ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ್ ವೈದ್ಯರಿಂದ ಜನಸ್ಪಂದನ ಕಾರ್ಯಕ್ರಮ.

ವರದಿ : ಲೋಕೇಶ್ ನಾಯ್ಕ್.ಭಟ್ಕಳ.

ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ್ ವೈದ್ಯರಿಂದ ಜನಸ್ಪಂದನ ಕಾರ್ಯಕ್ರಮ.

ಭಟ್ಕಳ. ಅಕ್ಟೋಬರ್ 22
ಜನರ ಬಳಿಗೆ ಸಚಿವ ಮಂಕಾಳ್ ವೈದ್ಯರ ನಡಿಗೆ” :  ಭಟ್ಕಳ ವಿಧಾನಸಭಾ ಕ್ಷೇತ್ರದ ಗ್ರಾಮದಲ್ಲಿರುವ ಕುಂದು-ಕೊರತೆಗಳನ್ನ ಆಲಿಸಿ ಪರಿಹರಿಸುವುದಕ್ಕಾಗಿ, ಮೀನುಗಾರಿಕಾ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು,  ಪ್ರತಿ ಗ್ರಾಮ ಪಂಚಾಯತ ಮಟ್ಟದಲ್ಲಿ *”ಜನ ಸ್ಪಂದನಾ ಸಭೆ”* ಎಂಬ ವಿನೂತನ ಕಾರ್ಯಕ್ರಮ ದೀಪ  ಬೆಳಗಿಸುವುದರ  ಮುಖೇನ ಉದ್ಘಾಟ್ಟಿಸಿದರು.

ಈ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾನಾಡಿದ ಅವರು ಈ ತಾಲೂಕಿನ ಹಾಡುವಳ್ಳಿಯ ಸಮಸ್ತ ನಾಗರಿಕರು ಚುನಾವಣೆಯ ಪೂರ್ವದಲ್ಲಿ ಸಹಾಯ ಸಹಕಾರವನ್ನು ನೀಡಿದ್ದೀರಿ ಅದಕ್ಕೆ ನಾನು ಆಭಾರಿಯಾಗಿದ್ದೇನೆ.

ಈ ಗ್ರಾಮ ಅಭಿವೃದ್ಧಿ ಪಥದಲ್ಲಿ ಸಾಗುವಲ್ಲಿ  ಉತ್ತಮ ಕಾರ್ಯ ಚಟುವಟಿಕೆಗಳಿಗೆ ಯೋಜನೆಗಳಿಗೆ ಆಗುವಂತಹ ಕೆಲಸಗಳಿಗೆ ನನ್ನ ಸಹಕಾರವಿದೆ ಅದೇ ರೀತಿ ಇನ್ನೂ ಭಟ್ಕಳ ತಾಲೂಕಿನ ಹಲವಾರು ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ವೈಯಕ್ತಿಕವಾಗಿ  ಜನಸ್ಪಂದನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಿದ್ದೇನೆ.

ಆದ್ದರಿಂದ ಹಾಡುವಳ್ಳಿ ಪಂಚಾಯತ ವ್ಯಾಪ್ತಿಯಲ್ಲಿ ಸಾರ್ವಜನಿಕರು, ವೈಯಕ್ತಿಕ ಮತ್ತು  ತಮ್ಮ ಊರಿನ ಕುಂದು-ಕೊರತೆಯಬಗ್ಗೆ ನಡೆಯಬೇಕಾಗಿರತಕ್ಕಂತ ಯೋಜನೆಗಳ ಬಗ್ಗೆ ನಿಮ್ಮೊಂದಿಗೆ ಸಮಗ್ರವಾಗಿ ಚರ್ಚೆ ನಡೆಸಿ ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೆನೆ.ನಿಮ್ಮ ಸಹಕಾರ ನನಗೆ ಅತ್ಯಗತ್ಯ ಎಂದು ತಿಳಿಸಿದರು.

