ಮೆಟ್ರೋ ವರದಿ
ಶಿವಮೊಗ್ಗ ಅ.25
ಅಂಗನವಾಡಿ ಕಾರ್ಯಕರ್ತೆಯರು ಸಮಾಜದ ವೈದ್ಯರಾಗಿ, ಚಿಕ್ಕ ಮಕ್ಕಳ ತಾಯಂದಿರಾಗಿ ಸೇವೆ ಒದಗಿಸುತ್ತಿದ್ದಾರೆ ಎಂದು ವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಸರ್ಜಿ ಅವರ ಸೇವೆಯನ್ನು ಶ್ಲಾಘಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ, ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಮಕ್ಕಳ ಆರೋಗ್ಯ, ದೈಹಿಕ, ಮಾನಸಿಕ ಬೆಳವಣಿಗೆ, ಪಾಲನೆ-ಪೋಷಣೆ ಹಾಗೂ ಮಹಿಳೆಯರ ಯೋಗಕ್ಷೇಮದಲ್ಲಿ ಆಯುರ್ವೇದದ ಪಾತ್ರ ಕುರಿತು ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕರಿಗೆ ಏರ್ಪಡಿಸಲಾಗಿದ್ದ ವರ್ಚುವಲ್ ತರಬೇತಿಯನ್ನು ಉದ್ಘಾಟಿಸಿ ಮಾತನಾಡಿದರು.
ವೈದ್ಯರು ಜನರಿಗೆ ರೋಗ ಬಂದ ಮೇಲೆ ಚಿಕಿತ್ಸೆ ನೀಡುತ್ತಾರೆ. ಆದರೆ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ರೋಗ ಬರುವ ಮುನ್ನವೇ ಮಹಿಳೆಯರು-ಮಕ್ಕಳನ್ನು ಉಪಚರಿಸಿ ರೋಗ ಬಾರದಂತೆ ತಡೆಯುತ್ತಾರೆ. ಇವರು ನಿಜವಾದ ಸಮಾಜದ ವೈದ್ಯರು ಮತ್ತು ಸರ್ಕಾರ ಹಾಗೂ ಜನರ ನಡುವೆ ಕೊಂಡಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಈ ವೈದ್ಯರು ಮಹಿಳೆಯರು-ಮಕ್ಕಳಿಗೆ ಅಗತ್ಯವಾದ ಪಾಲನೆ-ಪೋಷಣೆ, ಪೌಷ್ಟಿಕತೆ, ಆರೋಗ್ಯ ನಿರ್ವಹಣೆ ಬಗ್ಗೆ ತಿಳಿಯುವುದು ಅತಿ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಈ ತರಬೇತಿಯನ್ನು ಆಯೋಜಿಸಲಾಗಿದೆ ಎಂದರು
ಗಾಂಜಾ ಪೀಡಿತ ಪ್ರದೇಶಗಳಲ್ಲಿ ಶ್ವಾನ ತಪಾಸಣೆ ಮೂಲಕ ಎಚ್ಚರಿಸಿದ ಪೊಲೀಸ್ ಇಲಾಖೆ
ಮೆಟ್ರೋ ವರದಿ ಮೈಸೂರು ನ.21 ನಗರದಲ್ಲಿ ಗಾಂಜಾ ಪೀಡಿತ ಹೆಚ್ಚಾದ ಕಾರಣ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಜಾ ಪೀಡಿತ ಪ್ರದೇಶಗಳಾದ ಸುನ್ನಿ ಚೌಕ ಮತ್ತು ನರಸಿಂಹರಾಜ ಠಾಣಾ ವ್ಯಾಪ್ತಿಯ ಶಾಂತಿ ನಗರ ಹಾಗೂ ಉದಯಗಿರಿ ಠಾಣಾ ಸರಹದ್ದಿನಲ್ಲಿ ಟೀ ಅಂಗಡಿ…