ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

ವರದಿ : ಲೋಕೇಶ್ ನಾಯ್ಕ .ಭಟ್ಕಳ.

ಭಟ್ಕಳ .ನವೆಂಬರ್‌ 24.
ಸರಕಾರಿ ತಾಲೂಕಾ ಆಸ್ಪತ್ರೆಯಲ್ಲಿ ಭಾನುವಾರ ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ಏರ್ಪಡಿಸಲಾದ ವೈದ್ಯಕೀಯ ಶಿಬಿರವನ್ನು ಕೆ .ಎಸ್ .ಹೆಗ್ಡೆ ಆಸ್ಪತ್ರೆಯ ಖ್ಯಾತ ಎಲುಬು ಮತ್ತು ಕೀಲು ತಜ್ಞ ಡಾ. ವಿಕ್ರಮ್ ಶೆಟ್ಟಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಆಸ್ಪತ್ರೆಯ ಎಲಬು‌ ಹಾಗೂ ಕೀಲು ತಜ್ಞ ಡಾ. ವಿಕ್ರಮ ಶೆಟ್ಟಿ ಮಾತನಾಡಿ, ಮಂಗಳೂರಿನ ನೆರ್ಲಕಟ್ಟೆಯ ಕೆ.ಎಸ್ ಹೆಗಡೆ ಆಸ್ಪತ್ರೆ ಕಳೆದ 25 ವರ್ಷಗಳಿಂದ 1200  ಹಾಸಿಗೆಯೊಂದಿಗೆ ನಡೆಯುತ್ತಿರುವ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಾಗಿದ್ದು, ಸರ್ಕಾರಿ ಆಸ್ಪತ್ರೆಯ ನಂತರ ಅತ್ಯಂತ ಕಡಿಮೆ ದರಪಟ್ಟಿಯನ್ನು ಹೊಂದಿರುವ ಆಸ್ಪತ್ರೆ ನಮ್ಮದು ಎಂದು ಅತ್ಯಂತ ಹೆಮ್ಮೆಯಿಂದ ಹೇಳಲು ಬಯಸುತ್ತೇನೆ. 

ನಮ್ಮಲ್ಲಿ ಉತ್ತಮ ಗುಣಮಟ್ಟದ ಚಿಕಿತ್ಸೆಯನ್ನು ನೀಡಲಾಗುತ್ತದೆ. ಉತ್ತರ ಕನ್ನಡ ಜಿಲ್ಲೆ ವರ್ಷಕ್ಕೆ 20 ರಿಂದ 25 ಶಿಬಿರಗಳನ್ನು ಮಾಡುತ್ತಿದ್ದೇವೆ. ನಮಲ್ಲಿ ಆಯುಸ್ಮಾನ್, ಯಶಸ್ವಿನಿ ಕಾರ್ಡ್ ಗಳಂತೆ ಆರೋಗ್ಯ ಕಾರ್ಡ್ ,ವಿಮಾ ಯೊಜನೆಗಳನ್ನು ಕೂಡ ವಿತರಿಸಲಾಗುತ್ತದೆ. ಕಾರ್ಡ್ ಪಡೆದುಕೊಂಡವರು ಅದಕ್ಕೆ ಅನುಗುಣವಾಗಿ ಉಚಿತ ಚಿಕಿತ್ಸೆಯನ್ನು ಪಡೆದುಕೊಳ್ಳಬಹುದಾಗಿದೆ  ಎಂದರು.

ತಾಲೂಕಾ ಆಸ್ಪತ್ರೆಯ ವೈದ್ಯರಾದ ಡಾ. ಲಕ್ಷ್ಮೀಶ ನಾಯ್ಕ, ಹಾಗೂ ಕೆ.ಎಸ್ ಹೆಗಡೆ ಆಸ್ಪತ್ರೆಯ ಎಲುಬು ಮತ್ತು ಕೀಲು ತಜ್ಞರಾದ ಡಾ. ವಿಕ್ರಮ ಶೆಟ್ಟಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಬೆಳಿಗ್ಗೆ 8 ಗಂಟೆಯಿಂದ ಕೆ.ಎಸ್ ಹೆಗಡೆ ಆಸ್ಪತ್ರೆಯ ವೈದ್ಯರಾದ 
ತಜ್ಞ  ಡಾ. ವಿಕ್ರಮ ಶೆಟ್ಟಿ, ಡಾ.ಭರತ್ ನಾಯ್ಕ, ಡಾ.ಪ್ರಥ್ವಿ ಕೆ.ಪಿ ಮತ್ತು ಡಾ. ಅಭಿಜಿತ್ ಶೆಟ್ಟಿ ಶಿಬಿರದಲ್ಲಿ ಪಾಲ್ಗೊಂಡು ನೂರಾರು ಜನರನ್ನು ತಪಾಸಣೆ ನಡೆಸಿ ಸೂಕ್ತ ಸಲಹೆ ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ ಕ್ರೀಯಾಶೀಲ ಗೆಳೆಯರ ಸಂಘದ ಅಧ್ಯಕ್ಷ ದೀಪಕ್ ನಾಯ್ಕ, ಸಂಘದ ಎಲ್ಲಾ ಪದಾಧಿಕಾರಿಗಳು ಸರ್ವ ಸದಸ್ಯರು, ಹಾಗೂ ಭಟ್ಕಳ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಘವೇಂದ್ರ ಹೆಬ್ಬಾರ ಹಾಗೂ ಸಂಘದ ಪಧಾದಿಕಾರಿಗಳು ಸದಸ್ಯರು ಹಾಜರಿದ್ದರು.

