ಭಟ್ಕಳ ಬಿಜೆಪಿ ಕಾರ್ಯಾಲಯದಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಹಾಗೂ ಮಂಡಲ ಮಹಿಳಾ ಮೋರ್ಚಾ ಸಹಯೋಗ ದೊಂದಿಗೆ ರಾಷ್ಟ್ರೀಯ ಕೈ ಮಗ್ಗ ದಿನಾಚರಣೆಯನ್ನು ಆಚರಿಸಲಾಯಿತು.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮಂಡಲದ ಅಧ್ಯಕ್ಷರಾದ ಶ್ರೀಯುತ ಲಕ್ಷ್ಮೀ ನಾರಾಯಣ ನಾಯ್ಕ ರವರು ದೀಪಪ್ರಜ್ವಲಿಸುವುದರ ಮೂಲಕ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷರಾದ ಶಿವಾನಿಶಾಂತರಾಮವರು ವಹಿಸಿದ್ದರು.
ಕಾರ್ಯಕ್ರಮದ ಅಂಗವಾಗಿ ಕಸೂತಿ, ಉಲನ್ ನೆಯ್ಗೆ, ಕರಕುಶಲ ತಯಾರಿಕೆ ಹೊಲಿಗೆ ತರಬೇತಿ ಗಳನ್ನು ಕಳೆದ 20ವರ್ಷಗಳಿಂದ ಹಲವಾರು ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದ ಶ್ರೀಮತಿ ಶಾಂತಿ ವೆಂಕಟೇಶ್ ನಾಯ್ಕ್ ಹಾಗೂ ಶ್ರೀಮತಿ ಗಾಯತ್ರಿ ಪ್ರದೀಪ್ ಹರಿದಾಸ ರವರನ್ನು ಗುರುತಿಸಿ ಸನ್ಮಾನಿಸಲಾಯಿತು.
ವಿಶೇಷವಾಗಿ ನಮ್ಮ ಭಟ್ಕಳ ದ ಗ್ರಾಮೀಣ ಪ್ರತಿಭೆ ವೃಂದ ಆರ್ ಜೋಗಿ ಇವರು ಬಿ ಬಿ ಎ ಯಲ್ಲಿ ಕರ್ನಾಟಕ ವಿಶ್ವ ವಿದ್ಯಾಲಯ ನಡೆಸುವ ಪದವಿ ಪರೀಕ್ಷೆಯಲ್ಲಿ 2 ನೇ rank ಪಡೆದಿದ್ದು ಇವರನ್ನು ಮಹಿಳಾ ಮೋರ್ಚಾ ವತಿಯಿಂದ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಉಪಸ್ಥಿತ ರಿದ್ದ ಜಿಲ್ಲಾ ಕಾರ್ಯದರ್ಶಿ ಸುಬ್ರಾಯ ದೇವಾಡಿಗ ಕೈ ಮಗ್ಗ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಮಂಡಲದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಾಯ್ಕ್,ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ಸುನೀತಾ ಉಪಸ್ಥಿತರಿದ್ದರು.
ಕಾರ್ಯಕ್ರಮದ ನಿರ್ವಹಣೆ ಹಾಗೂ ಧನ್ಯವಾದ ವನ್ನು ಮಂಡಲ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕುಪ್ಪು ಗೊಂಡ ಅವರು ನಿರ್ವಹಿಸಿದರು.
ಮೋರ್ಚಾದ ಹಾಗೂ ಜಿಲ್ಲಾ ಪದಾಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು
ಲೋಕೇಶ್ ನಾಯ್ಕ್ ಭಟ್ಕಳ.