ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟ್ಯಾಂಕರ್ ರ್ಚಾಲಕ ಪ್ರಾಣಾಪಾಯದಿಂದ ಪಾರು

ವರದಿ  : ಲೋಕೇಶ್ ನಾಯ್ಕ್.  ಭಟ್ಕಳ.

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟ್ಯಾಂಕರ್
ಚಾಲಕ ಪ್ರಾಣಾಪಾಯದಿಂದ ಪಾರು.

ಭಟ್ಕಳ ಅ.19
ತಾಲೂಕಿನ ಮೂಡಭಟ್ಕಳದ ಸೇತುವೆ ಬಳಿ ಟ್ಯಾಂಕರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಸಂಭವಿಸಿದೆ.

ಶುಕ್ರವಾರ ಮಧ್ಯರಾತ್ರಿಯ ಸಮಯಕ್ಕೆ ಟ್ಯಾಂಕರ್ ಗೇರುಬೀಜದ ತೈಲ ತುಂಬಿಸಿಕೊಂಡು ಮಂಗಳೂರು ಕಡೆಯಿಂದ ಹರಿಯಾಣಕ್ಕೆ ಪ್ರಯಾಣಿಸುತ್ತಿದ್ದು ವೇಗ ತಡೆಯ ಕಾರಣಕ್ಕೆ ಮುಂದಿರುವ ವಾಹನ ಬ್ರೇಕ್ ಹಾಕಿದ್ದರಿಂದ ಟ್ಯಾಂಕರ್ ಚಾಲಕ ಕೂಡ ತಕ್ಷಣಕ್ಕೆ ಬ್ರೇಕ್ ಹಾಕಿದ ಪರಿಣಾಮವಾಗಿ ವಾಹನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿರುವ ಸುರಕ್ಷಾ ತಡೆಯನ್ನು ದಾಟಿ ಸೇತುವೆಯ ಪಕ್ಕ ಉರುಳಿ ಬಿದ್ದಿದ್ದು ಚಾಲಕ ಪ್ರಾಣಾಪಯದಿಂದ ಪಾರಾಗಿದ್ದಾನೆ.

ಈ ಭಾಗದಲ್ಲಿ ಅತೀ ಹೆಚ್ಚಿನ ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು. ಇದಕ್ಕೆ ಐ.ಆರ್.ಬಿ ಕಂಪನಿ ನಡೆಸುತ್ತಿರುವ ಅವೈಜ್ಞಾನಿಕ ಕಾಮಗಾರಿ ಕೂಡ ಕಾರಣವಾಗಿದೆ ಎಂಬುದು ಸ್ಥಳೀಯರ ಅಂಬೋಣ.

ಇದಕ್ಕೆ ಸಾಕ್ಷಿ ಎಂಬಂತೆ ದಕ್ಷಿಣದಿಂದ ಬರುವ ವಾಹನಗಳಿಗೆ ನಾಲ್ಕು ಪಥದ ರಸ್ತೆಯು ಮುಗಿದು ಒಂದು ಪಥದ ರಸ್ತೆ ಎದುರಾಗುತ್ತದೆ ಮತ್ತು ಉತ್ತರದಿಂದ ದಕ್ಷಿಣದ ಕಡೆಗೆ ಚಲಿಸುವ ವಾಹನಗಳಿಗೆ ತಕ್ಷಣಕ್ಕೆ ಒಂದು ಪಥದಿಂದ ನಾಲ್ಕು ಪಥದ ರಸ್ತೆ ಎದುರಾಗುವ ಕಾರಣ ಚಾಲಕರು ಗೊಂದಲಕ್ಕೆ ಒಳಗಾಗಿ ವಾಹನ ಅಪಘಾತಕ್ಕೆ ಇಡಾಗುತ್ತಿದೆ ಎನ್ನಲಾಗಿದೆ

ಅಷ್ಟೇ ಅಲ್ಲದೇ ಈ ಜಾಗದಲ್ಲಿ ತಿವೃ ತಿರುವು ಕೂಡ ಇದ್ದು ಪೇಟೆ ಮತ್ತು ಮುಟ್ಠಳ್ಳಿ ಭಾಗವನ್ನು ಸಂಪರ್ಕಿಸುವ ರಸ್ತೆ ಕೂಡ ಹಾದು ಹೋಗಿದ್ದು ಸರ್ಕಲ್ ನಲ್ಲಿ ವಾಹನ ದಟ್ಟಣೆ ಸಹಜವಾಗಿ ಇರುವ ಕಾರಣಕ್ಕೆ ಇಂತಹ ಅಪಘಾತಗಳು ಮೇಲಿಂದ ಮೇಲೆ ಸಂಭವಿಸುತ್ತಿದೆ ಎಂದು ಸಾರ್ವಜನಿಕರ ಅಭಿಪ್ರಾಯ.