  • santhosha ram

    “ಮೆಟ್ರೋ ನ್ಯೂಸ್ 7” ಚಾನೆಲ್ ಸ್ಥಳೀಯ ವಿಚಾರಗಳಿಗೆ ಸಂಬಂಧಪಟ್ಟ ಸುದ್ದಿಯಿಂದ ಹಿಡಿದು ರಾಜ್ಯಮಟ್ಟದ ಸುದ್ದಿಗಳನ್ನು ಜನರಿಗೆ ಮುಟ್ಟಿಸುವ ಸಣ್ಣ ಪ್ರಯತ್ನವಾಗಿದೆ. 🙏

    Related Posts

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ವರದಿ: ಲೋಕೇಶ್ ನಾಯ್ಕ.ಭಟ್ಕಳ. ನಟ ಡಾಲಿ ಧನಂಜಯ  ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್. ಭಟ್ಕಳ: ನ.23ಮುರುಡೇಶ್ವರದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ವಿಶ್ವ ಮೀನುಗಾರಿಕಾ ದಿನಾಚರಣೆ(ಮತ್ರ್ಯಮೇಳ) ಕಾರ್ಯಕ್ರಮಕ್ಕೆ ಶನಿವಾರ ಆಗಮಿಸಿದ ಡಾಲಿ ಧನ ಧನಂಜಯ ನೇತ್ರಾಣಿ ದ್ವೀಪದಲ್ಲಿ ಸ್ಕೂಬ್ ಡೈವಿಂಗ್ ಮಾಡುವ…

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ವರದಿ: ಲೋಕೇಶ್ ನಾಯ್ಕ .ಭಟ್ಕಳ ಭಟ್ಕಳ : ನವೆಂಬರ್‌ 23ರಾಜ್ಯದಲ್ಲಿ ನಡೆದ ಉಪಚುನಾವಣೆ ಮೂರು ಕ್ಷೇತ್ರಗಳಲ್ಲಿ ಕಾಂಗ್ರೇಸ್ ಪಕ್ಷ ಭರ್ಜರಿ ಜಯ. ಭಟ್ಕಳದಲ್ಲಿ  ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಂದ ಸಂಮ್ಸುದ್ದೀನ ಸರ್ಕಲ್ ನಲ್ಲಿ  ಪಟಾಕಿ ಸಿಡಿಸಿ ಸಂಭ್ರಮಾಚರಣೆ . ಈ ಸಂದರ್ಭದಲ್ಲಿ…

    Leave a Reply

    Your email address will not be published. Required fields are marked *

    You Missed

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಹಾಗೂ ತಾಲ್ಲೂಕು ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ನಟ ಡಾಲಿ ಧನಂಜಯ ನೇತ್ರಾಣಿ  ದ್ವೀಪದಲ್ಲಿ ಸ್ಕೂಬ್ ಡೈವಿಂಗ್

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ಉಪಚುನಾವಣೆ ಗೆಲುವಿನ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    ನಿಸರ್ಗ ಕ್ರಿಕೆಟರ್ಸ್ ಗಿಳಿಯಾರು ಇವರ ವತಿಯಿಂದ “ಡಾ|| ಪುನೀತ್ ರಾಜಕುಮಾರ್ ಕಪ್ 2024 ” ಕ್ರಿಕೆಟ್ ಪಂದ್ಯಾ ಕೂಟ

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    2024 ರ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ ಕಾರ್ಯಕ್ರಮ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ

    ಬಳ್ಪ ಎಣ್ಣೆಮಜಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