ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳೆಯರು ಬದುಕು ಕಂಡುಕೊಂಡಿದ್ದಾರೆ: ಉಮಾರಬ್ಬ
ವರದಿ : ನಾರಾಯಣಸ್ವಾಮಿ ಹೊಸಕೋಟೆ
ಹೊಸಕೋಟೆ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಾಕಷ್ಟು ಮಹಿಳೆಯರು ತಮ್ಮ ಬದುಕು ಕಟ್ಟಿಕೊಂಡಿದ್ದಾರೆ. ಈ ಯೋಜನೆಯು ಮಹಿಳೆಯರ ಸಬಲೀಕರಣದ ಜೊತೆಗೆ ಬಡ ಕುಟುಂಬಗಳಿಗೂ ಆರ್ಥಿಕ ಭದ್ರತೆ ಕಲ್ಪಿಸಿದೆ ಎಂದು ಧರ್ಮಸ್ಥಳ ಸಂಘದ ಮಾನ್ಯಜಿಲ್ಲಾ ನಿರ್ದೇಶಕ ರಾದ ಉಮಾರಬ್ಬ ಹೇಳಿದರು.
ಹೊಸಕೋಟೆ ತಾಲೂಕಿನ ಬೆಟ್ಟಹಳ್ಳಿ ಗ್ರಾಮದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಿದ್ದ ಮಹಿಳೆಯರಿಗೆ ಹೊಲಿಗೆ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ತರಬೇತಿಗೆ ಆಯ್ಕೆಯಾದ ಫಲಾನುಭವಿಗಳು ಆಸಕ್ತಿಯಿಂದ ತರಬೇತಿ ಪಡೆದು ಸ್ವ ಉದ್ಯೋಗ ಕೈಗೊಳ್ಳಬೇಕು ಎಂದು ತಿಳಿಸಿದರು.
ಜ್ಞಾನವಿಕಾಸ ವಿಭಾಗದ ಪ್ರಾದೇಶಿಕ ಯೋಜನಾಧಿಕಾರಿಗಳಾದ ಸಂಧ್ಯಾ ಶೆಟ್ಟಿ ಮೇಡಂ ಹೊಸಕೋಟೆ ತಾಲೂಕಿನ ಯೋಜನಾಧಿಕಾರಿಗಳಾದ ಹರೀಶ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆರಾದ ನಾಗವೇಣಿ ಅವರು ವಲಯದ ಮೇಲ್ವಿಚಾರವಲಯದ ಮೇಲ್ವಿಚಾರಕರಾದ ಚಂದನ್ ಸರ್ಜ್ಞಾನವಿಕಾಸ ಸಮನ್ವಯ ಅಧಿಕಾರಿಯಾದ ವಸಂತ ಸೇವಾ ಪ್ರತಿನಿಧಿಯಾದ ಪವಿತ್ರ ಎಲ್ಲಾ ಜ್ಞಾನ ವಿಕಾಸ ಸದಸ್ಯರು ಉಪಸ್ಥಿತರಿದ್ದರು
ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ
ವರದಿ : ಲೋಕೇಶ್ ನಾಯ್ಕ .ಭಟ್ಕಳ. ಭಟ್ಕಳ .ನವೆಂಬರ್ 24.ಸರಕಾರಿ ತಾಲೂಕಾ ಆಸ್ಪತ್ರೆಯಲ್ಲಿ ಭಾನುವಾರ ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ…