ಪ್ರವಾದಿ ಮೊಹಮ್ಮದ್ ಪೈಗಂಬರ್ ನಿಂದಕ ಉತ್ತರಪ್ರದೇಶ ಯತಿ ನರಸಿಂಹನಂದಾ ಸ್ವಾಮಿಯನ್ನು ದೇಶದ್ರೋಹ ಪ್ರಕರಣದಡಿ ಬಂಧಿಸುವಂತೆ ತಂಝೀಮ್ ಆಗ್ರಹ

ವರದಿ :ಲೋಕೇಶ್  ನಾಯ್ಕ್ ಭಟ್ಕಳ.

ಪ್ರವಾದಿ ಮೊಹಮ್ಮದ್ ಪೈಗಂಬರ್ ನಿಂದಕ ಉತ್ತರಪ್ರದೇಶ ಯತಿ ನರಸಿಂಹನಂದಾ ಸ್ವಾಮಿಯನ್ನು ದೇಶದ್ರೋಹ ಪ್ರಕರಣದಡಿ ಬಂಧಿಸುವಂತೆ ತಂಝೀಮ್ ಆಗ್ರಹ.

ಭಟ್ಕಳ: ಅಕ್ಟೋಬರ್ 14
ಪ್ರವಾದಿ ಮುಹಮ್ಮದ್ ಪೈಗಂಬರರನ್ನು ಅತ್ಯಂತ ಅಸಭ್ಯವಾಗಿ ನಿಂದಿಸಿದ ಮನುಷ್ಯ ವಿರೋಧಿ ಯತಿ ನರಸಿಂಹ ನಂದ ಸರಸ್ವತಿ ಸ್ವಾಮಿಯನ್ನು ದೇಶದ್ರೋಹದ ಪ್ರಕರಣದಡಿ ಕೂಡಲೇ ಬಂಧಿಸುವಂತೆ ಆಗ್ರಹಿಸಿ ಭಟ್ಕಳದ ವಿವಿಧ ಸಂಘಸಂಸ್ಥೆಗಳ ಸಹಯೋಗದೊಂದಿಗೆ ಮಜಿಸೆ ಇಸ.ಹ-ವ-ತಂಝೀಮ್ ನೇತೃತ್ವದಲಿ ಸೋಮವಾರ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಜನರು ಸಹಾಯಕ ಆಯುಕ್ತರ ಮೂಲಕ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಮೂರ್ತಿಯವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಭಟ್ಕಳದ ಜಾಮಿಯಾ ಮಸೀದಿ ಖತೀಬ್ ಮತ್ತು ಇಮಾಮ್ ಮೌಲಾನ ಅಬ್ದುಲ್ ಅಲೀಮ್ ಕತೀಬ್ ನದಿ, ಪ್ರವಾದಿ ಮುಹಮ್ಮದ್ (ಸ)ರ ವಿರೋಧಿ ಕೇವಲ ಮುಸ್ಲಿಮರ ವಿರೋಧಿಯಲ… ಆತ ಹಿಂದೂ ವಿರೋಧಿಯೂ ಆಗಿದ್ದಾನೆ. ಪ್ರವಾದಿ ಮುಹಮ್ಮದ್ ಪೈಗಂಬರರ ಕುರಿತು ಎಲ್ಲ ಧರ್ಮದ ಧಾರ್ಮಿಕ ಪುಸ್ತಕಗಳಲಿ ಅವರನ್ನು ದೇವನ ಸಂದೇಶವಾಹಕರೆಂದು ಕರೆದಿವೆ. ಇಂತಹ ಪ್ರವಾದಿಯನ್ನು ನಿಂದಿಸುವಾತ ಕೇವಲ ಇಸ್ಲಾಮ್ ವಿರೋಧಿಯಲ, ಬದಲಾಗಿ ಎಲ್ಲ ಧರ್ಮದ ವಿರೋಧಿಯಾಗಿದ್ದಾನೆ. ಈತನ ಬಂಧನದ ಕುರಿತು ಕೇವಲ ಮುಸ್ಲಿಮರಷ್ಟೇ ಅಲ್ಲ.. ಹಿಂದೂಗಳು ಕೂಡ ಆಗ್ರಹಿಸಬೇಕು ಎಂದರು.

ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಕುಂಞ ಮಾತನಾಡಿ, ಪ್ರವಾದಿ ಮುಹಮ್ಮದ್ ಪೈಗಂಬರರ ಕುರಿತು ಆಸಭ್ಯವಾಗಿ ಮಾತನಾಡಿದ ಮನುಷ್ಯ ಕಳೆದ ಹತ್ತಾರು ವರ್ಷಗಳಿಂದ ಈ ದೇಶದ ಕಾನೂನು ಉಲ್ಲಂಘನೆ ಮಾಡುತ್ತಿದ್ದಾನೆ, ಪ್ರವಾದಿ ಮುಹಮ್ಮದ್ ರನ್ನು ನಿಂದಿಸುವುದರಿಂದ ಒಂದು ಸಮಾಜಕ್ಕೆ ನಷ್ಟ ಆಗುವುದಿಲ್ಲ.. ಬದಲಾಗಿ ಈ ದೇಶದ ಭದ್ರತೆ ಮತ್ತು ಅಖಂಡತೆಗೆ ಮಾರಕವಾಗಿದ್ದಾನೆ

