ವರದಿ ನಾರಾಯಣಸ್ವಾಮಿ ಸಿ.ಎಸ್
ಹೊಸಕೋಟೆ ನ 20
ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಹಾಗೂ ಶಾಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಸರ್ಕಾರಿ ಶಾಲೆಗಳಿಗೆ ದಾನಿಗಳ ನೆರವು ಅತ್ಯಗತ್ಯ ಎಂದು ಶಿಕ್ಷಣ ತಜ್ಞ ದೇವಿದಾಸ್ ಸುಬ್ರಾಯ್ ಶೇಟ್ ತಿಳಿಸಿದರು.
ತಾಲೂಕಿನ ಅತ್ತಿಬೆಲೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೊಸಕೋಟೆ ಪತ್ರಕರ್ತರ ಕ್ಷೇಮಾಭಿವೃದ್ಧಿ ಟ್ರಸ್ಟ್
ವತಿಯಿಂದ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದರು
ಸರ್ಕಾರಿ ಶಾಲೆಗಳಿಗೆ ಸರ್ಕಾರ ಎಷ್ಟೇ ಅನುದಾನಗಳನ್ನು ಕೊಟ್ಟರು ಸಹ ಮಕ್ಕಳ ಕಲಿಕೆಗೆ ಪೂರಕವಾಗುವಷ್ಟು ಸೌಲಭ್ಯಗಳು ದಕ್ಕುತ್ತಿಲ್ಲ. ಇನ್ನು ಸರ್ಕಾರಿ ಶಾಲೆಗಳಿಗೆ ಬಡ ಮಧ್ಯಮ ವರ್ಗದ ಮಕ್ಕಳು ಹೆಚ್ಚಾಗಿ ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳಿಗೆ ಶೈಕ್ಷಣಿಕ ಪ್ರಗತಿಗೆ ಪೂರಕವಾಗುವಂತೆ ದಾನಿಗಳ ನೆರವು ಅತ್ಯಗತ್ಯ ಎಂದರು.
ಹೊಸಕೋಟೆ ಪತ್ರಕರ್ತರ ಕ್ಷೇಮಾಭಿವೃದ್ಧಿ ಟ್ರಸ್ಟ್ ನಿರ್ದೇಶಕ ಎಂ ಆರ್ ಉಮೇಶ್ ಮಾತನಾಡಿ ನಮ್ಮ ಟ್ರಸ್ಟ್ ವತಿಯಿಂದ ಹಲವಾರು ಸಾಮಾಜಿಕ ಕೆಲಸ ಕಾರ್ಯಗಳನ್ನು
ಮಾಡುವ ಉದ್ದೇಶ ಹೊಂದಿದ್ದು ಅದರ ಪ್ರಥಮ ಭಾಗವಾಗಿ ತಾಲೂಕಿನ ಹಲವಾರು ಶಾಲೆ ಮಕ್ಕಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಣೆ ಮಾಡುವ ಕಾರ್ಯವನ್ನು ರೂಪಿಸಿದ್ದೇವೆ. ಆದ್ದರಿಂದ ದಾನಿಗಳು ನೀಡಿದ ಕಲಿಕಾ ಸಾಮಗ್ರಿಗಳನ್ನ ಪಡೆದುಕೊಂಡು ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ಚಂದ್ರಪ್ಪ.ಟಿ.ವಿ, ಸಹ ಶಿಕ್ಷಕಿ ಎಸ್. ಆರ್ ವಸಂತ, ಎಸ್.ಡಿ.ಎಂ.ಸಿ ಸದಸ್ಯರಾದ ನಾರಾಯಣ ಗೌಡ, ಲಕ್ಷ್ಮೀ ನಾರಾಯಣ, ಪವಿತ್ರ, ಪ್ರೇಮ, ಅತಿಥಿಗಳಾದ ಭವಾನಿ, ಸುಧಾಮಣಿ ಹಾಜರಿದ್ದರು.
ಗಾಂಜಾ ಪೀಡಿತ ಪ್ರದೇಶಗಳಲ್ಲಿ ಶ್ವಾನ ತಪಾಸಣೆ ಮೂಲಕ ಎಚ್ಚರಿಸಿದ ಪೊಲೀಸ್ ಇಲಾಖೆ
ಮೆಟ್ರೋ ವರದಿ ಮೈಸೂರು ನ.21 ನಗರದಲ್ಲಿ ಗಾಂಜಾ ಪೀಡಿತ ಹೆಚ್ಚಾದ ಕಾರಣ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಜಾ ಪೀಡಿತ ಪ್ರದೇಶಗಳಾದ ಸುನ್ನಿ ಚೌಕ ಮತ್ತು ನರಸಿಂಹರಾಜ ಠಾಣಾ ವ್ಯಾಪ್ತಿಯ ಶಾಂತಿ ನಗರ ಹಾಗೂ ಉದಯಗಿರಿ ಠಾಣಾ ಸರಹದ್ದಿನಲ್ಲಿ ಟೀ ಅಂಗಡಿ…