ಶಿಕ್ಷಣಕ್ಕೆ ಅಂಗನವಾಡಿಗಳ ಗುಣಮಟ್ಟ ಮುಖ್ಯ ಶಾಸಕ ಶರತ್ ಬಚ್ಚೇಗೌಡ

ವರದಿ ನಾರಾಯಣಸ್ವಾಮಿ ಸಿ.ಎಸ್

ಶಿಕ್ಷಣಕ್ಕೆ ಅಂಗನವಾಡಿಗಳ ಗುಣಮಟ್ಟ ಮುಖ್ಯ ಶಾಸಕ ಶರತ್ ಬಚ್ಚೇಗೌಡ

ಹೊಸಕೋಟೆ ಅ.7
ಮನೆಗಳನ್ನು ನಿರ್ಮಾಣ ಮಾಡಲು
ತಳಪಾಯ ಎಷ್ಟು ಮುಖ್ಯವೋ, ಮಕ್ಕಳ ಗುಣ ಮಟ್ಟದ ಶಿಕ್ಷಣಕ್ಕೆ ಅಂಗನವಾಡಿಗಳು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ನಂದಗುಡಿ ಹೋಬಳಿಯ ಬೈಲನರಸಾಪುರದಲ್ಲಿ ನರೇಗಾ ಯೋಜನೆಯಡಿ 18 ಲಕ್ಷರೂ.ವೆಚ್ಚದಲ್ಲಿ ನೂತನ ಅಂಗನವಾಡಿ ಕೇಂದ್ರವನ್ನು ಲೋಕಾರ್ಪ ಣೆಗೊಳಿಸಿ ಮಾತನಾಡಿದರು. ಮಕ್ಕಳಿಗೆ ಪೂರ್ವ ಪ್ರಾಥಮಿಕ ಶಿಕ್ಷಣ ಅಂಗನವಾಡಿಗಳಿಂದಲೇ ಪ್ರಾರಂಭ ವಾಗಬೇಕು, ಆಗಲೇ ಮಕ್ಕಳ ಮನಸ್ಸಿನಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ದಾರಿಯಾಗುತ್ತದೆ.ಈಗಾಗಲ್ಲೇ ಹೊಸಕೋಟೆ ತಾಲ್ಲೂಕಿನಾದ್ಯಂತ ಅಂಗನವಾಡಿಗಳನ್ನು ನವೀಕರಣ ಮಾಡಲಾಗಿದೆ.ಇಲ್ಲಿನ ಶಿಕ್ಷಕರು, ಸಹಾಯಕರು ಅಂಗನವಾಡಿಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು.

ಸರಕಾರ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಪೂರಕವಾದ ಉತ್ತಮ ವಾತಾವರಣ ಕಲ್ಪಿಸಿ ಆಟದ ಸಾಮಗ್ರಿ ಮತ್ತು ಪೌಷ್ಟಿಕಾಂಶಯುಕ್ತ ಆಹಾರ ನೀಡಲಾಗುತ್ತದೆ.

ಕೇಂದ್ರದಲ್ಲಿ ನೋಡಿಕೊಳ್ಳಲು ಮಕ್ಕಳ ಪಾಲನೆ ಬಗ್ಗೆ ತರಬೇತಿ ಪಡೆದಿರುವ ಮಹಿಳಾ ಆರೈಕೆದಾರರನ್ನು ನಿಯೋಜಿಸಲಾಗಿದ್ದು, ಮಕ್ಕಳು, ಗರ್ಭಿಣಿ, ಬಾಣಂತಿಯರಿಗೆ ಸರಕಾರದ ಸವಲತ್ತು ಗಳನ್ನು ಪಡೆಯಲು ಸಹಕಾರಿಯಾಗಿದೆ. ಗ್ರಾಮೀಣ ಭಾಗದ ಮಹಿಳೆಯರು ತಮ್ಮ ಮೂರು ವರ್ಷದವರೆಗಿನ ಮಕ್ಕಳನ್ನು ಅಂಗನವಾಡಿ ಕೇಂದ್ರದಲ್ಲಿ ಬಿಟ್ಟು, ನೆಮ್ಮದಿಯಾಗಿ ತಮ್ಮ ದೈನಂದಿನ ಕೆಲಸ ಕಾರ್ಯಗಳಲ್ಲಿ ತೊಡಗಿಸಿ ಕೊಳ್ಳಬಹುದು. ಇದರಿಂದ ಮಕ್ಕಳನ್ನು ನೋಡಿಕೊಳ್ಳಲೆಂದೇ ಕೆಲಸ ಬಿಟ್ಟು ಮನೆಯಲ್ಲಿರಬೇಕಾದ ಸ್ಥಿತಿ ನಿರ್ಮಾಣವಾಗುವುದರಿಂದ ಮುಕ್ತರಾಗಬಹುದು ಎಂದರು.

