ರಕ್ತದಾನದ ಕುರಿತು ಅರಿವು ಕಾರ್ಯಕ್ರಮ

ವರದಿ ರಾಜು ಮಹೇಂದ್ರಕರ

ಬೆಳಗಾವಿ ಅ.21
ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದ  ಮುನವಳ್ಳಿಯ  ಬಿ .ಎಫ್. ಯಲಿಗಾರ ಪದವಿ ಕಾಲೇಜಿನಲ್ಲಿ ರಕ್ತ ದಾನದ  ಕುರಿತು ಅರಿವು ಕಾರ್ಯಕ್ರಮವನ್ನು  ಏರ್ಪಡಿಸಲಾಗಿತ್ತು.

ಪ್ರಾಂಶುಪಾಲರಾದ  ಎ.ಎಸ್.ಅಮೋಘಿಮಠ
ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು.  

ಸದರಿ ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ  ಎಫ್ ಬಿ ಭೋವಿ ಜೆ ಕೆ ಬಡಿಗೇರ ಎ ಎ ಅಬ್ಬಾರ ಜಿ ವಿ ಹಡಪದ ಪಿ ವಿ ಮೋರೆ ಆರೋಗ್ಯ ಇಲಾಖೆಯ ಜಿ ಎಲ್ ಭಂಡಾರಿ ವಿಸ್ವಾಸ ಹಿರೇಮಠ  ಜಯ ಶೀಲಾ ಮೇಘಾ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ರಕ್ತದಾನ ಶ್ರೇಷ್ಠದಾನ ಪುಣ್ಯ ಕಾರ್ಯವಾಗಿದೆ ರಕ್ತದಾನದಿಂದ ಇನ್ನೊಂದು ಜೀವವನ್ನ ಉಳಿಸಬಹುದು ಇದರ ಜೊತೆಗೆ ರಕ್ತ ನೀಡುವುದರಿಂದ ಶರೀರದಲ್ಲಿ ರಕ್ತವು ಹೆಚ್ಚು ಉತ್ಪತ್ತಿ ಆಗುವುದರ ಜೊತೆಗೆ ನವ ಚೇತನ್ಯ ಉಂಟಾಗುತ್ತದೆ ಎಂದು  ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಐ ಆರ್ ಗಂಜಿ  ತಿಳಿಸಿದರು.

ರಕ್ತದಾನ ಮಾಡುವುದರಿಂದ ಹೃದಯಘಾತದ ಸಂಭವ ಕಡಿಮೆಯಾಗುವುದು ಹಾಗೂ ರಕ್ತದಲ್ಲಿನ ಕೊಬ್ಬಿನ ಅಂಶ ಕಡಿಮೆಯಾಗುವುದು.

18 ವರ್ಷ ಮೇಲ್ಪಟ್ಟವರು 60 ವರ್ಷದೊಳಗಿನವರು ರಕ್ತದಾನವನ್ನು ಮಾಡಬಹುದು. ದಾನೀಯ ದೇಹದ ತೂಕ 45 ಕೆಜಿ ಇರಬೇಕು ಹಾಗೂ ರಕ್ತದಾನದಿಂದ  ದೇಹದಲ್ಲಿ ಹೊಸ ರಕ್ತ ಚಲನೆಯಿಂದ ಕಾರ್ಯ ತತ್ಪರತೆ ಜ್ಞಾಪಕಶಕ್ತಿ ಹೆಚ್ಚಾಗುತ್ತದೆ .

ಒಂದೆರಡು ವಾರಗಳಲ್ಲಿ ರಕ್ತದ ಎಲ್ಲಾ ಅಂಶಗಳು ದಾನಿಯ ರಕ್ತದಲ್ಲಿ ಸಂಪೂರ್ಣವಾಗಿ ತುಂಬಿಕೊಳ್ಳುತ್ತವೆ.ಹಾಗೂ ರಕ್ತದಾನದಿಂದ ಇನ್ನೊಂದು ಜೀವ ಉಳಿಸಿದಂತಾಗುತ್ತದೆ  ಎಂದು ಡಾ ಎಸ್ ಎಲ್ ದಂಡಗಿ ತಿಳಿಸಿದರು.

ಎ ಎ ಅಬ್ಬಾರ
ಸ್ವಾಗತಿಸಿ  ವಂದಿಸಿದರು.

  • santhosha ram

    “ಮೆಟ್ರೋ ನ್ಯೂಸ್ 7” ಚಾನೆಲ್ ಸ್ಥಳೀಯ ವಿಚಾರಗಳಿಗೆ ಸಂಬಂಧಪಟ್ಟ ಸುದ್ದಿಯಿಂದ ಹಿಡಿದು ರಾಜ್ಯಮಟ್ಟದ ಸುದ್ದಿಗಳನ್ನು ಜನರಿಗೆ ಮುಟ್ಟಿಸುವ ಸಣ್ಣ ಪ್ರಯತ್ನವಾಗಿದೆ. 🙏

    Related Posts

    ಗಾಂಜಾ ಪೀಡಿತ ಪ್ರದೇಶಗಳಲ್ಲಿ ಶ್ವಾನ ತಪಾಸಣೆ ಮೂಲಕ ಎಚ್ಚರಿಸಿದ ಪೊಲೀಸ್ ಇಲಾಖೆ

    ಮೆಟ್ರೋ ವರದಿ ಮೈಸೂರು ನ.21 ನಗರದಲ್ಲಿ ಗಾಂಜಾ ಪೀಡಿತ ಹೆಚ್ಚಾದ ಕಾರಣ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಜಾ ಪೀಡಿತ ಪ್ರದೇಶಗಳಾದ ಸುನ್ನಿ ಚೌಕ ಮತ್ತು ನರಸಿಂಹರಾಜ ಠಾಣಾ ವ್ಯಾಪ್ತಿಯ ಶಾಂತಿ ನಗರ ಹಾಗೂ ಉದಯಗಿರಿ ಠಾಣಾ ಸರಹದ್ದಿನಲ್ಲಿ ಟೀ ಅಂಗಡಿ…

    ಸರ್ಕಾರಿ ಶಾಲೆಗಳಿಗೆ ದಾನಿಗಳ ನೆರವು ಅತ್ಯಗತ್ಯ / ಶಿಕ್ಷಣ ತಜ್ಞ ದೇವಿದಾಸ್ ಸುಬ್ರಾಯ್ ಶೇಟ್

    ವರದಿ ನಾರಾಯಣಸ್ವಾಮಿ ಸಿ.ಎಸ್ ಹೊಸಕೋಟೆ ನ 20ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಹಾಗೂ ಶಾಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಸರ್ಕಾರಿ ಶಾಲೆಗಳಿಗೆ ದಾನಿಗಳ ನೆರವು ಅತ್ಯಗತ್ಯ ಎಂದು ಶಿಕ್ಷಣ ತಜ್ಞ ದೇವಿದಾಸ್ ಸುಬ್ರಾಯ್ ಶೇಟ್ ತಿಳಿಸಿದರು. ತಾಲೂಕಿನ ಅತ್ತಿಬೆಲೆ ಸರ್ಕಾರಿ ಹಿರಿಯ ಪ್ರಾಥಮಿಕ…

    You Missed

    ಗಾಂಜಾ ಪೀಡಿತ ಪ್ರದೇಶಗಳಲ್ಲಿ ಶ್ವಾನ ತಪಾಸಣೆ ಮೂಲಕ ಎಚ್ಚರಿಸಿದ ಪೊಲೀಸ್ ಇಲಾಖೆ

    ಗಾಂಜಾ ಪೀಡಿತ ಪ್ರದೇಶಗಳಲ್ಲಿ ಶ್ವಾನ ತಪಾಸಣೆ ಮೂಲಕ ಎಚ್ಚರಿಸಿದ ಪೊಲೀಸ್ ಇಲಾಖೆ

    ಸರ್ಕಾರಿ ಶಾಲೆಗಳಿಗೆ ದಾನಿಗಳ ನೆರವು ಅತ್ಯಗತ್ಯ / ಶಿಕ್ಷಣ ತಜ್ಞ ದೇವಿದಾಸ್ ಸುಬ್ರಾಯ್ ಶೇಟ್

    ಸರ್ಕಾರಿ ಶಾಲೆಗಳಿಗೆ ದಾನಿಗಳ ನೆರವು ಅತ್ಯಗತ್ಯ / ಶಿಕ್ಷಣ ತಜ್ಞ ದೇವಿದಾಸ್ ಸುಬ್ರಾಯ್ ಶೇಟ್

    ಕೆ.ಎಸ್.ಹೆಗಡೆ  ಮಂಗಳೂರು ಆಸ್ಪತ್ರೆಯ ಖ್ಯಾತ ವೈದ್ಯರಿಂದಭಟ್ಕಳ್  ತಾಲೂಕಾ  ಆಸ್ಪತ್ರೆಯಲ್ಲಿ ನವೆಂಬರ್ 24 ರಂದು ವೈದ್ಯಕೀಯ ಶಿಬಿರ.

    ಕೆ.ಎಸ್.ಹೆಗಡೆ  ಮಂಗಳೂರು ಆಸ್ಪತ್ರೆಯ ಖ್ಯಾತ ವೈದ್ಯರಿಂದಭಟ್ಕಳ್  ತಾಲೂಕಾ  ಆಸ್ಪತ್ರೆಯಲ್ಲಿ ನವೆಂಬರ್ 24 ರಂದು ವೈದ್ಯಕೀಯ ಶಿಬಿರ.

    ಕನಕದಾಸರು ನಾಡು ಕಂಡ ಅಪ್ರತಿಮ ದಾಸ ಶ್ರೇಷ್ಠರು / ಶಾಸಕ ಶರತ್ ಬಚ್ಚೇಗೌಡ

    ಕನಕದಾಸರು ನಾಡು ಕಂಡ ಅಪ್ರತಿಮ ದಾಸ ಶ್ರೇಷ್ಠರು / ಶಾಸಕ ಶರತ್ ಬಚ್ಚೇಗೌಡ

    ಉತ್ತಮ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ ವಿತರಿಸಿದ

    ಉತ್ತಮ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ ವಿತರಿಸಿದ

    ಭಾರತದ ಪ್ರಸಿದ್ಧ ಕ್ರಿಕೆಟ್ ಆಟಗಾರ ಸೂರ್ಯಕುಮಾರ್ ಯಾದವ್ / ಕುಕ್ಕೆ ಸುಬ್ರಹ್ಮಣ್ಯ ಆಡಳಿತ ಮಂಡಳಿಯಿಂದ ಸನ್ಮಾನ

    ಭಾರತದ ಪ್ರಸಿದ್ಧ ಕ್ರಿಕೆಟ್ ಆಟಗಾರ ಸೂರ್ಯಕುಮಾರ್ ಯಾದವ್ / ಕುಕ್ಕೆ ಸುಬ್ರಹ್ಮಣ್ಯ ಆಡಳಿತ ಮಂಡಳಿಯಿಂದ ಸನ್ಮಾನ