ಭಟ್ಕಳದ ತಾಲೂಕಾ ಕ್ರೀಡಾಂಗಣದಲ್ಲಿ ತಾಲೂಕಾ ಆಡಳಿತ, ತಾಲೂಕಾ ಪಂಚಾಯತ್ ಹಾಗೂ ಪಟ್ಟಣ ಪಂಚಾಯತ್ ಜಾಲಿ ಇವರ ಸಂಯುಕ್ತಾಶ್ರಯದಲ್ಲಿ 78 ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.
ಸಹಾಯಕ ಆಯುಕ್ತರಾದ ಡಾ.ನಯನಾ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಅನೇಕ ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಸುಖವನ್ನು ಮರೆತು ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದರ ಫಲವಾಗಿ ನಾವಿಂದು ಸ್ವಾತಂತ್ರ್ಯದ ಸವಿಯನ್ನು ಅನುಭವಿಸುವ ಅವಕಾಶ ದೊರಕಿದೆ. ನಮ್ಮ ದೇಶ ಅನೇಕ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡಿದೆ. ಇಂದು ಚಂದ್ರನ ದಕ್ಷಿಣ ಭಾಗವನ್ನು ಮುಟ್ಟಿರುವ ಜಗತ್ತಿನ ಏಕೈಕ ದೇಶ ಭಾರತವಾಗಿದೆ ಎಂದರು.
ಡಾ. ನಯನಾ, ಸಹಾಯಕ ಆಯುಕ್ತರು
ತಾಲೂಕಿನ ವಿವಿಧ ಶಾಲಾ ಕಾಲೇಜುಗಳ ಎನ್.ಸಿ.ಸಿ ಹಾಗೂ ಸೌಟ್ ಗೈಡ್ಸ್ ವಿದ್ಯಾರ್ಥಿಗಳು ಭಟ್ಕಳ ಶಹರಾ ಠಾಣಾಧಿಕಾರಿ ಶಿವಾನಂದ ನಾವದಗಿಯವರ ನೇತೃತ್ವದಲ್ಲಿ ಆಕರ್ಷಕ ಪಥಸಂಚಲನ ನಡೆಸಿ ಗಮನ ಸೆಳೆದರು.
ಈ ಸಂದರ್ಭದಲ್ಲಿ ಕಳೆದ ಶೈಕ್ಷಣಿಕ ಸಾಲಿನಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಭಟ್ಕಳದ ಸರ್ಕಾರಿ ನೌಕರ ಸಂಘದ ಪ್ರಾಯೋಜಕತ್ವದಲ್ಲಿ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ತಹಶಿಲ್ದಾರ ನಾಗರಾಜ ನಾಯ್ಕಡ, ಜಾಲಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಎನ್ ಮಂಜಪ್ಪ, ಪುರಸಭೆ ಮುಖ್ಯಾಧಿಕಾರಿ ನೀಲಕಂಠ ಮೇಸ್ತಾ, ಪಶುವೈದ ಡಾ. ಶಿವಾನಂದ, ಪ್ರಕಾಶ ಶಿರಾಲಿ ಮತ್ತಿತರರು ಇದ್ದರು.
ಲೋಕೇಶ್ ನಾಯ್ಕ್ ಭಟ್ಕಳ.
ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ
ವರದಿ: ಲೋಕೇಶ್ ನಾಯ್ಕ .ಭಟ್ಕಳ ಭಟ್ಕಳ : ನವೆಂಬರ್ 23ರಾಜ್ಯದಲ್ಲಿ ನಡೆದ ಉಪಚುನಾವಣೆ ಮೂರು ಕ್ಷೇತ್ರಗಳಲ್ಲಿ ಕಾಂಗ್ರೇಸ್ ಪಕ್ಷ ಭರ್ಜರಿ ಜಯ. ಭಟ್ಕಳದಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಂದ ಸಂಮ್ಸುದ್ದೀನ ಸರ್ಕಲ್ ನಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ . ಈ ಸಂದರ್ಭದಲ್ಲಿ…