ಈ ಸಂದರ್ಭದಲ್ಲಿ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ರಾಜಶೇಖರಗೌಡ, ಬ್ಲಾಕ್ ಕಾಂಗ್ರೆಸ್ಅಧ್ಯಕ್ಷಡಾ. ಸಗೀ‌ರ್ ಅಹಮದ್, ತಾಪಂನ ಸದಸ್ಯ ಮನ್ಸೂರ್ ಆಲಿಖಾನ್, ಎಸ್‌ಎಫ್‌ಸಿಎಸ್ ಅಧ್ಯಕ್ಷ ರವಿಶಂಕರ್, ನಿರ್ದೇಶಕರಾದಎಸ್. ಮಂಜುನಾಥ್, ಎನ್. ಶ್ರೀನಿವಾಸ್, ಗ್ರಾಪಂನ ಅಧ್ಯಕ್ಷೆ ಹಸೀನಾ ಖಾನಂ, ಸದಸ್ಯರಾದ ಬೈರೇಗೌಡ, ಗುರು, ತಾಪಂನ ಇಒ ಡಾ.ಸಿ.ಎನ್. ನಾರಾಯಣಸ್ವಾಮಿ, ಸಿಡಿಪಿಒ ಶಿವಮ್ಮ, ಪಿಡಿಒ ಸುರೇಶ್ ಕುಮಾರ್‌ ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.

  • santhosha ram

    “ಮೆಟ್ರೋ ನ್ಯೂಸ್ 7” ಚಾನೆಲ್ ಸ್ಥಳೀಯ ವಿಚಾರಗಳಿಗೆ ಸಂಬಂಧಪಟ್ಟ ಸುದ್ದಿಯಿಂದ ಹಿಡಿದು ರಾಜ್ಯಮಟ್ಟದ ಸುದ್ದಿಗಳನ್ನು ಜನರಿಗೆ ಮುಟ್ಟಿಸುವ ಸಣ್ಣ ಪ್ರಯತ್ನವಾಗಿದೆ. 🙏

    Related Posts

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ವರದಿ : ಲೋಕೇಶ್ ನಾಯ್ಕ .ಭಟ್ಕಳ. ಭಟ್ಕಳ .ನವೆಂಬರ್‌ 24.ಸರಕಾರಿ ತಾಲೂಕಾ ಆಸ್ಪತ್ರೆಯಲ್ಲಿ ಭಾನುವಾರ ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ…

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ವರದಿ: ಲೋಕೇಶ್ ನಾಯ್ಕ.ಭಟ್ಕಳ. ನಟ ಡಾಲಿ ಧನಂಜಯ  ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್. ಭಟ್ಕಳ: ನ.23ಮುರುಡೇಶ್ವರದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ವಿಶ್ವ ಮೀನುಗಾರಿಕಾ ದಿನಾಚರಣೆ(ಮತ್ರ್ಯಮೇಳ) ಕಾರ್ಯಕ್ರಮಕ್ಕೆ ಶನಿವಾರ ಆಗಮಿಸಿದ ಡಾಲಿ ಧನ ಧನಂಜಯ ನೇತ್ರಾಣಿ ದ್ವೀಪದಲ್ಲಿ ಸ್ಕೂಬ್ ಡೈವಿಂಗ್ ಮಾಡುವ…

    You Missed

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