರ್ವೇದ ಮಹಾವಿದ್ಯಾಲಯದಲ್ಲ ಯೋಗೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಜಿಲ್ಲಾ ಆಯುಷ್ ಅಧಿಕಾರಿ ಡಾ.ಲಿಂಗರಾಜ ಎಸ್ ಹಿಂಡಸಗಟ್ಟಿ, ಬಾಪೂಜಿ ಆಯುರ್ವೇದ ಕಾಲೇಜಿನ ಪ್ರಾಚಾರ್ಯರಾದ ಡಾ.ಪಂಕಜ್ ಪ್ರಸಾದ್, ಆಡಳಿತಾಧಿಕಾರಿ ಆರಾಧ್ಯ ಇವರು ಕಾರ್ಯಕ್ರಮ ಉದ್ಘಾಟಿಸಿದರು.
ಯೋಗದ ಮಹತ್ವ ಹಾಗೂ ಆಯುಷ್ ಪದ್ದತಿಗಳ ಪರಿಚಯ ಮತ್ತು ಯೋಗದೊಂದಿಗೆ ಜೀವನ ಶೈಲಿಯ ನಿರ್ವಹಣೆ ಎಂಬ ವಿಷಯದ ಬಗ್ಗೆ ಸರ್ಕಾರಿ ಆಯುರ್ವೇದ ಮಹಾವಿದ್ಯಾಲಯದ ಹಿರಿಯ ವೈದ್ಯಾಧಿಕಾರಿ ಡಾ.ನಾಗೇಂದ್ರಾಚಾರಿ ಉಪನ್ಯಾಸ ನೀಡಿದರು.
ಯೋಗ ತರಬೇತುದಾರರಾದ ಮಹೇಂದ್ರ ಬಿ ಆರ್ ಮತ್ತು ಕು.ಮೋನಿಯಾ ಇವರು ಯೋಗದ ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು. ಕಾಲೇಜಿನ ಎಲ್ಲ ವೈದ್ಯಕೀಯ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ವರದಿ : ಮೆಟ್ರೋ ನ್ಯೂಸ್