ವರದಿ : ಆರತಿ ಗಿಳಿಯಾರು ಉಡುಪಿ ಜಿಲ್ಲೆ
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳ ಒಕ್ಕೂಟದ ನೇತೃತ್ವದಲ್ಲಿ ಅನಿರ್ದಿಷ್ಟ ಪ್ರತಿಭಟನೆ.
ಉಡುಪಿ : ಅಕ್ಟೋಬರ್ 7
ರಾಜ್ಯದ ಶೇಕಡ 68 ರಿಂದ 70 ಜನರಿಗೆ ಸ್ಥಳೀಯ ಸಂಸ್ಥೆಯಾದ ಗ್ರಾಮ ಪಂಚಾಯತ್ ಗಳಿಂದ ಶೇಕಡ 70ರಷ್ಟು ಸೇವೆಗಳನ್ನು ನೀಡಲಾಗುತ್ತಿದೆ. ಈ ವ್ಯವಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು,ಕಾರ್ಯದರ್ಶಿಗಳು,ದ್ವಿತೀಯ ದರ್ಜೆ ಲೆಕ್ಕ ಸಹಾಯಕರುಗಳು, ಗ್ರಾಮ ಪಂಚಾಯಿತಿಯ ಎಲ್ಲಾ ಸಿಬ್ಬಂದಿ ವರ್ಗ ಕಾರ್ಯ ನಿರ್ವಹಣೆಯಲ್ಲಿ ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ಬಗೆ ಹರಿಸುವಂತೆ ಹಾಗೂ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸರ್ಕಾರ ಮತ್ತು ಇಲಾಖೆಗೆ ಹಲವಾರು ವರ್ಷಗಳಿಂದ ಮನವಿ ಸಲ್ಲಿಸುತ್ತಾ ಬಂದಿದ್ದರು ಯಾವುದೇ ಮನವಿಗಳಿಗೂ ಸ್ಪಂದಿಸದೆ ಕೇವಲ ಎಲ್ಲಾ ಸಮಸ್ಯೆಗಳಿಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ಹಾಗೂ ಸಿಬ್ಬಂದಿಗಳನ್ನು ನೇರ ಹೊಣೆಗಾರ ಮಾಡುತ್ತಿರುವ ಸರ್ಕಾರ ಮತ್ತು ಇಲಾಖೆಯ ಧೋರಣೆಗಳನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಕ್ಟೋಬರ್ 2 ರಿಂದ ರಾಜ್ಯಾದ್ಯಂತ ಗ್ರಾಮ ಪಂಚಾಯಿತಿ ಸೇವೆಗಳನ್ನು ನಿಲ್ಲಿಸಿ ಅನಿರ್ದಿಷ್ಟಾವಧಿ ಹೋರಾಟ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದು ಅದೇ ರೀತಿ ಅಕ್ಟೋಬರ್ 4 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಾವಧಿ ಹೋರಾಟದಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಎಲ್ಲಾ ವೃಂದದ ಸಂಘಗಳು ಹಾಗೂ ಗ್ರಾಮ ಪಂಚಾಯತ್ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ಎಲ್ಲಾ ನೌಕರರು ಭಾಗವಹಿಸಿದ್ದು ಅಲ್ಲದೆ ಈ ದಿನ ದಿನಾಂಕ ಅಕ್ಟೋಬರ್ 7 ರಂದು ಉಡುಪಿ ಜಿಲ್ಲಾ ಪಂಚಾಯತ್ ರಜತಾದ್ರಿ ಎದುರುಗಡೆ ಅನಿರ್ದಿಷ್ಟ ಮುಷ್ಕರವನ್ನು ಈ ದಿನದಂದು ಹಮ್ಮಿಕೊಂಡಿದ್ದರು.
1933ರ ಪಂಚಾಯತ್ ರಾಜ್ ಕಾಯ್ದೆ ಪ್ರಕರಣ 4ರ ಅನುಸಾರ 5,000 ದಿಂದ 7,000 ವರೆಗಿನ ಜನಸಂಖ್ಯೆಯುಳ್ಳ ಗ್ರಾಮ ಅಥವಾ ಗ್ರಾಮಗಳ ಗುಂಪಿಗೆ ಒಂದು ಗ್ರಾಮ ಪಂಚಾಯಿತಿ ಎಂದು ಘೋಷಣೆ ಮಾಡಲಾಗಿದೆ. ಬೆಳಗಾವಿ,ಚಿಕ್ಕಮಂಗಳೂರು, ದಕ್ಷಿಣ ಕನ್ನಡ,ಧಾರವಾಡ,ಹಾಸನ,ಕೊಡಗು, ಶಿವಮೊಗ್ಗ,ಉಡುಪಿ,ಹಾವೇರಿ, ಉತ್ತರ ಕನ್ನಡ ಜಿಲ್ಲೆಗಳಿಗೆ 25,000 ಜನ ಸಂಖ್ಯೆ ಹೊಂದಿರುವ ಗ್ರಾಮ ಅಥವಾ ಗ್ರಾಮಗಳ ಗುಂಪನ್ನು ಗ್ರಾಮ ಪಂಚಾಯಿತಿ ಎಂದು ಘೋಷಿಸಲಾಗಿದೆ.
ಮುಂದುವರೆಯುವುದು :-