ತಂಝೀಮ್ ಅಧ್ಯಕ್ಷ ಇನಾಯತುಲಾ, ಶಾಬಂದ್ರಿ ಮನವಿ ಸಲ್ಲಿ ಸಿ.ಮಾತನಾಡಿ, ಪ್ರವಾದಿ ಮುಹಮ್ಮದ್ ರು ಇಡಿ ಮನುಷ್ಯರ ಮಾರ್ಗದರ್ಶನಕ್ಕಾಗಿ ಬಂದಿದ್ದರು. ಅವರನ್ನು ನಿಂದಿಸುವುದು ಎಂದರೆ ಇಡಿ ಮನುಷ್ಯರನ್ನು ನಿಂದಿಸಿದಂತೆ. ಅ ಸ್ವಾಮೀಜಿ ಯ ನಿಂದನೆಯ ಹೇಳಿಕೆಯನ್ನು ಖಂಡಿಸಿ ಭಟ್ಕಳ ದಲ್ಲಿ ಶಾಂತ ರೀತಿಯಿಂದ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ದಾರೆ. ಉತ್ತರಪ್ರದೇಶದ ನರಸಿಂಹಾನಂದ್ ಸ್ವಾಮಿಯನ್ನು ಬಂಧಿಸದೆ ಇದ್ದರೆ ನಾವು ಮುಂದಿನ ದಿನಗಳಲ್ಲಿ ಜಿಲ್ಲಾ, ಮಟ್ಟದಲ್ಲಿ ಕಾರವಾರ ಚಲೋ ನಡೆಸಬೇಕಾಗುತ್ತದೆ ಎಂದು ಹೇಳಿದರು.

ತಂಝೀಮ್ ರಾಜಕೀಯ ಸಮಿತಿ ಸಂಚಾಲಕ ಇಮ್ರಾನ್ ಲಂಕಾ ಮನವಿ ಪತ್ರ ಓದಿದರು. ಸಹಾಯಕ ಆಯುಕ್ತ ಡಾ. ನಯಾನ ಎಂ. ಮನವಿ ಪತ್ರ ಸ್ವೀಕರಿಸಿ ಮನವಿಯನ್ನು ಮುಂದಿನ ಕ್ರಮಕ್ಕಾಗಿ ಕಳುಹಿಸಲಾಗುವುದು ಎಂದರು. ಪ್ರತಿಭಟನೆಯ ಸಂದರ್ಭದಲ್ಲಿ ತಂಝೀಮ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಖೀಬ್ ಎಂ.ಜೆ, ಭಟ್ಕಳ ಮುಸ್ಲಿಮ್ ಯುತ್ ಫಡರೇಶನ್ ಮಾಜಿ ಅಧ್ಯಕ್ಷೆ ಅಝೀಝುರ್ರಹ್ಮಾನ್ ನದಿ, ಪ್ರಧಾನ ಕಾರ್ಯದರ್ಶಿ ಮುಬಶ್ಮಿರ್ ಹಲಾರೆ ಸೇರಿದಂತೆ ವಿವಿಧ ಜಮಾಅತ್ ಮುಖಂಡರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
○○

  • santhosha ram

    “ಮೆಟ್ರೋ ನ್ಯೂಸ್ 7” ಚಾನೆಲ್ ಸ್ಥಳೀಯ ವಿಚಾರಗಳಿಗೆ ಸಂಬಂಧಪಟ್ಟ ಸುದ್ದಿಯಿಂದ ಹಿಡಿದು ರಾಜ್ಯಮಟ್ಟದ ಸುದ್ದಿಗಳನ್ನು ಜನರಿಗೆ ಮುಟ್ಟಿಸುವ ಸಣ್ಣ ಪ್ರಯತ್ನವಾಗಿದೆ. 🙏

    Related Posts

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ವರದಿ : ಲೋಕೇಶ್ ನಾಯ್ಕ .ಭಟ್ಕಳ. ಭಟ್ಕಳ .ನವೆಂಬರ್‌ 24.ಸರಕಾರಿ ತಾಲೂಕಾ ಆಸ್ಪತ್ರೆಯಲ್ಲಿ ಭಾನುವಾರ ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ…

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ವರದಿ: ಲೋಕೇಶ್ ನಾಯ್ಕ.ಭಟ್ಕಳ. ನಟ ಡಾಲಿ ಧನಂಜಯ  ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್. ಭಟ್ಕಳ: ನ.23ಮುರುಡೇಶ್ವರದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ವಿಶ್ವ ಮೀನುಗಾರಿಕಾ ದಿನಾಚರಣೆ(ಮತ್ರ್ಯಮೇಳ) ಕಾರ್ಯಕ್ರಮಕ್ಕೆ ಶನಿವಾರ ಆಗಮಿಸಿದ ಡಾಲಿ ಧನ ಧನಂಜಯ ನೇತ್ರಾಣಿ ದ್ವೀಪದಲ್ಲಿ ಸ್ಕೂಬ್ ಡೈವಿಂಗ್ ಮಾಡುವ…

    You Missed

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