ಪ್ರಸಿದ್ದೀಯತ್ತ ಸಾಗುತ್ತಿದ್ದ ಕರಾವಳಿಯ ನಂಬಿಕೆಯ ಶ್ರೀ ಕೊರಗಜ್ಜನ ದೇವಸ್ಥಾನವನ್ನು ತೆರವುಗೊಳಿಸಿದ ಜಿಲ್ಲಾಡಳಿತ

ಮೈಸೂರು: ಆ 27
ಮೈಸೂರಲ್ಲಿ  ಇತ್ತೀಚಿಗಷ್ಟೇ ಹೆಸರು ಪಡೆದಿದ್ದ ಕರಾವಳಿಯ ನಂಬಿಕೆಯ ದೈವವೇ ಎಂಬ ಕೊರಗಜ್ಜನ ದೇವಸ್ಥಾನಾವು ಮೈಸೂರಿನ ಕೂರ್ಗಳ್ಳಿಯಲ್ಲಿ ನಿರ್ಮಾಣವಾಗಿತ್ತು.
ದೇವಸ್ಥಾನದ ಪ್ರಧಾನ ಅರ್ಚಕರಾಗಿ ಮನೋಜ್ ಕುಮಾರ್ ರವರು ಪೂಜೆ ನಡೆಸುತ್ತಿದ್ದರು ಈಗ ಅದೇ ದೇವಸ್ಥಾನ ತೆರವಿಗೆ ಸಾಕಷ್ಟು ಹಲವು ಚರ್ಚೆಗೀಡಾಗಿದೆ

ಮೈಸೂರಿನಲ್ಲಿ ನಿರ್ಮಿಸಲಾಗಿದ್ದ  ಕರಾವಳಿಯ ನಂಬಿಕೆ ಕೊರಗಜ್ಜನ ದೈವಸ್ಥಾನ ಸಾಕಷ್ಟು ಚರ್ಚೆಗೀಡಾಗಿತ್ತು. ಇದೀಗ ಮೈಸೂರು ಜಿಲ್ಲಾಡಳಿತ ಕೊರಗಜ್ಜ ದೈವಸ್ಥಾನವನ್ನು ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದೆ.

ಕೊರಗಜ್ಜನ ದೈವಸ್ಥಾನವನ್ನು ಯಾವುದೇ ವಿವಾದಕ್ಕೆ ಸಂಬಂಧಿಸಿದಂತೆ ತೆರವುಗೊಳಿಸಿಲ್ಲ, ಬದಲಾಗಿ ದೈವಸ್ಥಾನವನ್ನು ರಾಜಾಕಾಲುವೆ ಮೇಲೆ ನಿರ್ಮಿಸಲಾಗಿರುವ ಹಿನ್ನೆಲೆ, ಕೇರ್ಗಳ್ಳಿ ಗ್ರಾಮದ ಸರ್ವೇ ನಂಬರ್ 60 ರಲ್ಲಿ ಹಾದುಹೋಗಿದ್ದ ರಾಜ ಕಾಲುವೆ ಒತ್ತುವರಿ ಆಗಿದೆ ಎಂಬ ದೂರು ತಾಲೂಕು ಆಡಳಿತಕ್ಕೆ ಬಂದಿತ್ತು. ಅಕ್ರಮವಾಗಿ ದೈವಸ್ಥಾನ ನಿರ್ಮಿಸಲಾಗಿದೆ ಎಂಬ ಮಾಹಿತಿ ಇತ್ತು. ಈ ಕಾರಣ ಮೈಸೂರು ತಾಲೂಕು ಕೇರ್ಗಳ್ಳಿ ಗ್ರಾಮದಲ್ಲಿದ್ದ ಕೊರಗಜ್ಜ ದೈವಸ್ಥಾನವನ್ನು ಜೆಸಿಬಿಯ ಮೂಲಕ ತೆರವುಗೊಳಿಸಲಾಗಿದೆ.

ದಾಖಲೆಗಳನ್ನು ಪರಿಶೀಲಿಸಿ ಉಪವಿಭಾಗಾಧಿಕಾರಿ ಕೆ.ರಕ್ಷಿತ್ ಒತ್ತುವರಿಯಾಗಿರುವ ಬಗ್ಗೆ ಖಚಿತಪಡಿಸಿಕೊಂಡಿದ್ದಾರೆ. ಹಾಗೂ ಒತ್ತುವರಿಯನ್ನು ತೆರವುಗೊಳಿಸುವಂತೆ ಆದೇಶಿಸಿದ್ದಾರೆ.

ತಹಶೀಲ್ದಾರ್ ಕೆ.ಎಂ.ಮಹೇಶ್ ಕುಮಾರ್ ರವರು ಜಯಪುರ ಪೊಲೀಸರ ಭದ್ರತೆಯೊಂದಿಗೆ ಕಾರ್ಯಾಚರಣೆ ಮಾಡಿ ರಾಜಾಕಾಲುವೆಯ ಒತ್ತುವರಿ ಮಾಡಿಕೊಂಡು ನಿರ್ಮಿಸಲಾಗಿದ್ದ ಕೊರಗಜ್ಜ ದೈವಸ್ಥಾನವನ್ನು ನೆಲಸಮಗೊಳಿಸಿ ತೆರವುಗೊಳಿಸಿದ್ದಾರೆ.

ಈ ಸಮಯದಲ್ಲಿ ಜಯಪುರ ಹೋಬಳಿ ಉಪತಹಶೀಲ್ದಾರ್ ನಿಂಗಪ್ಪ, ರಾಜಸ್ವ ನಿರೀಕ್ಷಕರಾದ ಲೋಹಿತ್, ಹೋಬಳಿಯ ಗ್ರಾಮ ಆಡಳಿತ ಅಧಿಕಾರಿಗಳು, ಬೋಗಾದಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ನಗರಮಾಪನ ಯೋಜನಾಧಿಕಾರಿಗಳ ಕಚೇರಿ ಸಿಬ್ಬಂದಿ ಹಾಗೂ ಜಯಪುರ ಪೋಲೀಸ್ ಠಾಣೆ ಅಧಿಕಾರಿ ಹಾಗೂ ಸಿಬ್ಬಂದಿ ಭಾಗಿಯಾಗಿದ್ದರು.

ವರದಿ : ಮೆಟ್ರೋ ನ್ಯೂಸ್

  • santhosha ram

    “ಮೆಟ್ರೋ ನ್ಯೂಸ್ 7” ಚಾನೆಲ್ ಸ್ಥಳೀಯ ವಿಚಾರಗಳಿಗೆ ಸಂಬಂಧಪಟ್ಟ ಸುದ್ದಿಯಿಂದ ಹಿಡಿದು ರಾಜ್ಯಮಟ್ಟದ ಸುದ್ದಿಗಳನ್ನು ಜನರಿಗೆ ಮುಟ್ಟಿಸುವ ಸಣ್ಣ ಪ್ರಯತ್ನವಾಗಿದೆ. 🙏

    Related Posts

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ವರದಿ : ಲೋಕೇಶ್ ನಾಯ್ಕ .ಭಟ್ಕಳ. ಭಟ್ಕಳ .ನವೆಂಬರ್‌ 24.ಸರಕಾರಿ ತಾಲೂಕಾ ಆಸ್ಪತ್ರೆಯಲ್ಲಿ ಭಾನುವಾರ ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ…

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ವರದಿ: ಲೋಕೇಶ್ ನಾಯ್ಕ.ಭಟ್ಕಳ. ನಟ ಡಾಲಿ ಧನಂಜಯ  ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್. ಭಟ್ಕಳ: ನ.23ಮುರುಡೇಶ್ವರದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ವಿಶ್ವ ಮೀನುಗಾರಿಕಾ ದಿನಾಚರಣೆ(ಮತ್ರ್ಯಮೇಳ) ಕಾರ್ಯಕ್ರಮಕ್ಕೆ ಶನಿವಾರ ಆಗಮಿಸಿದ ಡಾಲಿ ಧನ ಧನಂಜಯ ನೇತ್ರಾಣಿ ದ್ವೀಪದಲ್ಲಿ ಸ್ಕೂಬ್ ಡೈವಿಂಗ್ ಮಾಡುವ…

    You Missed

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