ವಿಮಾ ಕಂಪನಿಯ ಯಡವಟ್ಟಿಗೆ ಆಯೋಗದ ಚಾಟಿ

ವೈದ್ಯಕೀಯ ವೆಚ್ಚಮರುಪಾವತಿಸಲು ವಿಮಾ ಕಂಪನಿಗೆ ಆಯೋಗ ಆದೇಶ

ಶಿವಮೊಗ್ಗ, ಮೇ 28
ಅರ್ಜಿದಾರರಾದ ಶ್ರೀಮತಿ ಹೆಚ್. ಪ್ರೇಮಾ ಮತ್ತು ಹುಚ್ಚರಾಯಪ್ಪ ಬಿ.ಎಸ್. ದಂಪತಿಗಳು ಆದಿತ್ಯ ಬಿರ್ಲಾ ಹೆಲ್ತ್ ಇನ್ಸೂರೆನ್ಸ್ ಕಂ.ಲಿ., ಇವರ ವಿರುದ್ದ ಸೇವಾನ್ಯೂನ್ಯತೆ ಕುರಿತು ದಾಖಲಿಸಿದ್ದ ಪ್ರಕರಣದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಅರ್ಜಿದಾರರಿಗೆ ವಿಮಾ ಪರಿಹಾರ ಪಾವತಿಸುವಂತೆ ಎದುರುದಾರರಿಗೆ ಆದೇಶಿಸಿದೆ.

ಶ್ರೀಮತಿ ಹೇಮ ಇವರು ನಾರಾಯಣ ಹೃದಯಾಲಯದಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು ಸುಮಾರು 3 ಲಕ್ಷದ ವರೆಗೆ ವೈದ್ಯಕೀಯ ವೆಚ್ಚ ಭರಿಸಿರುತ್ತಾರೆ ಮತ್ತು ವೈದ್ಯಕೀಯ ವೆಚ್ಚವನ್ನು ಪಾಲಿಸಿ ನಿಯಮಗಳ ಪ್ರಕಾರ ಮರು ಪಾವತಿಸುವಂತೆ ಕೋರಿರುತ್ತಾರೆ.

ವಿಮಾ ಕಂಪನಿಯು ಅರ್ಜಿದಾರರು ವಿಮಾ ಪಾಲಿಸಿ ಪಡೆಯುವ ಪೂವ್ 5 ವರ್ಷಗಳಿಂದ ಸಕ್ಕರೆ ಖಾಯಿಲೆ ಮತ್ತು ಅಧಿಕ ರಕ್ತದ ಒತ್ತಡ ಖಾಯಿಲೆಗಳು ಇರುವ ಸಂಗತಿ ಮಾರೆಮಾಚಿರುತ್ತಾರೆ.

ಇದು ವಿಮಾ ಪಾಲಿಸಿಯಾ ನಿಬಂಧನೆಗಳ ಉಲ್ಲಂಘನೆಯಾಗಿರುವುದರಿಂದ, ಪಿರ್ಯಾದಿದಾರರು ವೈದ್ಯಕೀಯ ಪರಿಹಾರ ಪಡೆಯಲು ಅರ್ಹ ಆಗಿರುವುದಿಲ್ಲ ಎಂದು ತಿಳಿಸಿರುತ್ತಾರೆ.

ಈ ಸಂಬಂಧ ಆಯೋಗವು ಅರ್ಜಿದಾರರು ಹಾಜರುಪಡಿಸಿರುವ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಎದುರುದಾರರು ಕೇವಲ ತಾಂತ್ರಿಕ ಕಾರಣಗಳ ಆಧಾರದ ಮೇಲೆ ಫಿರ್ಯಾದುದಾರರಿಗೆ ವೈದ್ಯಕೀಯ ವೆಚ್ಚವನ್ನು ಮರುಪಾವತಿಸದಿರುವುದು ಸೇವಾನ್ಯೂನ್ಯತೆ ಎಂದು ಪರಿಗಣಿಸಿ ಪ್ರಕರಣವನ್ನು ಭಾಗಶಃ ಪುರಸ್ಕರಿಸಿರುತ್ತದೆ.

