ಶಿವಮೊಗ್ಗ ೨೫ ಜೂ
ಶಿವಮೊಗ್ಗ ಟೌನ್ ವಾದಿ-ಎ-ಹುದಾ ವಾಸಿ ಮಹಮ್ಮದ್ ಜೈದಾನ್ ಮತ್ತು ಶಿವಮೊಗ್ಗ ಟೌನ್ ಲಕ್ಷರ್ ಮೊಹಲ್ಲಾದ ವಾಸಿ ನಕೀ ಅಲಿ ಇಬ್ಬರ ನಡುವೆ ಯಾವುದೋ ವಿಚಾರವಾಗಿ ಹಿಂದೆ ಜಗಳವಾಗಿದ್ದು, ಸದರಿ ಜಗಳದ ವಿಚಾರವಾಗಿ ದಿನಾಂಕಃ 29-10-2021 ರಂದು ರಾತ್ರಿ ಶಿವಮೊಗ್ಗ ಟೌನ್ ವಾದಿ-ಎ-ಹುದಾ ಹತ್ತಿರ ನಕೀ ಅಲಿ ಮತ್ತು ಮಹಮ್ಮದ್ ಅಬು ಸ್ವಲೇಹ ಇಬ್ಬರೂ ಸೇರಿಕೊಂಡು ಮಹಮ್ಮದ್ ಜೈದಾನ್ ನ ಮೇಲೆ ಹರಿತವಾದ ಆಯುಧಗಳಿಂದ ಮಾರಣಾಂತಿಕ ಹಲ್ಲೆ ಮಾಡಿ ಕೊಲೆ ಮಾಡಿರುತ್ತಾರೆಂದು ಮೃತನ ತಂದೆ ನೀಡಿದ ದೂರಿನ ಮೇರೆಗೆ ತುಂಗಾನಗರ ಪೊಲೀಸ್ ಠಾಣೆ ಗುನ್ನೆ ಸಂಖ್ಯೆ 0353/2021 ಕಲಂ 302 ಸಹಿತ 34 ಐಪಿಸಿ ರೀತ್ಯಾ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುತ್ತದೆ.
ಪ್ರಕರಣದಲ್ಲಿ ಆಗಿನ ತನಿಖಾಧಿಕಾರಿಗಳಾದ ಶ್ರೀ ದೀಪಕ್ ಎಂ.ಎಸ್, ಪೊಲೀಸ್ ನಿರೀಕ್ಷಕರು, ತುಂಗಾನಗರ ಪೊಲೀಸ್ ಠಾಣೆ ರವರು ಪ್ರಕರಣದ ತನಿಖೆ ಪೂರೈಸಿ ಆರೋಪಿತರ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿರುತ್ತಾರೆ.
ಘನ ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಶ್ರೀಮತಿ ಪಿ. ಓ. ಪುಷ್ಪಾ . ಸರ್ಕಾರಿ ಅಭಿಯೋಜಕರು, ಪ್ರಕರಣದ ವಾದ ಮಂಡಿಸಿದ್ದು, ಘನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ನಡೆದು, ಪ್ರಕರಣದ ಆರೋಪಿಗಳಾದ 1) ಮಹಮ್ಮದ್ ನಖಿ ಅಲಿ @ ನಖಿ @ ಮಣಿ, 21 ವರ್ಷ, ಲಕ್ಷರ್ ಮೊಹಲ್ಲಾ, ಶಿವಮೊಗ್ಗ ಟೌನ್, 2) ಮಹಮ್ಮದ್ ಅಬು ಸ್ವಲೇಹ @ ಅಬು @ ಸೋನು, 21 ವರ್ಷ, ಇಲಿಯಾಸ್ ನಗರ, ಶಿವಮೊಗ್ಗ ಟೌನ್ ಇವರುಗಳ ವಿರುದ್ಧ ಆರೋಪ ದೃಡಪಟ್ಟ ಹಿನ್ನೆಲೆಯಲ್ಲಿ, ಮಾನ್ಯ ನ್ಯಾಯಾಧಿಶರಾದ ಶ್ರೀಮತಿ ಪಲ್ಲವಿ ಬಿ.ಆರ್ ರವರು ದಿನಾಂಕ:-24-06-2024 ರಂದು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ ರೂ 50,500/- ದಂಡ ವಿಧಿಸಿದ್ದು, ಮೃತನ ತಂದೆ ಮತ್ತು ತಾಯಿ ಇಬ್ಬರಿಗೂ ದಂಡದ ಮೊತ್ತದಲ್ಲಿ ತಲಾ 40,000/- ಮತ್ತು ಸರ್ಕಾರದಿಂದ ಸೂಕ್ತ ಪರಿಹಾರ ನೀಡಲು ಆದೇಶಿಸಿರುತ್ತಾರೆ.
ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ
ವರದಿ: ಲೋಕೇಶ್ ನಾಯ್ಕ .ಭಟ್ಕಳ ಭಟ್ಕಳ : ನವೆಂಬರ್ 23ರಾಜ್ಯದಲ್ಲಿ ನಡೆದ ಉಪಚುನಾವಣೆ ಮೂರು ಕ್ಷೇತ್ರಗಳಲ್ಲಿ ಕಾಂಗ್ರೇಸ್ ಪಕ್ಷ ಭರ್ಜರಿ ಜಯ. ಭಟ್ಕಳದಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಂದ ಸಂಮ್ಸುದ್ದೀನ ಸರ್ಕಲ್ ನಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ . ಈ ಸಂದರ್ಭದಲ್ಲಿ…