ಹಾಡುವಳ್ಳಿ ಗ್ರಾಮಸ್ಥರು 250ಕ್ಕೂ ಅಧಿಕ ಕುಂದು ಕೊರತೆಗಳ ಮನವಿಯನ್ನ ಸಚಿವರು ಸ್ವೀಕರಿಸಿದರು.

ಈ ಕಾರ್ಯಕ್ರಮದ ವೇದಿಕೆಯಲ್ಲಿ ಹಾಡುವಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಧರ್ ಶೆಟ್ಟಿ, ತಾಲೂಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್ ನಾಯ್ಕ್ , ಗೊಂಡ ಸಮಾಜದ ಹಿರಿಯ ಮುಖಂಡ ಸೋಮಯ್ಯ ಗೊಂಡ, ಗ್ಯಾರಂಟಿ
ಅನುಷ್ಟಾನ ಸಮಿತಿಯ ಅಧ್ಯಕ್ಷ ರಾಜು ನಾಯ್ಕ್ ಸುರೇಶ್ ನಾಯ್ಕ್ ಮಂಜುನಾಥ್ ನಾಯ್ಕ್ ಬೆಳಕೆ , ಗ್ರಾಮ ಪಂಚಾಯಿತಿಯ ಎಲ್ಲಾ ಸದಸ್ಯರುಗಳು ಊರಿನ ಗ್ರಾಮಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

  • santhosha ram

    “ಮೆಟ್ರೋ ನ್ಯೂಸ್ 7” ಚಾನೆಲ್ ಸ್ಥಳೀಯ ವಿಚಾರಗಳಿಗೆ ಸಂಬಂಧಪಟ್ಟ ಸುದ್ದಿಯಿಂದ ಹಿಡಿದು ರಾಜ್ಯಮಟ್ಟದ ಸುದ್ದಿಗಳನ್ನು ಜನರಿಗೆ ಮುಟ್ಟಿಸುವ ಸಣ್ಣ ಪ್ರಯತ್ನವಾಗಿದೆ. 🙏

    Related Posts

    ಗಾಂಜಾ ಪೀಡಿತ ಪ್ರದೇಶಗಳಲ್ಲಿ ಶ್ವಾನ ತಪಾಸಣೆ ಮೂಲಕ ಎಚ್ಚರಿಸಿದ ಪೊಲೀಸ್ ಇಲಾಖೆ

    ಮೆಟ್ರೋ ವರದಿ ಮೈಸೂರು ನ.21 ನಗರದಲ್ಲಿ ಗಾಂಜಾ ಪೀಡಿತ ಹೆಚ್ಚಾದ ಕಾರಣ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಜಾ ಪೀಡಿತ ಪ್ರದೇಶಗಳಾದ ಸುನ್ನಿ ಚೌಕ ಮತ್ತು ನರಸಿಂಹರಾಜ ಠಾಣಾ ವ್ಯಾಪ್ತಿಯ ಶಾಂತಿ ನಗರ ಹಾಗೂ ಉದಯಗಿರಿ ಠಾಣಾ ಸರಹದ್ದಿನಲ್ಲಿ ಟೀ ಅಂಗಡಿ…

    ಸರ್ಕಾರಿ ಶಾಲೆಗಳಿಗೆ ದಾನಿಗಳ ನೆರವು ಅತ್ಯಗತ್ಯ / ಶಿಕ್ಷಣ ತಜ್ಞ ದೇವಿದಾಸ್ ಸುಬ್ರಾಯ್ ಶೇಟ್

    ವರದಿ ನಾರಾಯಣಸ್ವಾಮಿ ಸಿ.ಎಸ್ ಹೊಸಕೋಟೆ ನ 20ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಹಾಗೂ ಶಾಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಸರ್ಕಾರಿ ಶಾಲೆಗಳಿಗೆ ದಾನಿಗಳ ನೆರವು ಅತ್ಯಗತ್ಯ ಎಂದು ಶಿಕ್ಷಣ ತಜ್ಞ ದೇವಿದಾಸ್ ಸುಬ್ರಾಯ್ ಶೇಟ್ ತಿಳಿಸಿದರು. ತಾಲೂಕಿನ ಅತ್ತಿಬೆಲೆ ಸರ್ಕಾರಿ ಹಿರಿಯ ಪ್ರಾಥಮಿಕ…