ಎದುರುದಾರರು ರೂ.1,76,951/- ಗಳ ವೈದ್ಯಕೀಯ ವೆಚ್ಚವನ್ನು ಶೇ.9% ಬಡ್ಡಿ ಸಮೇತ ಮರುಪಾವತಿಸ ಬೇಕು, ಹಾಗೂ ತಮ್ಮ ಸೇವಾ ನ್ಯೂನತೆಯಿಂದಾಗಿ ಉಂಟಾದ ಮಾನಸಿಕ ಹಿಂಸೆ ಮತ್ತು ಹಾನಿಗಳಿಗೆ ಸಂಬಂಧಿಸಿದಂತೆ ಪರಿಹಾರ ಹಾಗೂ ರೂ.30,000/- ಗಳನ್ನು ಮತ್ತು ವ್ಯಾಜ್ಯದ ಖರ್ಚು-ವೆಚ್ಚಗಳ ಬಾಬ್ತು ರೂ. 10,000/-ಗಳನ್ನು ಪಾವತಿಸಬೇಕೆಂದು ನಿರ್ದೇಶಿಸಿ ಆಯೋಗದ ಅಧ್ಯಕ್ಷರಾದ ಟಿ.ಶಿವಣ್ಣ, ಸದಸ್ಯರಾದ ಶ್ರೀಮತಿ ಸವಿತಾ ಬಿ.ಪಟ್ಟಣಶೆಟ್ಟಿ, ಬಿ.ಡಿ.ಯೋಗಾನಂದ ಬಾಂಡ್ಯ ಇವರ ಪೀಠವು ಮೇ.16 ರಂದು ಆದೇಶಿಸಿದೆ.

ವರದಿ ಸಂತೋಷ್ ರಾಮ್

  • santhosha ram

    “ಮೆಟ್ರೋ ನ್ಯೂಸ್ 7” ಚಾನೆಲ್ ಸ್ಥಳೀಯ ವಿಚಾರಗಳಿಗೆ ಸಂಬಂಧಪಟ್ಟ ಸುದ್ದಿಯಿಂದ ಹಿಡಿದು ರಾಜ್ಯಮಟ್ಟದ ಸುದ್ದಿಗಳನ್ನು ಜನರಿಗೆ ಮುಟ್ಟಿಸುವ ಸಣ್ಣ ಪ್ರಯತ್ನವಾಗಿದೆ. 🙏

    Related Posts

    ಗುಲ್ವಾಡಿ ಗ್ರಾಮ ಪಂಚಾಯಿತಿನಲ್ಲಿ ಗ್ರಾಮಸಭೆ,ಅಧಿಕಾರಿಗಳು ಹಾಗೂ ಪಿ. ಡಿ. ಓ ರನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು

    ಗುಲ್ವಾಡಿ ಗ್ರಾಮ ಪಂಚಾಯಿತಿನಲ್ಲಿ ಗ್ರಾಮಸಭೆ,ಅಧಿಕಾರಿಗಳು ಹಾಗೂ ಪಿ. ಡಿ. ಓ ರನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು. ಉಡುಪಿ : ಕುಂದಾಪುರ ತಾಲ್ಲೂಕಿನ ದಿನಾಂಕ 20-11-2024 ಗ್ರಾಮ ಸಭೆ ನಡೆದಿದ್ದು ಗ್ರಾಮದ ಕೆಲವೊಂದು ಮೂಲಭೂತ ಸೌಕರ್ಯಗಳ ಬಗ್ಗೆ ದೊಡ್ಡ ಮಟ್ಟದ ಚರ್ಚೆಯೊಂದು ನಡೆದಿತ್ತು.…

    ಸುಬ್ರಹ್ಮಣ್ಯ ಸೀನಿಯರ್ ಚೇಂಬರಿಗೆ ರಾಷ್ಟ್ರಾಧ್ಯಕ್ಷರ ಅಧಿಕೃತ ಭೇಟಿ.

    ವರದಿ ನಾಗೇಶ್ ಸುಬ್ರಹ್ಮಣ್ಯ ಸುಬ್ರಹ್ಮಣ್ಯ ನ.20: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಿಜನಿಗೆ ಈ ವರ್ಷ ರಾಷ್ಟ್ರ ಅಧ್ಯಕ್ಷರಾದ ಚಿತ್ರ ಕುಮಾರ್ ಅವರು ಮಂಗಳವಾರ ಅಧಿಕೃತ ಭೇಟಿ ನೀಡಿದರು. ಆರಂಭದಲ್ಲಿ ರಾಷ್ಟ್ರ ಅಧ್ಯಕ್ಷರನ್ನ ಕುಮಾರಧಾರ ದ್ವಾರದ ಬಳಿ ಸುಬ್ರಹ್ಮಣ್ಯ…

