ವರದಿ :ಲೋಕೇಶ್ ನಾಯ್ಕ್ ಭಟ್ಕಳ.
ಅರಣ್ಯ ಇಲಾಖೆಯ ಕಾಂಪಾ ಯೋಜನೆಯಡಿ ನೂತನವಾಗಿ ನಿರ್ಮಿಸಲಾಗಿರುವ ವಸತಿಗೃಹ ಸಂಕಿರ್ಣವನ್ನು ಉದ್ಘಾಟಿಸಿದ ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು.
ಭಟ್ಕಳ :ನ. 12
ಭಟ್ಕಳದಾದ್ಯಂತ ಸುಮಾರು ನೂರಕ್ಕೂ ಹೆಚ್ಚು ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದು ಮುಂಬರುವ ದಿನಗಳಲ್ಲಿ ಅವರ ಸಂಖ್ಯೆಗೆ ಅನುಗುಣವಾಗಿ ವಸತಿ ಗೃಹಗಳನ್ನು ನಿರ್ಮಿಸುವ ನಿಟ್ಟಿನಲ್ಲಿ ಪ್ರಯತ್ನಿಸುತ್ತೆನೆ ಎಂದು ಸಚಿವ ಮಂಕಾಳ ವೈದ್ಯ ಹೇಳಿದರು.
ತಾಲೂಕಿನ ಸಾಗರ ರಸ್ತೆಯಲ್ಲಿ ಅರಣ್ಯ ಇಲಾಖೆಯ ಮುಂಚೂಣಿ ಅಧಿಕಾರಿಗಳಿಗೆ ಕಾಂಪಾ ಯೋಜನೆಯಡಿ ನೂತನವಾಗಿ ನಿರ್ಮಿಸಲಾಗಿರುವ ವಸತಿಗೃಹ ಸಂಕಿರ್ಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಾಲೂಕಿನಾದ್ಯಂತ ಶಿಥಿಲಾವಸ್ಥೆಯಲ್ಲಿ ಇರುವ ವಸತಿ ಗೃಹಗಳನ್ನು ಕೂಡ ಮುಂದಿನ ದಿನಗಳಲ್ಲಿ ದುರಸ್ಥಿಪಡಿಸುವ ಅಥವಾ ಹೊಸದಾಗಿ ನಿರ್ಮಾಣ ಮಾಡುವ ಕೆಲಸ ಮಾಡಲಾಗುತ್ತದೆ.
ಪರಿಸರಕ್ಕೆ ಅತ್ಯಂತ ಅಗತ್ಯವಾದ ಅರಣ್ಯ ರಕ್ಷಣೆಯ ಕೆಲಸವನ್ನು ಅರಣ್ಯ ಇಲಾಖೆ ನಿರ್ವಹಿಸುತ್ತಿದ್ದು ಇಂತಹ ಇಲಾಖೆಗೆ ವಸತಿ ಸಂಕಿರ್ಣ ನಿರ್ಮಾಣದಂತಹ ಅದ್ಭುತ ಕಾರ್ಯಗಳನ್ನು ಮಾಡಿಕೊಟ್ಟಿರುವ ಮುಖ್ಯಮಂತ್ರಿಗಳಿಗೆ ಧನ್ಯವಾದಗಳನ್ನು ಸಮರ್ಪಿಸಿದರು.
ಸುಮಾರು 85 ಲಕ್ಷ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ನೂತನ ವಸತಿ ಗೃಹ ಸಂಕಿರ್ಣ ನಿರ್ಮಾಣವಾಗಿದ್ದು ಒಂದೊಂದು ಗೃಹಗಳು ಎರಡು ಕೋಣೆಗಳು, ಹಾಲ್, ಅಡುಗೆ ಕೊಣೆಗಳನ್ನು ಹೊಂದಿದೆ.
ಈ ಸಂದರ್ಭದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಯೋಗೇಶ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗಿರೀಶ ಪಿ.ಬಿ, ಭಟ್ಕಳ ವಲಯ ಅರಣ್ಯಾಧಿಕಾರಿ ವಿಶ್ವನಾಥ ಎ.ವಿ, ಮಂಕಿ ವಲಯ ಅರಣ್ಯಾಧಿಕಾರಿ ಶರತ್ ಶೆಟ್ಟಿ ಹಾಗೂ ಭಟ್ಕಳ ಉಪ ವಿಭಾಗದ ಸಿಬ್ಬಂದಿಗಳು ಹಾಜರಿದ್ದರು.