ನೀರು ಮಾರಾಟ ದಂಧೆ ಅವ್ಯಾಹತ : ನೀರು ಮಾರಾಟಕ್ಕೆ ಕೃಷಿ ಜಮೀನು ಅಕ್ರಮ ವಿದ್ಯುತ್ ಸಂಪರ್ಕ: ಕಣ್ಮುಚ್ಚಿ ಕುಳಿತ ಸ್ಥಳಿಯ ಆಡಳಿತ / ಅಧಿಕಾರಿಗಳ ಕುಮ್ಮಕ್ಕು ಆರೋಪ

ವರದಿ : ನಾರಾಯಣಸ್ವಾಮಿ ಸಿ.ಎಸ್ ಹೊಸಕೋಟೆ 

ತಾಲೂಕಿನಲ್ಲಿ  ನೀರು ಮಾರಾಟ ದಂಧೆ ಅವ್ಯಾಹತ
ನೀರು ಮಾರಾಟಕ್ಕೆ ಕೃಷಿ ಜಮೀನು ಅಕ್ರಮ ವಿದ್ಯುತ್ ಸಂಪರ್ಕ
ಕಣ್ಮುಚ್ಚಿ ಕುಳಿತ ಸ್ಥಳಿಯ ಆಡಳಿತ . ಅಧಿಕಾರಿಗಳ ಕುಮ್ಮಕ್ಕು ಆರೋಪ

ಸಿಲಿಕಾನ್‌ ಸಿಟಿಯಲ್ಲಿನ ನೀರಿನ ಅಭಾವವನ್ನು ಬಂಡವಾಳವಾಗಿಸಿಕೊಂಡಿರುವ ಖಾಸಗಿ ಟ್ಯಾಂಕರ್‌ ಮಾಲೀಕರು ಬೆಂಗಳೂರು ನಗರ ವ್ಯಾಪ್ತಿಗೆ ಹೊಂದಿಕೊಂಡಿರುವ ಗ್ರಾಮಾಂತರ ಪ್ರದೇಶಗಳನ್ನು ಟಾರ್ಗೆಟ್ ಮಾಡಿ ಕೊಳವೆ ಬಾವಿಗಳನ್ನು ಕೊರೆಸಿ ಟ್ಯಾಂಕರ್ ಮೂಲಕ ನಗರ ಭಾಗದ ಅಪಾರ್ಟ್ಮೆಂಟ್ , ವಾಣಿಜ್ಯ ಮಳಿಗೆಗಳಿಗ ನೀರು ಪೂರೈಕೆ ಮಾಡುವ ದಂಧೆ ನಡೆಸುತ್ತಿದ್ದಾರೆ.

ಹೊಸಕೋಟೆ ತಾಲೂಕಿನ ಅನುಗೊಂಡನಹಳ್ಳಿ ಹೋಬಳಿಯ ಹಲವು ಗ್ರಾಮಗಳಲ್ಲಿ ಅವ್ಯಾಹತವಾಗಿ ನಡೆಯುತ್ತಿದ್ದ ಅಕ್ರಮ ಟ್ಯಾಂಕರ್ ನೀರು ಮಾರಾಟ ದಂಧೆಗೆ ಆ ಭಾಗದ ಗ್ರಾಮಸ್ಥರಗಳ ವಿರೋಧ ಹಾಗೂ ಪ್ರತಿಭಟನೆಯಿಂದ ಬ್ರೇಕ್ ಬಿದ್ದಿತ್ತು. ಈಗ ಕೆಲವು ವಾರಗಳಿಂದ ತಾಲೂಕಿನ ಕಸಬಾ ಹೋಬಳಿಯ ಸಮೇತನಹಳ್ಳಿ , ಕೊರಳೂರು , ಕೆ.ಮಲ್ಲಸಂದ್ರ ಸೇರಿದಂತೆ ಹಲವು ಗ್ರಾಮಗಳಲ್ಲಿ ಟ್ಯಾಂಕರ್ ನೀರು ಮಾರಾಟ ದಂಧೆ ಅವ್ಯಾಹತವಾಗಿ ನಡೆಯುತ್ತಿದ್ದು ನೀರಿನ ಟ್ಯಾಂಕರ್‌ ಮಾಫಿಯಾಗೆ ಕಡಿವಾಣ ಹಾಕುವವರೇ ಇಲ್ಲದಂತಾಗಿದೆ.

