ವರದಿ: ಆರತಿ ಗಿಳಿಯಾರು ಉಡುಪಿ
ಕೋಟ: ಅ.19. ಕಸ್ತೂರಿ ರಂಗನ್ ವರದಿಯ ಬಗ್ಗೆ ಅಮಾಸೆಬೈಲ್ ನಲ್ಲಿ ಧರಣಿ ಮಾಡಿದರೆ ಪ್ರಯೋಜನ ಇಲ್ಲ, ಕಾನೂನಿನ ಅಡಿಯಲ್ಲಿ ರಾಜ್ಯ ಸರ್ಕಾರ ಈಗಾಗಲೇ ಸಾರ್ವಜನಿಕರಿಗೆ ತೊಂದರೆ ಆಗದಂತೆ ಹೇಳಿಕೆ ನೀಡಿದೆ.
ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರು ದೆಹಲಿಯ ಜಂತರ್ ಮಂತರ್ ನಲ್ಲಿ ಧರಣಿ ಮಾಡಲಿ ನಿಮ್ಮ ಜೊತೆ ಧರಣಿಗೆ ದೆಹಲಿಗೆ ನಾವು ಬರುತ್ತೇವೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ವಿಭಾಗದ ಉಪಾಧ್ಯಕ್ಷ ಕೋಟ ನಾಗೇಂದ್ರ ಪುತ್ರನ್ ಹೇಳಿದ್ದಾರೆ.
ನಿರಂತರ ಇಲ್ಲಸಲ್ಲದ ಹೇಳಿಕೆ ನೀಡಿ ಜನರನ್ನು ಗೊಂದಲಗೊಳಿಸುವುದನ್ನು ಬಿಟ್ಟು ಕೇಂದ್ರ ಸರ್ಕಾರದಿಂದ ಉಡುಪಿ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಚಿಂತನೆ ಮಾಡಿ.
ಉಡುಪಿ ಜಿಲ್ಲೆಯ ಕರಾವಳಿ ಭಾಗದಲ್ಲಿ ಕೆಲವು ಮುಖ್ಯ ಬಂದರುಗಳು ಹಾಳು ಬಿದ್ದು ಹೋಗಿದೆ.
ಕರಾವಳಿ ಜನರ ಮುಖ್ಯ ಉದ್ಯೋಗ ಮೀನುಗಾರಿಕೆ ಆಗಿರುವುದರಿಂದ ಜಿಲ್ಲೆಯ ಮೀನುಗಾರಿಕಾ ಉದ್ಯೋಗಕ್ಕೆ ಹೆಚ್ಚಿನ ಅಭಿವೃದ್ಧಿ ಮಾಡಿ. ನೀವು ಮೀನುಗಾರಿಕಾ ಮಂತ್ರಿ ಇದ್ದಾಗ ನೀವು ಅಭಿವೃದ್ಧಿ ಮಾಡುತ್ತೀರಿ ಎಂದು ನಿರೀಕ್ಷೆಯಲ್ಲಿದ್ದ ಉಡುಪಿ ಜನತೆಗೆ ನಿರಾಸೆ ಮಾಡಿದ್ದೀರಿ. ನೀವು
ಈಗ ಸಂಸದರು ರಾಜ್ಯ ಸರ್ಕಾರವನ್ನು ನಿಂದನೆ ಮಾಡುವುದನ್ನು ಬಿಟ್ಟು ನಿಮ್ಮ ಇದೇ ತರಹದ ಬಾಯಿ ಚಾಲಾಕಿನಿಂದ ಕರಾವಳಿಯನ್ನು ಅಭಿವೃದ್ಧಿ ಮಾಡಿ ಎಂದು ಕೋಟ ನಾಗೇಂದ್ರ ಪುತ್ರನ್ ಹೇಳಿದ್ದಾರೆ.
ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ
ವರದಿ : ಲೋಕೇಶ್ ನಾಯ್ಕ .ಭಟ್ಕಳ. ಭಟ್ಕಳ .ನವೆಂಬರ್ 24.ಸರಕಾರಿ ತಾಲೂಕಾ ಆಸ್ಪತ್ರೆಯಲ್ಲಿ ಭಾನುವಾರ ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ…