ಭಟ್ಕಳ ತಾಲೂಕಿನ ಮುಖ್ಯವೃತ್ತದಲ್ಲಿ ಪಾದಾಚಾರಿಯೊಬ್ಬರ ಮೇಲೆ ಖಾಸಗಿ ಶಾಲಾ ವಾಹನದ ಚಾಲಕನೊರ್ವ ಕ್ಷುಲ್ಲಕ ಕಾರಣಕ್ಕಾಗಿ ನಡು ರಸ್ತೆಯಲ್ಲಿಯೇ ಹಲ್ಲೆ ನಡೆಸಿದ ಪ್ರಕರಣ ವರದಿಯಾಗಿದ್ದು ಹಲ್ಲೆಗೊಳಗಾದ ವ್ಯಕ್ತಿಗೆ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ದಿ .2.ಸೆ ಮದ್ಯಾಹ್ನ ಬಿಜೆಪಿ ಹಿಂದುಳಿದ ವರ್ಗದ ಯುವಾ ಮೋರ್ಚದ ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ನಾಯ್ಕ ಎನ್ ಹೆಚ್ 66 ರ ಮುಖ್ಯರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಕೋಲಾ ಪ್ಯಾರಡೈಸ್ ರಸ್ತೆಯಿಂದ ಬಂದ ಖಾಸಗಿ ಶಾಲೆಯ ವಾಹನವೊಂದು ಹಠಾತ್ತಾಗಿ ಇವರ ಮೇಲೆ ಎಗರಿ ಬಂದಿದ್ದು ಅವಘಡ ಸಂಭವಿಸುವ ಮಂಚೆಯೇ ಏಚ್ಚೆತ್ತುಕೊಂಡು ಬೇಜವ್ಧಾರಿ ಚಾಲನೆಯ ಬಗ್ಗೆ ಚಾಲಕನನ್ನು ಪ್ರಶ್ನಿಸಿದ್ದಕ್ಕೆ ಸಿಟ್ಟಿಗೆದ್ದ ಚಾಲಕ ನಡುರಸ್ತೆಯಲ್ಲಿ ತನ್ನ ವಾಹನವನ್ನು ನಿಲ್ಲಿಸಿ ಏಕಾಏಕಿ ಹಲ್ಲೆ ನಡೆಸಿ ಅವಾಚ್ಯ ಪದಗಳಿಂದ ನಿಂದಿಸಿ ಬೆದರಿಕೆ ಒಡ್ಡಿದ್ದಾನೆ ಎನ್ನಲಾಗಿದೆ.
ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಪ್ರಮುಖರು, ಹಿಂದೂ ಜಾಗರಣಾ ವೇಧಿಕೆಯ ಸದಸ್ಯರು ಹಾಜರಿದ್ದು ಕೃತ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಟ್ಟಣದಲ್ಲಿ ಇತ್ತೀಚೆಗೆ ಶಾಲಾ ಕಾಲೇಜುಗಳ ವಾಹನಗಳು ಅತಿವೇಗ ಹಾಗೂ ಅಜಾಗರೂಕವಾಗಿ ವಾಹನ ಚಲಾಯಿಸುತ್ತಿರುವ ಕುರಿತು ಸಾರ್ವಜನಿಕ ವಲಯದಲ್ಲಿ ಬಾರಿ ಆಕ್ರೋಶ ವ್ಯಕ್ತವಾಗಿದ್ದು. ಶಾಲಾ ವಾಹನಗಳ ಅತಿ ವೇಗದ ಚಾಲನೆಗೆ ಕಡಿವಾಣ ಹಾಕಬೇಕಾದ ಅನಿವಾರ್ಯತೆ ಸಂಬಂದಪಟ್ಟ ಇಲಾಖೆ ಯ ಮೇಲಿದೆ.
ವರದಿ : ಲೋಕೇಶ್ ನಾಯ್ಕ. ಭಟ್ಕಳ.
ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ
ವರದಿ : ಲೋಕೇಶ್ ನಾಯ್ಕ .ಭಟ್ಕಳ. ಭಟ್ಕಳ .ನವೆಂಬರ್ 24.ಸರಕಾರಿ ತಾಲೂಕಾ ಆಸ್ಪತ್ರೆಯಲ್ಲಿ ಭಾನುವಾರ ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ…