ಪರಿಸರ ಸಂರಕ್ಷಣೆ ಜತೆಯಲ್ಲಿ ಮಳೆ ನೀರು ಸಂರಕ್ಷಣೆಗೆ ಆಧ್ಯತೆ ನೀಡಿ ಉಮಾರಬ್ಬ  ಅಭಿಮತ

ವರದಿ ನಾರಾಯಣಸ್ವಾಮಿ ಸಿ.ಎಸ್

ಹೊಸಕೋಟೆ ಆ .31
ಪರಿಸರ ನಾಶದಿಂದ ಪ್ರಕೃತಿಯಲ್ಲಿ ಅಸಮತೋಲನ ಉಂಟಾಗಿ ಆನೇಕ ರೀತಿಯ ದುಷ್ಪರಿಣಾಮಗಳು ಉಂಟಾಗುತ್ತಿವೆ. ಮಕ್ಕಳಿಗೆ ನಾಶದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ ಪ್ರತಿಯೊಬ್ಬರು ಒಂದೊಂದು ಸಸಿಯನ್ನು ನೆಟ್ಟು ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು.

ಇದರಿಂದ ಮುಂದಿನ ಪೀಳಿಗೆಯ ಜನಾಂಗಕ್ಕೆ ಪರಿಸರ ಮತ್ತು ಅಮೂಲ್ಯವಾದ ನೀರನ್ನು ಉಳಿಸು ವಂತ ಕಾಯಕವಾಗಲಿದೆ.ಪರಿಸರ ನಮಗೆ ಸಾಕಷ್ಟು ಕೊಡುಗೆ ನೀಡುತ್ತಿದೆ.ನಾವು ಪರಿಸರದಲ್ಲಿ ಮರ ಗಿಡಗಳನ್ನು ಬೆಳೆಸುವ ಮೂಲಕ ಉತ್ತಮ ಪರಿಸರ ರೂಪಿಸುವ ಕಾರ್ಯವನ್ನು ಮಾಡಬೇಕು ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಉಮಾರಬ್ ಹೇಳಿದರು.

ಮಕ್ಕಳಿಗೆ ವಾತಾವರಣದ ನೀರು, ಪರಿಸರ, ಜಾಗೃತಿ ಮೂಡಿಸುವಂತೆ ಕೆಲಸಕ್ಕೆ ಹೆಚ್ಚಿನ ಒತ್ತು ನೀಡಿ ಹಿಂಗು ಗುಂಡಿ ಮಳೆ ನೀರು ಕೊಯ್ದನಂತರ ಯೋಜನೆಗಳನ್ನು ಮನೆಗಳಿಗೆ ಅಳವಡಿಸಿ ಮಳೆ ನೀರು ವ್ಯರ್ಥವಾಗಿ ಹರಿದು ಹೋಗದೆ ನಮ್ಮ ಮನೆಗಳ ಹಾಸು ಪಾಸಿನಲ್ಲಿ ಹಿಂಗು ವಂತೆ ಮಾಡಿದರೆ ಅಂತರ್ಜಲ ಹೆಚ್ಚಲಿದೆ.

ಪರಿಸರ ಸಂರಕ್ಷಣೆ ಬತೆಯಲ್ಲಿ ಮಳೆ ನೀರು ಸಂರಕ್ಷಣೆಗೆ ಆಧ್ಯತೆ ನೀಡಿ ಮಕ್ಕಳಿಗೆ ಇದರ ಮಹತ್ವ ಸಾರಬೇಕು ಹೊಸಕೋಟೆ ತಾಲೂಕಿನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಸಂಸ್ಥೆಯಿಂದ 4 ಕೋಟಿಯಷ್ಟು ಅನುದಾನಗಳನ್ನು ಬೇರೆ ಬೇರೆ ಯೋಜನೆಗಳಲ್ಲಿ ನೀಡಲಾಗಿದೆ.

ಕೆರೆ ಪರಿಸರ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಿದ್ದು ಸಾಮಾಜಿಕ ಕಾರ್ಯಕ್ರಮಗಳು ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ. ಪ್ರಸುತ್ತ ದಿನಗಳಲ್ಲಿ ನೀರುಮತ್ತು ಪರಿಸರ ಸಂರಕ್ಷಣೆ ನಮ್ಮಲ್ಲರ ಗುರಿಯಾಗಿರಬೇಕು ಎಂದರು.

ವಲಯ ಅರಣ್ಯಾಧಿಕಾರಿ ವೆಂಕಟೇಶ್ ಮಾತನಾಡಿ, ಕೆರೆಗಳಲ್ಲಿ ಗಿಡಗಳನ್ನು ನೆಡುವುದರಿಂದ ಪರಿಸರದಲ್ಲಿ ಮರ ಗಿಡ ಹೆಚ್ಚಳದ ಜತೆಗೆ ಕೆರೆಗಳನ್ನು ಒತ್ತುವರಿ ಯಿಂದ ತಡೆಯಬಹುದು.
ಅರಣ್ಯ ಇಲಾಖೆಯಿಂದ ಕೃಷಿ ಪೋತ್ಸಾ ಹ ಯೋಜನೆಯನ್ನು ರೈತರು ಸದ್ಬಳಕೆ ಮಾಡಿಕೊಂಡು ಪರಿಸರ ಸಂರಕ್ಷಣೆ ಮಾಡಬೇಕೆಂದು ತಿಳಿಸಿದರು .