ಉಡುಪಿ ಜಿಲ್ಲೆ ಮುಗಿಯುವವರೆಗೂ ಅಂದರೆ ಉತ್ತರ ಕನ್ನಡದ ಗಡಿಭಾಗ ಗೊರಟೆಯವರೆಗೂ ರಸ್ತೆ ಕಾಮಗಾರಿಯ ಜತೆ ಜತೆಗೆ ಫ್ಲೈ ಓವರ್, ಅಂಡರ್ ಪಾಸ್, ಸರ್ವಿಸ್ ರೋಡ್ ಗಳು ನಿರ್ಮಾಣಗೊಂಡಿದ್ದು ಉತ್ತರ ಕನ್ನಡ ಭಾಗಕ್ಕೆ ಕಾಲಿಡುತ್ತಿದ್ದಂತೆ ಅವಶ್ಯಕತೆ ಇರುವ ಭಾಗಗಳಲ್ಲಿ ಇಂತಹ ಕಾಮಗಾರಿಗಳು ನಡೆಸದೆ ಐ.ಆರ್.ಬಿ ಹಾಗೂ ನ್ಯಾಷನಲ್ ಹೈವೆ ಪ್ರಾಧಿಕಾರ ಅಕ್ಷರಶಃ ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದೆ ಎಂದು ಜನರು ಐ.ಆರ್.ಬಿ ಕಂಪನಿಯನ್ನು ಶಪಿಸುತ್ತಿದ್ದಾರೆ.

ಒಟ್ಟಿನಲ್ಲಿ ಇಗಲಾದರೂ ಐ.ಆರ್.ಬಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಉತ್ತರ ಕನ್ನಡ ಭಾಗದ ಚತುಷ್ಪದ ಹೆದ್ದಾರಿಯಲ್ಲಿ ನಡೆದ ಅವೈಜ್ಞಾನಿಕ ಕಾಮಗಾರಿಯನ್ನು ಸರಿಪಡಿಸಿ ಆದಷ್ಟು ಬೇಗ ಕಾಮಗಾರಿ ಮುಗಿಸಿ ಜನರ ಪ್ರಾಣದ ಜತೆ ಚೆಲ್ಲಾಟವಾಡುವುದನ್ನು ನಿಲ್ಲಿಸಬೇಕಾಗಿದೆ.

ಆಫಘಾತ ಸಂಭವಿಸಿದ ಸ್ಥಳಕ್ಕೆ ಭಟ್ಕಳ ಶಹರ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

  • santhosha ram

    “ಮೆಟ್ರೋ ನ್ಯೂಸ್ 7” ಚಾನೆಲ್ ಸ್ಥಳೀಯ ವಿಚಾರಗಳಿಗೆ ಸಂಬಂಧಪಟ್ಟ ಸುದ್ದಿಯಿಂದ ಹಿಡಿದು ರಾಜ್ಯಮಟ್ಟದ ಸುದ್ದಿಗಳನ್ನು ಜನರಿಗೆ ಮುಟ್ಟಿಸುವ ಸಣ್ಣ ಪ್ರಯತ್ನವಾಗಿದೆ. 🙏

    Related Posts

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ವರದಿ : ಲೋಕೇಶ್ ನಾಯ್ಕ .ಭಟ್ಕಳ. ಭಟ್ಕಳ .ನವೆಂಬರ್‌ 24.ಸರಕಾರಿ ತಾಲೂಕಾ ಆಸ್ಪತ್ರೆಯಲ್ಲಿ ಭಾನುವಾರ ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ…

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ವರದಿ: ಲೋಕೇಶ್ ನಾಯ್ಕ.ಭಟ್ಕಳ. ನಟ ಡಾಲಿ ಧನಂಜಯ  ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್. ಭಟ್ಕಳ: ನ.23ಮುರುಡೇಶ್ವರದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ವಿಶ್ವ ಮೀನುಗಾರಿಕಾ ದಿನಾಚರಣೆ(ಮತ್ರ್ಯಮೇಳ) ಕಾರ್ಯಕ್ರಮಕ್ಕೆ ಶನಿವಾರ ಆಗಮಿಸಿದ ಡಾಲಿ ಧನ ಧನಂಜಯ ನೇತ್ರಾಣಿ ದ್ವೀಪದಲ್ಲಿ ಸ್ಕೂಬ್ ಡೈವಿಂಗ್ ಮಾಡುವ…

    You Missed

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