ವರದಿ :ಲೋಕೇಶ್ ನಾಯ್ಕ್ ಭಟ್ಕಳ
ಸಚಿವ ಜಮಿರ್ ಅಹ್ಮದ್ ಖಾನ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಕ್ಫ ಬೋರ್ಡ್ ಹೆಸರಿನಲ್ಲಿ ಸಾವಿರಾರು ರೈತರ ಜಮೀನುಗಳನ್ನು ಕಬಳಿಸಲು ಹೊರಟಿದೆ.ರೈತರ ಹೆಸರಿನಲ್ಲಿರೋ ಜಮೀನು ರಾತ್ರೋರಾತ್ರಿ ವಕ್ಫ ಆಸ್ತಿಯಾಗಿ ಬದಲಾಗುತ್ತಿದೆ ಎಂದು ಭಟ್ಕಳ ಬಿಜೆಪಿ ಮಂಡಳ ಅಧ್ಯಕ್ಷ ಲಕ್ಷ್ಮೀನಾರಾಯಣ.
ಭಟ್ಕಳ ನವೆಂಬರ್ 1
ತಾಲೂಕಿನ ಬಿಜೆಪಿ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅಲ್ಪಸಂಖ್ಯಾತರ ಓಲೈಸುವ ನಿಟ್ಟಿನಲ್ಲಿ ಕಾಂಗ್ರೆಸ್ ಆಡಳಿತದ ರಾಜ್ಯ ಸರ್ಕಾರ ಈ ಕೆಲಸಕ್ಕೆ ಕೈ ಹಾಕಿದೆ. ಇದರಿಂದಾಗಿ ರೈತರು ಬೀದಿ ಪಾಲಾಗುವ ಪರಿಸ್ಥಿತಿ ಬಂದೊದಗಿದೆ. ಷರಿಯಾ ಕಾನೂನಿನ ಅಡಿಯಲ್ಲಿ ಕೆಲಸ ಮಾಡುವ ಕಾಂಗ್ರೆಸ್ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ದೇಶದ ಕಾನೂನಿನ ಪಾಠ ಕಲಿಸಬೇಕಾಗುತ್ತದೆ. ರೈತರು ಯಾವುದಕ್ಕೂ ನಾಳೆಯಿಂದಲೇ ತಮ್ಮ ಜಮೀನಿನ ಪಹಣಿಯನ್ನು ತೆಗೆದು ಪರಿಶೀಲಿಸುವುದು ಒಳ್ಳೆಯದು. ಅನ್ಯಾಯಕ್ಕೊಳಗಾದ ರೈತರ ಪರವಾಗಿ ಬಿಜೆಪಿ ಪಕ್ಷ ಹೋರಾಟಕ್ಕೆ ಸದಾ ಸಿದ್ದವಾಗಿದೆ. ನವೆಂಬರ್ 4 ರಂದು ತಹಶಿಲ್ದಾರರ ಕಛೇರಿ ಎದುರು ಪಕ್ಷಾತೀತವಾಗಿ ಬೃಹತ್ ಪ್ರತಿಭಟನೆಯನ್ನು ಕೈಗೊಳ್ಳತ್ತಿದ್ದೇವೆ ಎಂದರು.
ಬಿಜೆಪಿ ಮುಖಂಡರಾದ ಗೋವಿಂದ ನಾಯ್ಕ ಮಾತನಾಡಿ ಕಾಂಗ್ರೆಸ್ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದ ದಿನದಿಂದಲೂ ಸರಣಿ ಹಗರಣದಲ್ಲಿ ತೊಡಗಿಸಿಕೊಂಡಿದೆ. ವಕ್ಫ್ ಬೋರ್ಡ್ ಕಾನೂನು ತಿದ್ದುಪಡಿ ವಿಚಾರದಲ್ಲಿ ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ರೈತರು ಆಸ್ತಿಯನ್ನು ಕಬಳಿಸುವ ನಿಟ್ಟಿನಲ್ಲಿ ಮುಂದಾಗಿದೆ ಸಚಿವ ಜಮಿರ್ ಅಹ್ಮದ್ ನಿರ್ದೇಶನದಂತೆ ಅಧಿಕಾರಿ ವರ್ಗ ಕೆಲಸ ಮಾಡಿತ್ತಿದೆ. ಮುಂದಿನ ದಿನಗಳಲ್ಲಿ ಇದು ನಮ್ಮ ಜಿಲ್ಲೆಗೂ ಮುಂದುವರೆಯುತ್ತದೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಹಿಂದುಳಿದ ಮೊರ್ಚಾದ ರಾಜ್ಯ ಉಪಾಧ್ಯಕ್ಷ ಈಶ್ವರ ನಾಯ್ಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಬ್ರಾಯ ದೇವಾಡಿಗ, ಸುರೇಶ ನಾಯ್ಕ ಕೋಣೆಮನೆ.ಭಾಸ್ಕರ್ ದೈಮನೆ, ರಾಘವೇಂದ್ರ ನಾಯ್ಕ್ ಶ್ರೀನಿವಾಸ ನಾಯ್ಕ ಮತ್ತಿತರರು ಇದ್ದರು.