ಮೆಟ್ರೋ ವರದಿ
ಗುಡುಗು ಸಹಿತ ಭಾರೀ ಮಳೆ ಹಿನ್ನೆಲೆ ಅ.26 ರವರೆಗೂ ಎಲ್ಲೋ ಅಲರ್ಟ್: ಬೆಂಗಳೂರು
ಬೆಂಗಳೂರು: ಅ.20
ಬೆಂಗಳೂರಿನಲ್ಲಿ ಬೆಳಗಿನ ಜಾವದಿಂದಲೇ ಗುಡುಗು ಸಹಿತ ಮಳೆಯ ಅಬ್ಬರ ಜೋರಾಗಿದೆ.
ಅಕ್ಟೋಬರ್ 26.ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು, ಬೆಂಗಳೂರು ನಗರ,ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಹೆಚ್ಚು ಮಳೆಯಾಗಲಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ, ಹೆಚ್.ಎ.ಎಲ್. ನಲ್ಲಿ 28.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆ.ಐ.ಎ.ಎಲ್. ನಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿ.ಕೆ.ವಿ.ಕೆ
ಯಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ
ವರದಿ: ಲೋಕೇಶ್ ನಾಯ್ಕ .ಭಟ್ಕಳ ಭಟ್ಕಳ : ನವೆಂಬರ್ 23ರಾಜ್ಯದಲ್ಲಿ ನಡೆದ ಉಪಚುನಾವಣೆ ಮೂರು ಕ್ಷೇತ್ರಗಳಲ್ಲಿ ಕಾಂಗ್ರೇಸ್ ಪಕ್ಷ ಭರ್ಜರಿ ಜಯ. ಭಟ್ಕಳದಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಂದ ಸಂಮ್ಸುದ್ದೀನ ಸರ್ಕಲ್ ನಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ . ಈ ಸಂದರ್ಭದಲ್ಲಿ…