ಇದೇ ಸಂದರ್ಭದಲ್ಲಿ ರೈತರಿಗೂ ಸಸಿಗಳನ್ನು ವಿತರಣೆ ಮಾಡಲಾಯಿತು. ಸಾಮಾಜಿಕ ವಲಯ ಅರಣ್ಯಾಧಿಕಾರಿ ರಾಘವೇಂದ್ರ, ಸಹಾಯಕ ಸಬ್ ಇನ್ ಪೆಕ್ಟರ್ ಕರಾರು ಹುಸೇನ್, ಗಿಡ್ಡಪ್ಪನಹಳ್ಳಿ ಗ್ರಾಪಂ ಅಧ್ಯಕ್ಷ ನವಿತಾ ಸುರೇಶ್, ನಿವೃತ್ತ ಪೊಲೀಸ್ ಅಧಿಕಾರಿ ಕೃಷ್ಣಪ್ಪ, ತಾಲೂಕು ಯೋಜನಾಧಿಕಾರಿ ಹರೀಶ್, ಧರ್ಮಗಳ ಸೇವಾ ಬಳಗ ಸದಸ್ಯ ಆನಂದ್, ಸಿದ್ದೇನಹಳ್ಳಿ ಗ್ರಾಮದ ಯುವ ಮುಖಂಡ ಪ್ರಕಾಶ್, ಬೆಟ್ಟಹಳ್ಳಿ ಆಂಜಿನಪ್ಪ, ವಲಯ ಮೇಲ್ವಿಚಾರಕ ಚಂದನ್, ಕೃಷಿ ಮೇಲ್ವಚಾರಕ ಚೇತನ್, ವಿಪತ್ತು ನಿರ್ವಹಣಾ ಸದಸ್ಯರು, ವಲಯ ಸೇವಾ ಪ್ರತಿನಿಧಿಗಳು, ರೈತ ಸಂಘದ ಸದಸ್ಯರು, ಗ್ರಾಮದ ಮುಖಂಡರು ಹಾಜರಿದ್ದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆವತಿಯಿಂದ ಪರಿಸರ ಬೆಳೆಸುವ ಹಾಗೂ ಅಂತರ್ಜಲ ವೃದ್ಧಿಗೆ ಪೂರಕವಾಗಿರುವ ಕೆರೆಗಳನ್ನು ಉಳಿಸಿ ಅಭಿವೃದ್ಧಿಪಡಿಸುವ ಮಹತ್ವಕಾಂಕ್ಷೆ ಕಾಠ್ಯಕ್ರಮಗಳನ್ನು ಅನುಷ್ಠಾನ ಮಾಡುತ್ತಿರುವುದರಿಂದ ಪ್ರಾಣಿ, ಪಕ್ಷಿಗಳಿಗೂ ಅಲ್ಲದೆ ಜನರಿಗೂ ತುಂಬಾ ಅನುಕೂಲವಾಗಲಿದೆ.

ಶಾಲಾ ಮಕ್ಕಳಿಗೆ ಪರಿಸರದ ಮಹತ್ವವನ್ನು ತಿಳಿಸುವ ಮೂಲಕ ಚಿಕ್ಕ ಮಕ್ಕಳ ಹಂತದಿಂದಲೇ ಪರಿಸರ ಉಳಿಸಿ ಬೆಳೆಸುವ ಜವಾಬ್ದಾರಿಯನ್ನು ನೀಡಬೇಕು
ಎಂ.ಆರ್ ಉಮೇಶ್, ಜಿಲ್ಲಾಧ್ಯಕ್ಷ

  • santhosha ram

    “ಮೆಟ್ರೋ ನ್ಯೂಸ್ 7” ಚಾನೆಲ್ ಸ್ಥಳೀಯ ವಿಚಾರಗಳಿಗೆ ಸಂಬಂಧಪಟ್ಟ ಸುದ್ದಿಯಿಂದ ಹಿಡಿದು ರಾಜ್ಯಮಟ್ಟದ ಸುದ್ದಿಗಳನ್ನು ಜನರಿಗೆ ಮುಟ್ಟಿಸುವ ಸಣ್ಣ ಪ್ರಯತ್ನವಾಗಿದೆ. 🙏

    Related Posts

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ವರದಿ : ಲೋಕೇಶ್ ನಾಯ್ಕ .ಭಟ್ಕಳ. ಭಟ್ಕಳ .ನವೆಂಬರ್‌ 24.ಸರಕಾರಿ ತಾಲೂಕಾ ಆಸ್ಪತ್ರೆಯಲ್ಲಿ ಭಾನುವಾರ ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ…

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ವರದಿ: ಲೋಕೇಶ್ ನಾಯ್ಕ.ಭಟ್ಕಳ. ನಟ ಡಾಲಿ ಧನಂಜಯ  ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್. ಭಟ್ಕಳ: ನ.23ಮುರುಡೇಶ್ವರದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ವಿಶ್ವ ಮೀನುಗಾರಿಕಾ ದಿನಾಚರಣೆ(ಮತ್ರ್ಯಮೇಳ) ಕಾರ್ಯಕ್ರಮಕ್ಕೆ ಶನಿವಾರ ಆಗಮಿಸಿದ ಡಾಲಿ ಧನ ಧನಂಜಯ ನೇತ್ರಾಣಿ ದ್ವೀಪದಲ್ಲಿ ಸ್ಕೂಬ್ ಡೈವಿಂಗ್ ಮಾಡುವ…

    You Missed

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