ಮನೆ ಬಳಕೆಗೆ ಹಾಗೂ ಕೃಷಿ ಚಟುವಟಿಕೆಗೆ ಎಂದು ವಿದ್ಯುತ್ ಸಂಪರ್ಕ ಪಡೆದು ಕೊಳವೆ ಬಾವಿ ಕೊರೆಸಿ ಟ್ಯಾಂಕರ್ ನೀರು ಸರಬರಾಜಿಗೆ ಬಳಸಿಕೊಳ್ಳುತಿರುವ ಪ್ರಕರಣಗಳು ಈ ಭಾಗದಲ್ಲಿ ಹೆಚ್ಚಾಗಿವೆ‌. ಇನ್ನು ಕೆಲವರು ಕೃಷಿ ಜಮೀನನ್ನು ಬಾಡಿಗೆ ಹಾಗೂ ಲೀಜ್ ಗೆ ಪಡೆದು ಕೊಳವೆ ಬಾವಿಗಳನ್ನು ಕೊರೆಸಿ ಜನರೇಟರ್ ಮೂಲಕವೂ ನೀರನ್ನು ಪಂಪ್ ಮಾಡಿ ಮಾರಾಟ ಮಾಡುತ್ತಿದ್ದಾರೆ. ಅಂತರ್ಜಲಕ್ಕೆ ಕನ್ನ ಹಾಕಿ ಅಕ್ರಮವಾಗಿ ನೀರು ಮಾರಾಟ ಮಾಡುವುದನ್ನು ಮುಟ್ಟುಗೋಲು ಹಾಕಿಕೊಳ್ಳುವ ಧೈರ್ಯವನ್ನು ಸ್ಥಳೀಯ ಆಡಳಿತ ಮತ್ತು ಜಲಮಂಡಳಿ ಅಧಿಕಾರಿಗಳು ತೋರುತ್ತಿಲ್ಲ. ಖಾಸಗಿ ನೀರು ಟ್ಯಾಂಕರ್‌ ಮಾರಾಟ ನಿಯಂತ್ರಣಕ್ಕೆ ಜಾರಿಗೆ ತಂದ ಕಾಯಿದೆಯು ಕಾಗದ ಬಿಟ್ಟು ಹೊರಬರಲಿಲ್ಲ.

ಕೋಟ್ – ಸಮೇತನಹಳ್ಳಿ ಲಕ್ಷ್ಮಣ್ ಸಿಂಗ್ – ರಾಜ್ಯಾಧ್ಯಕ್ಷರು ಮಾನವ ಹಕ್ಕುಗಳ ಜಾಗೃತಿ ಸಮಿತಿ

ಟ್ಯಾಂಕರ್ ನೀರನ್ನು ವಾಣಿಜ್ಯ ಉದ್ದೇಶಕ್ಕೆ ಬಳಸಲು ಕಾನೂನಿನಲ್ಲಿ ಅವಕಾಶ ಇಲ್ಲ. ಆದರೂ ಕೊಳವೆ ಬಾವಿಯ ನೀರನ್ನು ಮಾರಾಟ ಮಾಡುವ ದಂಧೆ ರಾಜಾರೋಷವಾಗಿಯೇ ನಡೆಯುತ್ತಿದೆ. ಇದಕ್ಕೆ ಅಂತರ್ಜಲ ನಿರ್ದೇಶನಾಲಯವಾಗಲೀ, ಸ್ಥಳೀಯಾಡಳಿತ ಸಂಸ್ಥೆಗಳ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಅಕ್ರಮ ಟ್ಯಾಂಕರ್ ನೀರು ಮಾರಾಟ ಮಾಫಿಯಾಗೆ ಸ್ಥಳೀಯ ಅಧಿಕಾರಿಗಳೇ ಕುಮ್ಮಕ್ಕು ನೀಡುತ್ತಿದ್ದು ಅಂತರ್ಜಲಕ್ಕೆ ಕುತ್ತು ತರುವ ಈ ದಂಧೆಯನ್ನು ತಾಲೂಕಿನಾದ್ಯಂತ ಸಂಪೂರ್ಣವಾಗಿ ಸ್ಥಗಿತಗೊಳಿಸಬೇಕು.

ಕೋಟ್ – ನಾರಾಯಣಸ್ವಾಮಿ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ

ಟ್ಯಾಂಕರ್ ಮೂಲಕ ನೀರು ಮಾರಾಟ ಮಾಡಲು ಗ್ರಾ.ಪಂಚಾಯತಿ ವ್ಯಾಪ್ತಿಯಲ್ಲಿ ಅನುಮತಿ ಇಲ್ಲ. ಈ ಬಗ್ಗೆ ತಾಲೂಕಿನಾದ್ಯಂತ ಸಾಕಷ್ಟು ದೂರುಗಳು ಬಂದಿದ್ದು ಕಡಿವಾಣ ಹಾಕಲು ಕ್ರಮ ಕೈಗೊಳ್ಳಲಾಗಿದ್ದೆ. ತಾಲೂಕಿನಲ್ಲಿ ಸಂಪೂರ್ಣವಾಗಿ ಅಕ್ರಮ ನೀರು ಮಾರಾಟ ತಡೆಗಟ್ಟವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗುವುದು

ಫೋಟೋ 1- 08 HSKG 01
ಟ್ಯಾಂಕರ್ ಗೆ ನೀರು ತುಂಬಿಸುತ್ತಿರುವುದು

ಫೋಟೋ 2- 08 HSKG 02
ಟ್ರಾಕ್ಟರ್ ಮೂಲಕ ನೀರು ಸರಬರಾಜು ಮಾಡುತ್ತಿರುವುದು

  • santhosha ram

    “ಮೆಟ್ರೋ ನ್ಯೂಸ್ 7” ಚಾನೆಲ್ ಸ್ಥಳೀಯ ವಿಚಾರಗಳಿಗೆ ಸಂಬಂಧಪಟ್ಟ ಸುದ್ದಿಯಿಂದ ಹಿಡಿದು ರಾಜ್ಯಮಟ್ಟದ ಸುದ್ದಿಗಳನ್ನು ಜನರಿಗೆ ಮುಟ್ಟಿಸುವ ಸಣ್ಣ ಪ್ರಯತ್ನವಾಗಿದೆ. 🙏

    Related Posts

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ವರದಿ : ಲೋಕೇಶ್ ನಾಯ್ಕ .ಭಟ್ಕಳ. ಭಟ್ಕಳ .ನವೆಂಬರ್‌ 24.ಸರಕಾರಿ ತಾಲೂಕಾ ಆಸ್ಪತ್ರೆಯಲ್ಲಿ ಭಾನುವಾರ ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ…

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ವರದಿ: ಲೋಕೇಶ್ ನಾಯ್ಕ.ಭಟ್ಕಳ. ನಟ ಡಾಲಿ ಧನಂಜಯ  ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್. ಭಟ್ಕಳ: ನ.23ಮುರುಡೇಶ್ವರದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ವಿಶ್ವ ಮೀನುಗಾರಿಕಾ ದಿನಾಚರಣೆ(ಮತ್ರ್ಯಮೇಳ) ಕಾರ್ಯಕ್ರಮಕ್ಕೆ ಶನಿವಾರ ಆಗಮಿಸಿದ ಡಾಲಿ ಧನ ಧನಂಜಯ ನೇತ್ರಾಣಿ ದ್ವೀಪದಲ್ಲಿ ಸ್ಕೂಬ್ ಡೈವಿಂಗ್ ಮಾಡುವ…

    You Missed

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