ಮೈಸೂರು: ಆ 27
ಮೈಸೂರಲ್ಲಿ ಇತ್ತೀಚಿಗಷ್ಟೇ ಹೆಸರು ಪಡೆದಿದ್ದ ಕರಾವಳಿಯ ನಂಬಿಕೆಯ ದೈವವೇ ಎಂಬ ಕೊರಗಜ್ಜನ ದೇವಸ್ಥಾನಾವು ಮೈಸೂರಿನ ಕೂರ್ಗಳ್ಳಿಯಲ್ಲಿ ನಿರ್ಮಾಣವಾಗಿತ್ತು.
ದೇವಸ್ಥಾನದ ಪ್ರಧಾನ ಅರ್ಚಕರಾಗಿ ಮನೋಜ್ ಕುಮಾರ್ ರವರು ಪೂಜೆ ನಡೆಸುತ್ತಿದ್ದರು ಈಗ ಅದೇ ದೇವಸ್ಥಾನ ತೆರವಿಗೆ ಸಾಕಷ್ಟು ಹಲವು ಚರ್ಚೆಗೀಡಾಗಿದೆ
ಮೈಸೂರಿನಲ್ಲಿ ನಿರ್ಮಿಸಲಾಗಿದ್ದ ಕರಾವಳಿಯ ನಂಬಿಕೆ ಕೊರಗಜ್ಜನ ದೈವಸ್ಥಾನ ಸಾಕಷ್ಟು ಚರ್ಚೆಗೀಡಾಗಿತ್ತು. ಇದೀಗ ಮೈಸೂರು ಜಿಲ್ಲಾಡಳಿತ ಕೊರಗಜ್ಜ ದೈವಸ್ಥಾನವನ್ನು ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದೆ.
ಕೊರಗಜ್ಜನ ದೈವಸ್ಥಾನವನ್ನು ಯಾವುದೇ ವಿವಾದಕ್ಕೆ ಸಂಬಂಧಿಸಿದಂತೆ ತೆರವುಗೊಳಿಸಿಲ್ಲ, ಬದಲಾಗಿ ದೈವಸ್ಥಾನವನ್ನು ರಾಜಾಕಾಲುವೆ ಮೇಲೆ ನಿರ್ಮಿಸಲಾಗಿರುವ ಹಿನ್ನೆಲೆ, ಕೇರ್ಗಳ್ಳಿ ಗ್ರಾಮದ ಸರ್ವೇ ನಂಬರ್ 60 ರಲ್ಲಿ ಹಾದುಹೋಗಿದ್ದ ರಾಜ ಕಾಲುವೆ ಒತ್ತುವರಿ ಆಗಿದೆ ಎಂಬ ದೂರು ತಾಲೂಕು ಆಡಳಿತಕ್ಕೆ ಬಂದಿತ್ತು. ಅಕ್ರಮವಾಗಿ ದೈವಸ್ಥಾನ ನಿರ್ಮಿಸಲಾಗಿದೆ ಎಂಬ ಮಾಹಿತಿ ಇತ್ತು. ಈ ಕಾರಣ ಮೈಸೂರು ತಾಲೂಕು ಕೇರ್ಗಳ್ಳಿ ಗ್ರಾಮದಲ್ಲಿದ್ದ ಕೊರಗಜ್ಜ ದೈವಸ್ಥಾನವನ್ನು ಜೆಸಿಬಿಯ ಮೂಲಕ ತೆರವುಗೊಳಿಸಲಾಗಿದೆ.
ದಾಖಲೆಗಳನ್ನು ಪರಿಶೀಲಿಸಿ ಉಪವಿಭಾಗಾಧಿಕಾರಿ ಕೆ.ರಕ್ಷಿತ್ ಒತ್ತುವರಿಯಾಗಿರುವ ಬಗ್ಗೆ ಖಚಿತಪಡಿಸಿಕೊಂಡಿದ್ದಾರೆ. ಹಾಗೂ ಒತ್ತುವರಿಯನ್ನು ತೆರವುಗೊಳಿಸುವಂತೆ ಆದೇಶಿಸಿದ್ದಾರೆ.
ತಹಶೀಲ್ದಾರ್ ಕೆ.ಎಂ.ಮಹೇಶ್ ಕುಮಾರ್ ರವರು ಜಯಪುರ ಪೊಲೀಸರ ಭದ್ರತೆಯೊಂದಿಗೆ ಕಾರ್ಯಾಚರಣೆ ಮಾಡಿ ರಾಜಾಕಾಲುವೆಯ ಒತ್ತುವರಿ ಮಾಡಿಕೊಂಡು ನಿರ್ಮಿಸಲಾಗಿದ್ದ ಕೊರಗಜ್ಜ ದೈವಸ್ಥಾನವನ್ನು ನೆಲಸಮಗೊಳಿಸಿ ತೆರವುಗೊಳಿಸಿದ್ದಾರೆ.
ಈ ಸಮಯದಲ್ಲಿ ಜಯಪುರ ಹೋಬಳಿ ಉಪತಹಶೀಲ್ದಾರ್ ನಿಂಗಪ್ಪ, ರಾಜಸ್ವ ನಿರೀಕ್ಷಕರಾದ ಲೋಹಿತ್, ಹೋಬಳಿಯ ಗ್ರಾಮ ಆಡಳಿತ ಅಧಿಕಾರಿಗಳು, ಬೋಗಾದಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ನಗರಮಾಪನ ಯೋಜನಾಧಿಕಾರಿಗಳ ಕಚೇರಿ ಸಿಬ್ಬಂದಿ ಹಾಗೂ ಜಯಪುರ ಪೋಲೀಸ್ ಠಾಣೆ ಅಧಿಕಾರಿ ಹಾಗೂ ಸಿಬ್ಬಂದಿ ಭಾಗಿಯಾಗಿದ್ದರು.
ವರದಿ : ಮೆಟ್ರೋ ನ್ಯೂಸ್