    You Missed

    ಗುಲ್ವಾಡಿ ಗ್ರಾಮ ಪಂಚಾಯಿತಿನಲ್ಲಿ ಗ್ರಾಮಸಭೆ,ಅಧಿಕಾರಿಗಳು ಹಾಗೂ ಪಿ. ಡಿ. ಓ ರನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು

    ಗುಲ್ವಾಡಿ ಗ್ರಾಮ ಪಂಚಾಯಿತಿನಲ್ಲಿ ಗ್ರಾಮಸಭೆ,ಅಧಿಕಾರಿಗಳು ಹಾಗೂ ಪಿ. ಡಿ. ಓ ರನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು

    ಸುಬ್ರಹ್ಮಣ್ಯ ಸೀನಿಯರ್ ಚೇಂಬರಿಗೆ ರಾಷ್ಟ್ರಾಧ್ಯಕ್ಷರ ಅಧಿಕೃತ ಭೇಟಿ.

    ಸುಬ್ರಹ್ಮಣ್ಯ ಸೀನಿಯರ್ ಚೇಂಬರಿಗೆ ರಾಷ್ಟ್ರಾಧ್ಯಕ್ಷರ ಅಧಿಕೃತ ಭೇಟಿ.

    ಷಷ್ಠಿ ಕುರಿತು ದೇವಸ್ಥಾನ ಆಡಳಿತ ಮಂಡಳಿ ವತಿಯಿಂದ ಸಭೆ

    ಷಷ್ಠಿ ಕುರಿತು ದೇವಸ್ಥಾನ ಆಡಳಿತ ಮಂಡಳಿ ವತಿಯಿಂದ ಸಭೆ

    ಇನ್ನೋವಾ ಕಾರಿಗೆ ಇನ್ಸುಲೇಟರ್ ಮೀನು ಗಾಡಿ ಡಿಕ್ಕಿ ನಾಲ್ವರ ಸ್ಥಿತಿ ಗಂಭೀರ…!

    ಇನ್ನೋವಾ ಕಾರಿಗೆ ಇನ್ಸುಲೇಟರ್ ಮೀನು ಗಾಡಿ ಡಿಕ್ಕಿ ನಾಲ್ವರ ಸ್ಥಿತಿ ಗಂಭೀರ…!

    ಕುಂದಾಪುರ ತಾಲ್ಲೂಕು ದಂಡಾಧಿಕಾರಿ ಶೋಭಾ ಲಕ್ಷ್ಮಿ  ಕರ್ತವ್ಯ ನಿರ್ವಹಿಸದೆ ಹೈಡ್ರಾಮ  ವಿದ್ಯಾರ್ಥಿಗಳಿಗೆ ಶಾಲೆಗೆ ಹೋಗಲು ದಾರಿ ಇಲ್ಲದೆ ಅಧಿಕಾರಿಗಳಿಂದ ಪಂಗನಾಮ…!  

    ಕುಂದಾಪುರ ತಾಲ್ಲೂಕು ದಂಡಾಧಿಕಾರಿ ಶೋಭಾ ಲಕ್ಷ್ಮಿ  ಕರ್ತವ್ಯ ನಿರ್ವಹಿಸದೆ ಹೈಡ್ರಾಮ  ವಿದ್ಯಾರ್ಥಿಗಳಿಗೆ ಶಾಲೆಗೆ ಹೋಗಲು ದಾರಿ ಇಲ್ಲದೆ ಅಧಿಕಾರಿಗಳಿಂದ ಪಂಗನಾಮ…!  

    ಗಾಂಜಾ ಪೀಡಿತ ಪ್ರದೇಶಗಳಲ್ಲಿ ಶ್ವಾನ ತಪಾಸಣೆ ಮೂಲಕ ಎಚ್ಚರಿಸಿದ ಪೊಲೀಸ್ ಇಲಾಖೆ

    ಗಾಂಜಾ ಪೀಡಿತ ಪ್ರದೇಶಗಳಲ್ಲಿ ಶ್ವಾನ ತಪಾಸಣೆ ಮೂಲಕ ಎಚ್ಚರಿಸಿದ ಪೊಲೀಸ್ ಇಲಾಖೆ