    You Missed

    ಗಾಂಜಾ ಪೀಡಿತ ಪ್ರದೇಶಗಳಲ್ಲಿ ಶ್ವಾನ ತಪಾಸಣೆ ಮೂಲಕ ಎಚ್ಚರಿಸಿದ ಪೊಲೀಸ್ ಇಲಾಖೆ

    ಗಾಂಜಾ ಪೀಡಿತ ಪ್ರದೇಶಗಳಲ್ಲಿ ಶ್ವಾನ ತಪಾಸಣೆ ಮೂಲಕ ಎಚ್ಚರಿಸಿದ ಪೊಲೀಸ್ ಇಲಾಖೆ

    ಸರ್ಕಾರಿ ಶಾಲೆಗಳಿಗೆ ದಾನಿಗಳ ನೆರವು ಅತ್ಯಗತ್ಯ / ಶಿಕ್ಷಣ ತಜ್ಞ ದೇವಿದಾಸ್ ಸುಬ್ರಾಯ್ ಶೇಟ್

    ಸರ್ಕಾರಿ ಶಾಲೆಗಳಿಗೆ ದಾನಿಗಳ ನೆರವು ಅತ್ಯಗತ್ಯ / ಶಿಕ್ಷಣ ತಜ್ಞ ದೇವಿದಾಸ್ ಸುಬ್ರಾಯ್ ಶೇಟ್

    ಕೆ.ಎಸ್.ಹೆಗಡೆ  ಮಂಗಳೂರು ಆಸ್ಪತ್ರೆಯ ಖ್ಯಾತ ವೈದ್ಯರಿಂದಭಟ್ಕಳ್  ತಾಲೂಕಾ  ಆಸ್ಪತ್ರೆಯಲ್ಲಿ ನವೆಂಬರ್ 24 ರಂದು ವೈದ್ಯಕೀಯ ಶಿಬಿರ.

    ಕೆ.ಎಸ್.ಹೆಗಡೆ  ಮಂಗಳೂರು ಆಸ್ಪತ್ರೆಯ ಖ್ಯಾತ ವೈದ್ಯರಿಂದಭಟ್ಕಳ್  ತಾಲೂಕಾ  ಆಸ್ಪತ್ರೆಯಲ್ಲಿ ನವೆಂಬರ್ 24 ರಂದು ವೈದ್ಯಕೀಯ ಶಿಬಿರ.

    ಕನಕದಾಸರು ನಾಡು ಕಂಡ ಅಪ್ರತಿಮ ದಾಸ ಶ್ರೇಷ್ಠರು / ಶಾಸಕ ಶರತ್ ಬಚ್ಚೇಗೌಡ

    ಕನಕದಾಸರು ನಾಡು ಕಂಡ ಅಪ್ರತಿಮ ದಾಸ ಶ್ರೇಷ್ಠರು / ಶಾಸಕ ಶರತ್ ಬಚ್ಚೇಗೌಡ

    ಉತ್ತಮ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ ವಿತರಿಸಿದ

    ಉತ್ತಮ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ ವಿತರಿಸಿದ

    ಭಾರತದ ಪ್ರಸಿದ್ಧ ಕ್ರಿಕೆಟ್ ಆಟಗಾರ ಸೂರ್ಯಕುಮಾರ್ ಯಾದವ್ / ಕುಕ್ಕೆ ಸುಬ್ರಹ್ಮಣ್ಯ ಆಡಳಿತ ಮಂಡಳಿಯಿಂದ ಸನ್ಮಾನ

    ಭಾರತದ ಪ್ರಸಿದ್ಧ ಕ್ರಿಕೆಟ್ ಆಟಗಾರ ಸೂರ್ಯಕುಮಾರ್ ಯಾದವ್ / ಕುಕ್ಕೆ ಸುಬ್ರಹ್ಮಣ್ಯ ಆಡಳಿತ ಮಂಡಳಿಯಿಂದ ಸನ್ಮಾನ