ಮೆಟ್ರೋ ವರದಿ
ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಖಜಾನೆಯ ಉಪನಿರ್ದೇಶಕ, ಸಹಾಯಕ
ಲೋಕಾಯುಕ್ತ ಬಲೆಗೆ
ಉಡುಪಿ: ನಿವೃತ್ತ ಶಿಕ್ಷಕರೊಬ್ಬರಿಗೆ ಪಿಂಚಣಿ ಹಣವನ್ನು ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಖಜಾನೆಯ ಉಪನಿರ್ದೇಶಕ ಹಾಗೂ ಸಹಾಯಕನನ್ನು ಲೋಕಾಯುಕ್ತ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ನಿವೃತ್ತ ಶಿಕ್ಷಕ ಹಿತೇಂದ್ರ ಭಂಡಾರಿ ಎಂಬವರು ತಮ್ಮ ಪಿಂಚಣಿ ಹಣವನ್ನು ಪಡೆಯಲು ಕಳೆದ 5 ತಿಂಗಳಿನಿಂದ ಖಜಾನೆಯ ಉಪನಿರ್ದೇಶಕ ರವಿ ಕುಮಾರ್ ಮತ್ತು ಸಹಾಯಕ ರಾಘವೇಂದ್ರ ಎಂಬುವವರು ಸತಾಯಿಸುತ್ತಿದ್ದು 5000 ರೂ. ಲಂಚ ನೀಡುವಂತೆ ಒತ್ತಾಯಿಸಿದ್ದರೆಂದು ದೂರಲಾಗಿದೆ.
ಈ ಬಗ್ಗೆ ಹಿತೇಂದ್ರ ಭಂಡಾರಿಯವರು ಲೋಕಾಯುಕ್ತಕ್ಕೆ ದೂರು ನೀಡಿದ್ದು, ಅದರಂತೆ ಉಡುಪಿ ಪ್ರಭಾರ ಲೋಕಾಯುಕ್ತ ಡಿವೈಎಸ್ಪಿ ಮಂಜುನಾಥ್ ಹಾಗೂ ಮಂಗಳೂರು ಲೋಕಾಯುಕ್ತ ನಿರೀಕ್ಷಕರಾದ ಸುರೇಶ್ ಹಾಗೂ ಕೆ.ಎನ್.ಚಂದ್ರಶೇಖರ್ ಅವರನ್ನೊಳಗೊಂಡ ತಂಡ ಕಾರ್ಯಾಚರಣೆ ನಡೆಸಿ, ಲಂಚ ಸ್ವೀಕರಿಸುತ್ತಿದ್ದ ರವಿಕುಮಾರ್ ಮತ್ತು ರಾಘವೇಂದ್ರನನ್ನು ವಶಕ್ಕೆ ಪಡೆದುಕೊಂಡರು.
ಈ ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಸಿಬ್ಬಂದಿ ನಾಗರ ಸತೀಶ್, ಪ್ರಸನ್ನ, ರಮೇಶ್, ಸೂರಜ್, ಸುಧೀರ್, ರಾಘವೇಂದ್ರ, ಪುಷ್ಪಲತಾ, ಮಲ್ಲಿಕಾ ಭಾಗವಹಿಸಿದ್ದರು.
ಗಾಂಜಾ ಪೀಡಿತ ಪ್ರದೇಶಗಳಲ್ಲಿ ಶ್ವಾನ ತಪಾಸಣೆ ಮೂಲಕ ಎಚ್ಚರಿಸಿದ ಪೊಲೀಸ್ ಇಲಾಖೆ
ಮೆಟ್ರೋ ವರದಿ ಮೈಸೂರು ನ.21 ನಗರದಲ್ಲಿ ಗಾಂಜಾ ಪೀಡಿತ ಹೆಚ್ಚಾದ ಕಾರಣ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಜಾ ಪೀಡಿತ ಪ್ರದೇಶಗಳಾದ ಸುನ್ನಿ ಚೌಕ ಮತ್ತು ನರಸಿಂಹರಾಜ ಠಾಣಾ ವ್ಯಾಪ್ತಿಯ ಶಾಂತಿ ನಗರ ಹಾಗೂ ಉದಯಗಿರಿ ಠಾಣಾ ಸರಹದ್ದಿನಲ್ಲಿ ಟೀ ಅಂಗಡಿ…