ಮೆಟ್ರೋ ಬ್ರೇಕಿಂಗ್ ಜುಲೈ 23
ಆದಾಯ ತೆರಿಗೆಗೆ ಸಂಬಂಧಿಸಿದ ಮಹತ್ವದ ಘೋಷಣೆ
ಬಜೆಟ್ ಭಾಷಣದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆದಾಯ ತೆರಿಗೆಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಮಾಡಿದ್ದಾರೆ.
ಬಜೆಟ್ ನಲ್ಲಿ ಮಧ್ಯಮ ವರ್ಗದವರಿಗೆ ಸರ್ಕಾರ ಉಡುಗೊರೆ ನೀಡಿದೆ. ಹೊಸ ತೆರಿಗೆ ಪದ್ಧತಿಯಲ್ಲಿ ಸ್ಟ್ಯಾಂಡರ್ಡ್ ಡಿಡಕ್ಷನ್ ಅನ್ನು 50 ಸಾವಿರದಿಂದ 75000 ರೂ.ಗೆ ಹೆಚ್ಚಿಸಲಾಗಿದೆ.
ಆದಾಯ ತೆರಿಗೆ ಸ್ಲ್ಯಾಬ್‌ನಲ್ಲಿ ಪ್ರಮುಖ ಬದಲಾವಣೆ
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆದಾಯ ತೆರಿಗೆ ಸ್ಲ್ಯಾಬ್‌ನಲ್ಲಿ ಪ್ರಮುಖ ಬದಲಾವಣೆಗಳನ್ನು ಘೋಷಿಸಿದ್ದಾರೆ.
ಈಗ ಸ್ಟ್ಯಾಂಡರ್ಡ್ ಡಿಡಕ್ಷನ್ ಮಿತಿಯನ್ನು 50 ಸಾವಿರದಿಂದ 75 ಸಾವಿರಕ್ಕೆ ಹೆಚ್ಚಿಸಲಾಗಿದೆ. ಈ ವ್ಯವಸ್ಥೆಯಲ್ಲಿ 3 ಲಕ್ಷದವರೆಗಿನ ಆದಾಯಕ್ಕೆ ತೆರಿಗೆ ಇರುವುದಿಲ್ಲ. 3 ರಿಂದ 7 ಲಕ್ಷದವರೆಗಿನ ಆದಾಯದ ಮೇಲೆ ಶೇಕಡಾ 5 ರಷ್ಟು ಆದಾಯ ತೆರಿಗೆಯನ್ನು ಪಾವತಿಸಬೇಕಾಗುತ್ತದೆ. 7ರಿಂದ 10 ಲಕ್ಷ ಆದಾಯವಿದ್ದರೆ ಶೇ.10ರಷ್ಟು ಆದಾಯ ತೆರಿಗೆ ವಿಧಿಸಲಾಗುತ್ತದೆ. 10 ರಿಂದ 12 ಲಕ್ಷ ತೆರಿಗೆಯ ಆದಾಯದ ಮೇಲೆ ಶೇಕಡಾ 15 ರ ದರದಲ್ಲಿ ಆದಾಯ ತೆರಿಗೆಯನ್ನು ವಿಧಿಸಲಾಗುತ್ತದೆ. 12 ರಿಂದ 15 ಲಕ್ಷ ತೆರಿಗೆಯ ಆದಾಯದ ಮೇಲೆ 20 ಪ್ರತಿಶತ ಆದಾಯ ತೆರಿಗೆಯನ್ನು ವಿಧಿಸಲಾಗುತ್ತದೆ. 15 ಲಕ್ಷಕ್ಕಿಂತ ಹೆಚ್ಚಿನ ತೆರಿಗೆಯ ಆದಾಯದ ಮೇಲೆ ಶೇಕಡಾ 30 ರ ದರದಲ್ಲಿ ಆದಾಯ ತೆರಿಗೆಯನ್ನು ವಿಧಿಸಲಾಗುತ್ತದೆ.
ವರದಿ ಮೆಟ್ರೋ ನ್ಯೂಸ್
ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ
ವರದಿ: ಲೋಕೇಶ್ ನಾಯ್ಕ .ಭಟ್ಕಳ ಭಟ್ಕಳ : ನವೆಂಬರ್ 23ರಾಜ್ಯದಲ್ಲಿ ನಡೆದ ಉಪಚುನಾವಣೆ ಮೂರು ಕ್ಷೇತ್ರಗಳಲ್ಲಿ ಕಾಂಗ್ರೇಸ್ ಪಕ್ಷ ಭರ್ಜರಿ ಜಯ. ಭಟ್ಕಳದಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಂದ ಸಂಮ್ಸುದ್ದೀನ ಸರ್ಕಲ್ ನಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ . ಈ ಸಂದರ್ಭದಲ್ಲಿ…